ಬಳ್ಳಾರಿ: ಯುಗಾದಿ ಹಬ್ಬ (Ugadi Festival) ಭಾರತೀಯರ ಹೊಸ ವರ್ಷದ ಮೊದಲ ಹಬ್ಬ. ಈ ವಿಶೇಷ ದಿನದಂದು ವಿಜಯನಗರ ಜಿಲ್ಲೆಯ ಹಳ್ಳಿಯಲ್ಲಿ ಸೂರ್ಯನ ಕೌತುಕವೊಂದು ನಡೆಯುತ್ತೆ. ಸಾವಿರ ವರ್ಷ ಇತಿಹಾಸ ಇರುವ ಲಿಂಗಕ್ಕೆ ಸೂರ್ಯ ರಶ್ಮಿ ನೇರವಾಗಿ ಬೀಳುತ್ತದೆ. ಹೀಗಾಗಿ ಇಲ್ಲಿನ ಭಕ್ತರು ಯುಗಾದಿ ಹಬ್ಬವನ್ನು ವಿಶೇಷವಾಗಿ ಆಚರಿಸುತ್ತಾರೆ.
Advertisement
ಯುಗಾದಿ ಹಬ್ಬವನ್ನು ಹಿಂದು ಸಂಸ್ಕೃತಿ ಪ್ರಕಾರ, ಹೊಸ ವರ್ಷವಾಗಿ ಆಚರಣೆ ಮಾಡಲಾಗುತ್ತೆ. ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಹಿರೇಹಡಗಲಿ ಗ್ರಾಮದ ಕಟ್ಟಿ ಬಸವೇಶ್ವರ ದೇವಸ್ಥಾನದಲ್ಲಿ ಯುಗಾದಿ ಹಬ್ಬವನ್ನು ವಿಶೇಷವಾಗಿ ಆಚರಣೆ ಮಾಡಲಾಗುತ್ತದೆ. ಈ ದೇವಸ್ಥಾನದಲ್ಲಿ ಯುಗಾದಿ ವೇಳೆ ಎರಡ್ಮೂರು ದಿನಗಳ ಕಾಲ ಸೂರ್ಯ ರಶ್ಮಿ ಲಿಂಗದ ಮೇಲೆ ಬೀಳುತ್ತದೆ. ಆದರೆ ಹಬ್ಬದ ದಿನ ಮಾತ್ರ ಸೂರ್ಯೋದಯವಾಗುತ್ತಿದ್ದಂತೆ ನೇರವಾಗಿ ಹೊಂಗಿರಣಗಳು ಲಿಂಗದ ಮೇಲೆ ಬೀಳುತ್ತದೆ.
Advertisement
Advertisement
ಕಲ್ಯಾಣ ಚಾಲುಕ್ಯರ ಕಾಲದಲ್ಲಿ ಈ ದೇವಸ್ಥಾನವನ್ನು ನಿರ್ಮಾಣ ಮಾಡಲಾಗಿದೆ. ಸೂರ್ಯನ ಚಲನೆ ಆಧಾರದ ಮೇಲೆ ನಿರ್ಮಿಸಲಾಗಿರುವ ವಿಶಿಷ್ಟ ವಾಸ್ತುಶಿಲ್ಪ ಹೊಂದಿರುವ ಈ ದೇವಾಲಯ ಪ್ರತಿವರ್ಷ ಯುಗಾದಿಯ ದಿನ ಈ ಅಚ್ಚರಿಗೆ ಕಾರಣವಾಗುತ್ತಿದೆ. ದೇವಸ್ಥಾನದಲ್ಲಿ ಯುಗಾದಿ ಹಬ್ಬದ ದಿನದಂದು, ವಿಶೇಷ ಪೂಜೆ ಮಾಡಲಾಗುತ್ತದೆ. ನೂರಾರು ಭಕ್ತರು ಸೂರ್ಯನ ಮೊದಲ ಕಿರಣ ಶಿವಲಿಂಗದ ಮೇಲೆ ಬೀಳುವ ದೃಶ್ಯವನ್ನು ಕಣ್ತುಂಬಿಕೊಳ್ಳುತ್ತಾರೆ.
Advertisement
ವರ್ಷಕ್ಕೆ ಒಂದು ಬಾರಿ ನಡೆಯುವ ಈ ದೇವಸ್ಥಾನದ ಕುತೂಹಲವನ್ನು ಜನರು ಕಾತುರದಿಂದ ಎದರು ನೋಡುತ್ತಾರೆ. ಶತಮಾನದ ಇತಿಹಾಸ ಇರುವ ಈ ದೇವಾಲಯ ಖಗೋಳ ಕೌತುಕಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಸಮುದಾಯ ನಂಬದೇ ಅಭಿವೃದ್ಧಿ ಕೆಲಸದಿಂದ ಜಯ: ಇದು ಕಲಬುರಗಿ ವಿಶೇಷತೆ