ಕೋಲ್ಕತ್ತಾ: ಭಾರತ ಟಿ20 ತಂಡದಿಂದ ಹೊರಗುಳಿದಿರುವ ಸೂರ್ಯಕುಮಾರ್ ಯಾದವ್(Suryakumar Yadav) ದೇಶೀಯ ಕ್ರಿಕೆಟ್ನಲ್ಲಿ ಬ್ಯಾಟ್ ಮೂಲಕವೇ ಆಯ್ಕೆಗಾರರಿಗೆ ದಿಟ್ಟ ಉತ್ತರ ನೀಡುತ್ತಿದ್ದಾರೆ.
ಸೈಯದ್ ಮುಷ್ತಾಕ್ ಅಲಿ ಟ್ರೋಫಿ-2026ರ(Syed Mushtaq Ali Trophy) ಪಂದ್ಯದಲ್ಲಿ ಸೋಮವಾರ ಗುಜರಾತ್ ವಿರುದ್ಧ ಕೇವಲ 29 ಎಸೆತಗಳಲ್ಲಿ 82 ರನ್ ಸಿಡಿಸುವ ಮೂಲಕ ಮುಂಬೈ(Mumbai) ತಂಡಕ್ಕೆ 8 ವಿಕೆಟ್ಗಳ ಭರ್ಜರಿ ಗೆಲುವು ತಂದುಕೊಟ್ಟಿದ್ದಾರೆ.
ಕೋಲ್ಕತ್ತಾದ ಜಾದವ್ಪುರ ವಿಶ್ವವಿದ್ಯಾಲಯದ ಕ್ಯಾಂಪಸ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್(Gujarat) ನೀಡಿದ್ದ 198 ರನ್ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಮುಂಬೈ ಕೇವಲ 15.4 ಓವರ್ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು. ಹಿಂದಿನ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ 21 ಎಸೆತಗಳಲ್ಲಿ 60 ರನ್ ಚಚ್ಚಿದ್ದ ಸೂರ್ಯ ಈ ಪಂದ್ಯದಲ್ಲಿ ಮತ್ತಷ್ಟು ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಮೂಲಕ ಟೂರ್ನಿಯ ಮೊದಲ ಎರಡು ಪಂದ್ಯಗಳಲ್ಲಿ ಕೇವಲ 50 ಎಸೆತಗಳನ್ನು ಎದುರಿಸಿ ಒಟ್ಟು 142 ರನ್ ಹೊಡೆದಿದ್ದಾರೆ.
ಆರಂಭದಲ್ಲೇ ಎರಡು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಮುಂಬೈ ತಂಡಕ್ಕೆ ಆಸರೆಯಾಗಿ ಕ್ರೀಸ್ಗಿಳಿದ ಸೂರ್ಯಕುಮಾರ್ ಮೊದಲ ಒಂದೆರಡು ಎಸೆತಗಳಲ್ಲಿ ಎಚ್ಚರಿಕೆಯ ಆಟವಾಡಿದರು. ಆದರೆ ಒಮ್ಮೆ ಲಯ ಕಂಡುಕೊಂಡ ಬಳಿಕ ಗುಜರಾತ್ ಬೌಲರ್ಗಳನ್ನು ಮನಬಂದಂತೆ ದಂಡಿಸಿದ್ದಾರೆ.
ಮೂರನೇ ಓವರ್ನಲ್ಲಿ ವಿಶಾಲ್ ಜೈಸ್ವಾಲ್ ಬೌಲಿಂಗ್ನಲ್ಲಿ ಒಂದು ಸಿಕ್ಸರ್ ಹಾಗೂ ಎರಡು ಬೌಂಡರಿ ಬಾರಿಸುವ ಮೂಲಕ ರನ್ ಬೇಟೆ ಆರಂಭಿಸಿದ ಸೂರ್ಯ, ನಾಲ್ಕನೇ ಓವರ್ನಲ್ಲಿ ಅರ್ಜಾನ್ ನಾಗ್ವಾಸ್ವಾಲಾ ಅವರಿಗೆ ಎರಡು ಭರ್ಜರಿ ಸಿಕ್ಸರ್ ಬಾರಿಸಿದರು. ಬಳಿಕ ಹರ್ಷಲ್ ಪಟೇಲ್, ಹೇಮಂಗ್ ಪಟೇಲ್ ಮತ್ತು ರವಿ ಬಿಷ್ಣೋಯ್ ಅವರಿಗ ಬ್ಯಾಟ್ ಮೂಲಕ ಬಿಸಿ ಮುಟ್ಟಿಸಿದರು. 15 ಎಸೆತಗಳಲ್ಲಿ 37 ರನ್ ಗಳಿಸಿದ್ದ ಸೂರ್ಯ, ಹೇಮಂಗ್ ಪಟೇಲ್ ಬೌಲಿಂಗ್ನಲ್ಲಿ ಸಿಕ್ಸರ್ ಮತ್ತು ಬೌಂಡರಿ ಸಿಡಿಸಿ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.
9 ಬೌಂಡರಿ ಹಾಗೂ 7 ಭರ್ಜರಿ ಸಿಕ್ಸರ್ಗಳನ್ನೊಳಗೊಂಡ ಸೂರ್ಯಕುಮಾರ್ ಅವರ ಈ ಅಬ್ಬರದ ಇನ್ನಿಂಗ್ಸ್ಗೆ 11ನೇ ಓವರ್ನಲ್ಲಿ ರವಿ ಬಿಷ್ಣೋಯ್ ತೆರೆ ಎಳೆದರು. ಅಷ್ಟರಲ್ಲಾಗಲೇ ಮುಂಬೈ ಗೆಲುವು ಸುಲಭವಾಗಿತ್ತು. ಅಂತಿಮವಾಗಿ 15.4 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 201 ರನ್ ಸಿಡಿಸಿ ಜಯ ಸಾಧಿಸಿತು.
