ಮುಂಬೈ: ತುಳುನಾಡ ಅಳಿಯ, ಟೀಂ ಇಂಡಿಯಾದ ಟಿ20 ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಅವರ ಪತ್ನಿ ದೇವಿಶಾ ಶೆಟ್ಟಿ (Devika Shetty) ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಈ ಕುರಿತು ಸೂರ್ಯಕುಮಾರ್ ಯಾದವ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನಗು, ಕನಸುಗಳೊಂದಿಗೆ ನಾವು ಹೆಣ್ಣು ಮಗುವನ್ನು ಸ್ವಾಗತಿಸಿದ್ದೇವೆ ಎಂದು ಬರೆದುಕೊಂಡಿದ್ದಾರೆ.
View this post on Instagram
ಕಾಲೇಜು ದಿನಗಳಲ್ಲಿ ಪರಿಚಯವಾಗಿ ಪ್ರೀತಿಯಲ್ಲಿ ಬಿದ್ದಿದ್ದ ಈ ಜೋಡಿ 2016ರಲ್ಲಿ ವಿವಾಹವಾಗಿದ್ದರು. ಮದುವೆಯಾಗಿ 10 ವರ್ಷಗಳ ಬಳಿಕ ಈ ದಂಪತಿ ಗುರುವಾರ ತಮ್ಮ ಮೊದಲ ಮಗುವಿಗೆ ಸ್ವಾಗತ ಕೋರಿದ್ದಾರೆ. ಅಭಿಮಾನಿಗಳು ಹಾಗೂ ಕ್ರಿಕೆಟ್ ವಲಯದ ಸದಸ್ಯರಿಂದ ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳು ಹರಿದುಬರುತ್ತಿದೆ.

