ಮುಂಬೈ: ಟೀಂ ಇಂಡಿಯಾದ (Team India) ಸ್ಫೋಟಕ ಬ್ಯಾಟ್ಸ್‌ಮ್ಯಾನ್ ಸೂರ್ಯಕುಮಾರ್ ಯಾದವ್ (Suryakumar Yadav) ಟಿ20 (T20I) ಕ್ರಿಕೆಟ್‍ನಲ್ಲಿ 843 ಎಸೆತಗಳಲ್ಲಿ 1,500 ರನ್ ಚಚ್ಚಿ ನೂತನ ವಿಶ್ವ ದಾಖಲೆ ಬರೆದಿದ್ದಾರೆ.
Advertisement
ರಾಜ್‍ಕೋಟ್‍ನಲ್ಲಿ ಶ್ರೀಲಂಕಾ (Sri Lanka) ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಶತಕ ಸಿಡಿಸಿ ಸಂಭ್ರಮಿಸಿದ್ದರು. ಈ ಪಂದ್ಯದ ಮೂಲಕ ಕೇವಲ 843 ಎಸೆತಗಳಲ್ಲಿ 1,500 ರನ್ ಸಿಡಿಸಿದ ಮೊದಲ ಆಟಗಾರ ಎಂಬ ದಾಖಲೆಯನ್ನು ಬರೆದಿದ್ದಾರೆ. ಇದನ್ನೂ ಓದಿ: ಸೂರ್ಯನ ಸಿಡಿಲಬ್ಬರದ ಶತಕಕ್ಕೆ ಲಂಕಾ ಭಸ್ಮ – ಭಾರತಕ್ಕೆ ಟಿ20 ಸರಣಿ ಕಿರೀಟ
Advertisement
Advertisement
ಸೂರ್ಯಕುಮಾರ್ ಯಾದವ್ 45 ಪಂದ್ಯವಾಡಿ 43 ಇನ್ನಿಂಗ್ಸ್‌ಗಳಿಂದ 1,500 ರನ್ ಸಿಡಿಸಿದ್ದಾರೆ. ಈ ಮೂಲಕ ವೇಗವಾಗಿ 1,500 ರನ್ ಸಿಡಿಸಿದ ಭಾರತದ ಮೂರನೇ ಆಟಗಾರ ಎಂಬ ಮೈಲಿಗಲ್ಲನ್ನು ನೆಟ್ಟಿದ್ದಾರೆ. ಟೀಂ ಇಂಡಿಯಾ ಪರ ಈಗಾಗಲೇ ವಿರಾಟ್ ಕೊಹ್ಲಿ (Virat Kohli), ಕೆ.ಎಲ್ ರಾಹುಲ್ ಕೇವಲ 39 ಇನ್ನಿಂಗ್ಸ್‌ಗಳಿಂದ 1,500 ರನ್ ಪೇರಿಸಿದ್ದಾರೆ.
Advertisement
ಟಿ20 ಕ್ರಿಕೆಟ್‍ನಲ್ಲಿ 150ಕ್ಕೂ ಹೆಚ್ಚು ಸ್ಟ್ರೈಕ್‍ರೇಟ್‍ನಲ್ಲಿ 1,500 ರನ್ ಬಾರಿಸಿದ ಮೊದಲ ಆಟಗಾರ ಎಂಬ ಕೀರ್ತಿಗೆ ಸೂರ್ಯಕುಮಾರ್ ಯಾದವ್ ಪಾತ್ರರಾಗಿದ್ದಾರೆ. ಇದೀಗ ಸೂರ್ಯ 45 ಪಂದ್ಯವಾಡಿ 43 ಇನ್ನಿಂಗ್ಸ್‌ಗಳಿಂದ 3 ಶತಕ ಮತ್ತು 13 ಅರ್ಧಶತಕ ಸಹಿತ 1,578 ರನ್ ಸಿಡಿಸಿ ಗಮನಸೆಳೆದಿದ್ದಾರೆ. ಕಳೆದ ಒಂದು ವರ್ಷದಿಂದ ಸೂರ್ಯಕುಮಾರ್ ಯಾದವ್ ರನ್ ಹೊಳೆ ಹರಿಸುತ್ತಿದ್ದಾರೆ. ಇದನ್ನೂ ಓದಿ: 9 ಸಿಕ್ಸರ್, 7 ಬೌಂಡರಿ – 45 ಎಸೆತಗಳಲ್ಲೇ ಸ್ಫೋಟಕ ಶತಕ ಸಿಡಿಸಿದ ದಾಖಲೆ ವೀರ ಸೂರ್ಯ
ಇದಲ್ಲದೇ ಟೀಂ ಇಂಡಿಯಾಪರ ಟಿ20 ಕ್ರಿಕೆಟ್‍ನಲ್ಲಿ ಮೂರು ಶತಕ ಬಾರಿಸಿ ಅತೀ ಹೆಚ್ಚು ಶತಕ ಬಾರಿಸಿರುವ ಪಟ್ಟಿಯಲ್ಲಿ 2ನೇ ಸ್ಥಾನ ಪಡೆದಿದ್ದಾರೆ. ಟಿ20 ಕ್ರಿಕೆಟ್‍ನಲ್ಲಿ 4 ಶತಕ ಬಾರಿಸಿರುವ ರೋಹಿತ್ ಶರ್ಮಾ (Rohit Sharma) ಈ ಪಟ್ಟಿಯಲ್ಲಿ ಅಗ್ರಜನಾಗಿ ಕಾಣಿಸಿಕೊಂಡಿದ್ದಾರೆ.
ಸೂರ್ಯಕುಮಾರ್ ಯಾದವ್ ಸಿಡಿಲಬ್ಬರದ ಶತಕ ಹಾಗೂ ಸಂಘಟಿತ ಬೌಲಿಂಗ್ ಪ್ರದರ್ಶನದಿಂದಾಗಿ ಟೀಂ ಇಂಡಿಯಾ ಶ್ರೀಲಂಕಾ ವಿರುದ್ಧದ ಕೊನೆಯ ಟಿ20 ಪಂದ್ಯದಲ್ಲಿ 91 ರನ್‌ಗಳ ಭರ್ಜರಿ ಜಯ ಸಾಧಿಸಿತ್ತು. ಈ ಮೂಲಕ ಟೀಂ ಇಂಡಿಯಾ 2-1 ಅಂತರದಲ್ಲಿ ಟಿ20 ಸರಣಿ ಗೆದ್ದು ಕೊಂಡಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k