ಭೋಪಾಲ್: ಭೀಕರ ರಸ್ತೆ ಅಪಘಾತಕ್ಕೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕ್ರಿಕೆಟಿಗ ರಿಷಬ್ ಪಂತ್ (Rishabh Pant) ಶೀಘ್ರ ಗುಣಮುಖರಾಗುವಂತೆ ಟೀಂ ಇಂಡಿಯಾ (Team India) ಆಟಗಾರರು ಸೋಮವಾರ ಉಜ್ಜಯಿನಿಯ ಪ್ರಸಿದ್ಧ ಮಹಾಕಾಳೇಶ್ವರ ದೇವಸ್ಥಾನದಲ್ಲಿ (Ujjain Mahakaleswar Temple) ಪ್ರಾರ್ಥನೆ ಸಲ್ಲಿಸಿದ್ದಾರೆ.
Madhya Pradesh | Indian cricketers Suryakumar Yadav, Kuldeep Yadav, and Washington Sundar visited Mahakaleshwar temple in Ujjain and performed Baba Mahakal's Bhasma Aarti. pic.twitter.com/nnyFRLMbfa
— ANI (@ANI) January 23, 2023
Advertisement
ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಈಗಾಗಲೇ 2 ಪಂದ್ಯಗಳನ್ನು ಗೆದ್ದು ಸರಣಿ ವಶಪಡಿಸಿಕೊಂಡಿರುವ ಭಾರತ ತಂಡ ಜನವರಿ 24ರಂದು ಅಂತಿಮ ಏಕದಿನ ಪಂದ್ಯವನ್ನಾಡಲಿದೆ. ಇದಕ್ಕೂ ಮುನ್ನ ಮಧ್ಯಪ್ರದೇಶದ (Madhya Pradesh) ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನಕ್ಕೆ (Ujjain Mahakaleswar Temple) ಭೇಟಿ ನೀಡಿ ಟೀಂ ಇಂಡಿಯಾ ಆಟಗಾರರು ಪ್ರಾರ್ಥನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: `ಈ ಇಬ್ಬರು ವೀರರನ್ನು ಸ್ಮರಿಸಲೇಬೇಕು’ – ರಿಷಬ್ ಪಂತ್ ಮೊದಲ ರಿಯಾಕ್ಷನ್
Advertisement
Advertisement
ಸ್ಫೋಟಕ ಬ್ಯಾಟ್ಸ್‌ಮ್ಯಾನ್ ಸೂರ್ಯಕುಮಾರ್ ಯಾದವ್, ಸ್ಪಿನ್ ಬೌಲರ್ ಕುಲ್‌ದೀಪ್ ಯಾವದ್ ಹಾಗೂ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಸೋಮವಾರ ಬೆಳಗ್ಗೆ ಮಹಾಕಾಳೇಶ್ವರ ದೇವಸ್ಥಾನಕ್ಕೆ ತೆರಳಿ `ರಿಷಬ್ ಪಂತ್’ ಆದಷ್ಟು ಬೇಗ ಗುಣಮುಖರಾಗಿ ಟೀಂ ಇಂಡಿಯಾಕ್ಕೆ ಮರಳುವಂತೆ ಭಕ್ತಿಭಾವದಿಂದ ಪ್ರಾರ್ಥನೆ ಸಲ್ಲಿಸಿದ್ದಾರೆ.
Advertisement
ಸಾಂಪ್ರದಾಯಿಕ ಧೋತಿ, ಅಂಗವಸ್ತ್ರ ಉಡುಗೆ ತೊಟ್ಟು ಮುಂಜಾನೆ ನಡೆದ ಶಿವನ `ಭಸ್ಮ ಆರತಿ’ಯಲ್ಲೂ (Bhasma Aarti) ಭಾಗಿಯಾಗಿದ್ದಾರೆ. ಇದನ್ನೂ ಓದಿ: ಕ್ರಿಕೆಟ್ ಬಳಿಕ ಹಾಕಿಯಲ್ಲೂ ಭಾರತಕ್ಕೆ ಕಂಟಕವಾದ ನ್ಯೂಜಿಲೆಂಡ್ – ಮರೆಯಲಾಗದ ಆ 3 ಸೋಲು
ಈ ಕುರಿತು ಪ್ರತಿಕ್ರಿಯಿಸಿದ ಸೂರ್ಯಕುಮಾರ್ ಯಾದವ್, `ರಿಷಬ್ ಪಂತ್ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾವು ಪ್ರಾರ್ಥಿಸಿದ್ದೇವೆ. ಅವರ ಪುನರಾಗಮನ ನಮಗೆ ಬಹಳ ಮುಖ್ಯ. ನಾವು ಈಗಾಗಲೇ ನ್ಯೂಜಿಲೆಂಡ್ ವಿರುದ್ಧದ ಸರಣಿ ಗೆದ್ದಿದ್ದೇವೆ. ಅವರ ವಿರುದ್ಧದ ಅಂತಿಮ ಪಂದ್ಯ ಎದುರು ನೋಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ರಿಷಬ್‌ಗೆ ಏನಾಗಿತ್ತು?: 2022ರ ಡಿಸೆಂಬರ್ 30ರಂದು ಟೀಂ ಇಂಡಿಯಾ ಆಟಗಾರ ರಿಷಬ್ ಪಂತ್ ಅವರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿತ್ತು. ಉತ್ತರಾಖಂಡದಲ್ಲಿರುವ ತಮ್ಮ ನಿವಾಸಕ್ಕೆ ತೆರಳುತ್ತಿದ್ದಾಗ ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು, ಪಂತ್ ಗಂಭೀರವಾಗಿ ಗಾಯಗೊಂಡಿದ್ದರು. ರಿಷಭ್ ಪಂತ್ ಅವರ ತಲೆ (ಹಣೆಯ ಭಾಗ), ಕಾಲಿಗೆ ಗಂಭೀರ ಪೆಟ್ಟಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಇದೀಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k