ದುಬೈ: ಐಸಿಸಿ ಬಿಡುಗಡೆ ಮಾಡಿರುವ ನೂತನ ಐಸಿಸಿ ಟಿ20 ಬ್ಯಾಟಿಂಗ್ ರ್‍ಯಾಕಿಂಗ್‌ನಲ್ಲಿ ಭಾರತದ ಆಟಗಾರ ಸೂರ್ಯ ಕುಮಾರ್ ಯಾದವ್ ಜೀವನ ಶ್ರೇಷ್ಠ ಎರಡನೇ ಸ್ಥಾನಕ್ಕೇರಿದ್ದಾರೆ.
Advertisement
ನೂತನ ರ್‍ಯಾಕಿಂಗ್‌ನಲ್ಲಿ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ 818 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಅವರಿಂದ ಕೇವಲ 2 ಅಂಕಗಳ ಹಿನ್ನಡೆಯಲ್ಲಿರುವ ಸೂರ್ಯ ಕುಮಾರ್ ಯಾದವ್ ಒಟ್ಟು 816 ಅಂಕಗಳೊಂದಿಗೆ 2ನೇ ಸ್ಥಾನ ಪಡೆದಿದ್ದಾರೆ. ಈ ಮೂಲಕ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ ನಂಬರ್ 1 ಸ್ಥಾನಕ್ಕೆ ತೀವ್ರ ಪೈಪೋಟಿ ನೀಡುತ್ತಿದ್ದಾರೆ. ಇದನ್ನೂ ಓದಿ: `ಸೂರ್ಯ’ನ ಶಾಖಕ್ಕೆ ಕರಗಿದ ವಿಂಡೀಸ್ – ಭಾರತಕ್ಕೆ 7 ವಿಕೆಟ್‌ಗಳ ಭರ್ಜರಿ ಜಯ
Advertisement
Advertisement
3ನೇ ಸ್ಥಾನದಲ್ಲಿ 794 ಅಂಕಗಳೊಂದಿಗೆ ಪಾಕಿಸ್ತಾನ ತಂಡದ ಮೊಹಮ್ಮದ್ ರಿಜ್ವಾನ್ ಇದ್ದು, ದಕ್ಷಿಣ ಆಫ್ರಿಕಾದ ಏಡನ್ ಮಾರ್ಕ್ರಾಮ್ 788 ಅಂಕಗಳೊಂದಿಗೆ 4 ಮತ್ತು ಡೇವಿಡ್ ಮಲಾನ್ 731 ಅಂಕಗಳೊಂದಿಗೆ 5ನೇ ಸ್ಥಾನ ಪಡೆದಿದ್ದಾರೆ. ಇದನ್ನೂ ಓದಿ: CWG 2022: ಲಾನ್ ಬಾಲ್ಸ್‌ನಲ್ಲಿ ಚಿನ್ನ – ವರ್ಕೌಟ್ ಆಯ್ತು ಧೋನಿ ಟಿಪ್ಸ್!
Advertisement
???? Suryakumar's rapid rise
???? Hosein makes big gains
???? Markram breaks into the top ????
Some big movements in the @MRFWorldwide ICC Men's T20I Player Rankings ????
— ICC (@ICC) August 3, 2022
ವೆಸ್ಟ್ ಇಂಡೀಸ್‍ನಲ್ಲಿ ನಡೆಯುತ್ತಿರುವ ಟಿ20 ಸರಣಿಯ ಆರಂಭಿಕ ಮೂರು ಪಂದ್ಯಗಳಲ್ಲಿ ಸೂರ್ಯಕುಮಾರ್ ಯಾದವ್ 111 ರನ್ ಕಲೆ ಹಾಕಿದ್ದು ಐಸಿಸಿ ಬ್ಯಾಟಿಂಗ್ ರ್‍ಯಾಕಿಂಗ್ ಏರಿಕೆಗೆ ಕಾರಣವಾಗಿದೆ. ಅದರಲ್ಲೂ ಮೂರನೇ ಟಿ20 ಪಂದ್ಯದಲ್ಲಿ ಕೇವಲ 44 ಎಸೆತಗಳಲ್ಲಿ ಅಜೇಯ 76 ರನ್ ಸಿಡಿಸಿದ್ದರು. ಆ ಮೂಲಕ ಟಿ20 ಬ್ಯಾಟಿಂಗ್ ಶ್ರೇಯಾಂಕದಲ್ಲಿ 816 ಅಂಕಗಳೊಂದಿಗೆ ಎರಡನೇ ಸ್ಥಾನಕ್ಕೇರಿ ಟಿ20 ಕ್ರಿಕೆಟ್‍ನ ರನ್ ಮೆಷಿನ್ ಆಗಿ ಹೊರಹೊಮ್ಮಿದ್ದಾರೆ.