– ಟೀಂ ಇಂಡಿಯಾ ಏಕದಿನ ತಂಡಕ್ಕೆ ಕನ್ನಡಿಗ ಕೆ.ಎಲ್ ರಾಹುಲ್ ಕಂಬ್ಯಾಕ್
– 2024ರ ಟಿ20 ವಿಶ್ವಕಪ್ ವಿಜೇತ ತಂಡದ ಉಪನಾಯಕ ಪಾಂಡ್ಯಗಿಲ್ಲ ಪಟ್ಟ!
ಮುಂಬೈ: ಇದೇ ಜುಲೈ 27ರಿಂದ ಶ್ರೀಲಂಕಾ (Sri Lanka) ವಿರುದ್ಧ ನಡೆಯಲಿರುವ ದ್ವಿಪಕ್ಷೀಯ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಬಲಿಷ್ಠ ಭಾರತ ತಂಡವನ್ನು ಪ್ರಕಟಿಸಿದೆ. ಈ ಪ್ರವಾಸವು ಮೂರು ಪಂದ್ಯಗಳ ಅಂತಾರಾಷ್ಟ್ರೀಯ ಟಿ20 ಸರಣಿ, ಮೂರು ಪಂದ್ಯಗಳ ಏಕದಿನ ಸರಣಿಯೂ ಆಯೋಜನೆಗೊಂಡಿದೆ.
🆙 Next 👉 Sri Lanka 🇱🇰#TeamIndia are back in action with 3 ODIs and 3 T20Is#INDvSL pic.twitter.com/aRqQqxjjV0
— BCCI (@BCCI) July 18, 2024
Advertisement
ಟಿ20 ತಂಡಕ್ಕೆ ಸೂರ್ಯಕುಮಾರ್ ಯಾದವ್, ಏಕದಿನ ಪಂದ್ಯಕ್ಕೆ ರೋಹಿತ್ ಶರ್ಮಾ ನಾಯಕನಾಗಿ ಮುಂದುವರಿಸಿದ್ದಾರೆ. ಟಿ20 ವಿಶ್ವಕಪ್ ವಿಜೇತ ತಂಡದಲ್ಲಿ ಉಪನಾಯಕನಾಗಿದ್ದ ಹಾರ್ದಿಕ್ ಪಾಂಡ್ಯ ಅವರ ಬದಲಿಗೆ ಸೂರ್ಯಕುಮಾರ್ ಯಾದವ್ಗೆ ಬಿಸಿಸಿಐ ಪಟ್ಟಕಟ್ಟಿದೆ. ಇದನ್ನೂ ಓದಿ: ಭದ್ರತಾ ಕಾರಣಕ್ಕಾಗಿ ಭಾರತ ಸರ್ಕಾರ ಅನುಮತಿ ನಿರಾಕರಿಸಿದ್ರೆ ಬಿಸಿಸಿಐ ಬರೆದುಕೊಡಲಿ – ಪಾಕ್ ಪಟ್ಟು!
Advertisement
Advertisement
ಮುಂಬರುವ ಪ್ರವಾಸವು ನೂತನ ಮುಖ್ಯಕೋಚ್ ಕೋಚ್ ಗೌತಮ್ ಗಂಭೀರ್ ಅವರಿಗೆ ಮೊದಲ ಸವಾಲಾಗಿದೆ. ಈ ಸರಣಿಯೊಂದಿಗೆ ತಮ್ಮ ತರಬೇತಿಯನ್ನು ಪ್ರಾರಂಭಿಸಲು ಸಜ್ಜಾಗಿದ್ದಾರೆ. ಟಿ20 ತಂಡಕ್ಕೆ ಶುಭಮನ್ ಗಿಲ್ ಉಪನಾಯಕರಾಗಿದ್ದಾರೆ. ಹಾರ್ದಿಕ್ ಪಾಂಡ್ಯ ಕೂಡ ಸರಣಿಗೆ ಲಭ್ಯರಾಗಿದ್ದಾರೆ. ಇದರೊಂದಿಗೆ ವಾಷಿಂಗ್ಟನ್ ಸುಂದರ್, ಖಲೀಲ್ ಅಹ್ಮದ್ ಸೇರಿದಂತೆ ಅನೇಕ ಯುವ ಆಟಗಾರರು ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಏಕದಿನ ಸರಣಿಯಲ್ಲಿ ಕೆ.ಎಲ್ ರಾಹುಲ್ ಸೇರಿದಂತೆ ರಿಷಭ್ ಪಂತ್ ಜೊತೆಗೆ ಸಂಜು ಸ್ಯಾಮ್ಸನ್ ವಿಕೆಟ್ ಕೀಪರ್ ಆಗಿ ಅವಕಾಶ ಪಡೆದಿದ್ದಾರೆ.
Advertisement
ಏಕದಿನ ತಂಡಕ್ಕೆ ವಿರಾಟ್ ಕೊಹ್ಲಿ ಮರಳಿದ್ದಾರೆ. ಕೆ.ಎಲ್ ರಾಹುಲ್ ಇಲ್ಲಿ ವಿಕೆಟ್ ಕೀಪರ್ ಕೋಟಾದಲ್ಲಿ ಅವಕಾಶ ಪಡೆದಿದ್ದಾರೆ. ವಾಷಿಂಗ್ಟನ್ ಸುಂದರ್, ಖಲೀಲ್ ಅಹಮದ್ , ಹರ್ಷಿತ್ ರಾಣಾ ಬೌಲಿಂಗ್ನಲ್ಲಿ ಅವಕಾಶ ಪಡೆದಿದ್ದಾರೆ. ರಿಯಾನ್ ಪರಾಗ್ ಏಕದಿನ ಮಾದರಿಯಲ್ಲಿ ತಂಡ ಸೇರಿದ್ದಾರೆ. ಎರಡೂ ತಂಡಗಳಿಗೆ ಜಸ್‌ಪ್ರೀತ್ ಬುಮ್ರಾ ಅಲಭ್ಯರಾಗಿದ್ದಾರೆ. ಇದನ್ನೂ ಓದಿ: Wimbledon Champion: ಸತತ 2ನೇ ಬಾರಿಗೆ ಅಲ್ಕರಾಜ್‌ಗೆ ವಿಂಬಲ್ಡನ್ ಕಿರೀಟ – ಜೊಕೊವಿಕ್‌ಗೆ ಮತ್ತೆ ಸೋಲು!
ಭಾರತ ಟಿ20 ತಂಡ:
ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಅರ್ಷ್‌ದೀಪ್ ಸಿಂಗ್, ಖಲೀಲ್ ಅಹ್ಮದ್, ಮೊಹಮ್ಮದ್ ಶಮಿ. ಸಿರಾಜ್.
ಏಕದಿನ ತಂಡ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಕೆ.ಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ. ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷ್‌ದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ.