ಮುಂಬೈ: ವಿಶ್ವಕಪ್ ಕ್ರಿಕೆಟ್ (World Cup Cricket) ಮುಗಿದ ಬೆನ್ನಲ್ಲೇ ಆಸ್ಟ್ರೇಲಿಯಾ (Australia) ವಿರುದ್ಧದ ಐದು ಟಿ20 (T20) ಪಂದ್ಯಗಳ ಸರಣಿಗೆ 15 ಮಂದಿ ಸದಸ್ಯರ ಟೀಂ ಇಂಡಿಯಾ (Team India) ತಂಡವನ್ನು ಬಿಸಿಸಿಐ (BCCI) ಪ್ರಕಟಿಸಿದೆ.
ಸ್ಫೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ (Suryakumar Yadav) ತಂಡದ ನಾಯಕರಾಗಿದ್ದು, ವಿಶ್ವಕಪ್ ಆಡಿರುವ ಭಾರತ ತಂಡದ ಎಲ್ಲ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಆದರೆ ಸೂರ್ಯಕುಮಾರ್ ಯಾದವ್ ಜೊತೆಗೆ ಇಶಾನ್ ಕಿಶನ್ ಮತ್ತು ಕನ್ನಡಿಗ ಪ್ರಸಿದ್ಧ್ ಕೃಷ್ಣಗೆ ಸ್ಥಾನ ಸಿಕ್ಕಿದೆ.
Advertisement
Advertisement
ಶ್ರೇಯಸ್ ಅಯ್ಯರ್ (Shreyas Iyer) ಕೊನೆಯ ಎರಡು ಪಂದ್ಯ ಆಡಲಿದ್ದು, ಈ ಅವಧಿಯಲ್ಲಿ ಉಪನಾಯಕನ ಸ್ಥಾನ ತುಂಬಲಿದ್ದಾರೆ. ಮೊದಲ ಮೂರು ಪಂದ್ಯಗಳಿಗೆ ಏಷ್ಯನ್ ಗೇಮ್ಸ್ನ ಕ್ರಿಕೆಟ್ ತಂಡದ ನಾಯಕತ್ವ ವಹಿಸಿದ್ದ ಋತುರಾಜ್ ಗಾಯಕ್ವಾಡ್ಗೆ ಉಪನಾಯಕನ ಸ್ಥಾನ ನೀಡಲಾಗಿದೆ. ಇದನ್ನೂ ಓದಿ: ಬೌಲಿಂಗ್‌ನಲ್ಲೂ ಕಮಾಲ್ – ರೋಹಿತ್ ಫಸ್ಟ್, ಶಮಿ ಸೆಕೆಂಡ್
Advertisement
ಈ ಸರಣಿಗೆ ಭಾರತದ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ (VVS Laxman) ಅವರನ್ನು ಮುಖ್ಯ ಕೋಚ್ ಆಗಿ ನೇಮಿಸಲಾಗಿದೆ. ಐರ್ಲೆಂಡ್ ಸರಣಿ ಆಡಿದ ಬಹುಪಾಲು ಆಟಗಾರರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
Advertisement
ರಾಹುಲ್ ದ್ರಾವಿಡ್ (Rahul Dravid) ಅವರ ಅಧಿಕಾರಾವಧಿ ಅಧಿಕೃತವಾಗಿ ವಿಶ್ವಕಪ್ನೊಂದಿಗೆ ಕೊನೆಯಾಗಿದೆ. ಮುಂದೆಯೂ ದ್ರಾವಿಡ್ ಕೋಚ್ ಆಗಿ ಮುಂದುವರೆಯುತ್ತಾರಾ ಎಂಬ ಪ್ರಶ್ನೆಗೆ ಬಿಸಿಸಿಐ ಕಡೆಯಿಂದ ಯಾವುದೇ ಉತ್ತರ ಸಿಕ್ಕಿಲ್ಲ ದನ್ನೂ ಓದಿ: ಇದೇ ಕೊನೆಯಲ್ಲ, ನಾವು ಕಪ್ ಗೆಲ್ಲೋವರೆಗೂ ಇದು ಮುಗಿಯಲ್ಲ – ಗಿಲ್ ಭಾವುಕ
ಟೀಂ ಇಂಡಿಯಾ ಸದಸ್ಯರು
ಸೂರ್ಯಕುಮಾರ್ ಯಾದವ್ (ನಾಯಕ), ಋತುರಾಜ್ ಗಾಯಕ್ವಾಡ್ (ಉಪನಾಯಕ), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ಮುಖೇಶ್ ಕುಮಾರ್ ಇದನ್ನೂ ಓದಿ: ಅಪ್ಪಿಕೊಂಡು ಸಮಾಧಾನ ಹೇಳಿದ ಮೋದಿ – ಮತ್ತೆ ನಾವು ಪುಟಿದೇಳುತ್ತೇವೆ ಎಂದ ಶಮಿ
ಯಾವ ದಿನ ಎಲ್ಲಿ ಪಂದ್ಯ?
ನ.23 – ವಿಶಾಖಪಟ್ಟಣ
ನ.26 – ತಿರುವನಂತಪುರಂ
ನ.28 – ಗುವಾಹಟಿ
ಡಿ.1 – ರಾಯ್‌ಪುರ
ಡಿ.3 – ಬೆಂಗಳೂರು