ನವದೆಹಲಿ: ಬಿಜೆಪಿ ನಾಯಕಿ, ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಅವರ ಅಂತ್ಯಕ್ರಿಯೆ ಹಿಂದೂ ಸಂಪ್ರದಾಯದಂತೆ ಇಂದು ದೆಹಲಿಯ ಲೋಧಿ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
ಸುಷ್ಮಾ ಸ್ವರಾಜ್ ಅವರ ಪುತ್ರಿ ಬನ್ಸುರಿ ಸ್ವರಾಜ್ ಅವರು ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದರು. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ಸಚಿವ ರಾಜನಾಥ್ ಸಿಂಗ್, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೇರಿದಂತೆ ಅನೇಕ ಬಿಜೆಪಿ ನಾಯಕರು ಅಂತ್ಯ ಸಂಸ್ಕಾರದ ವೇಳೆ ಉಪಸ್ಥಿತರಿದ್ದರು.
Advertisement
#WATCH Delhi: Prime Minister Narendra Modi, VP Venkaiah Naidu, senior BJP leader LK Advani, Union Ministers Amit Shah, Rajnath Singh & others leave from Lodhi Crematorium. #SushmaSwaraj pic.twitter.com/NvThkFueR2
— ANI (@ANI) August 7, 2019
Advertisement
ರಾಜ್ಯ ಬಿಜೆಪಿ ನಾಯಕರಾದ ಸಿಎಂ ಯಡಿಯೂರಪ್ಪ, ಆರ್. ಅಶೋಕ್, ಜಗದೀಶ್ ಶೆಟ್ಟರ್, ವಿ.ಸೋಮಣ್ಣ, ಗೋವಿಂದ್ ಕಾರಜೋಳ, ಬಸವರಾಜ್ ಬೊಮ್ಮಾಯಿ ಅವರು ಸುಷ್ಮಾ ಸ್ವರಾಜ್ ಅಂತಿಮ ದರ್ಶನ ಪಡೆದರು. ತೇಜಸ್ವಿನಿ ಅನಂತಕುಮಾರ್ ಅವರು ಕುಟುಂಬ ಸಮೇತ ಸುಷ್ಮಾ ಸ್ವರಾಜ್ ಅಂತ್ಯ ಕ್ರಿಯೆಯಲ್ಲಿ ಭಾಗವಹಿಸಿದ್ದರು.
Advertisement
ಸುಷ್ಮಾ ಸ್ವರಾಜ್ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದರು. ತಕ್ಷಣವೇ ಅವರನ್ನು ರಾತ್ರಿ 9.35ಕ್ಕೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿ, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ರಾತ್ರಿ 10 ಗಂಟೆ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದರು. ಬಳಿಕ ಅವರ ಪಾರ್ಥಿವ ಶರೀರವನ್ನು ಜನಪತ್ ರಸ್ತೆಯ ಧವನ್ ದೀಪ್ ಕಟ್ಟಡದ ನಿವಾಸದಲ್ಲಿ ಇರಿಸಲಾಗಿತ್ತು.
Advertisement
Delhi: Bansuri Swaraj, daughter of former External Affairs Minister #SushmaSwaraj, performs her last rites pic.twitter.com/ymj82SjG1i
— ANI (@ANI) August 7, 2019
ಸುಷ್ಮಾ ಸ್ವರಾಜ್ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಹಾಗೂ ಧವನ್ ದೀಪ್ ನಿವಾಸಕ್ಕೆ ಬಿಜೆಪಿ ನಾಯಕರು ಗೌಡಾಯಿಸಿದರು. ಅಲ್ಲಿಂದ ಬೆಳಗ್ಗೆ 8ರಿಂದ 11 ಗಂಟೆವರೆಗೆ ಜಂತರ್ ಮಂತರ್ ನಲ್ಲಿ ನಂತರ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗಿತ್ತು.
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಸಂಸದ ರಾಹುಲ್ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೂಡ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದರು. ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ, ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಸೇರಿದಂತೆ ಅನೇಕರು ಸುಷ್ಮಾ ಸ್ವರಾಜ್ ಅವರ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದರು.
ಬಿಜೆಪಿ ಕಚೇರಿಯಿಂದ ಲೋಧಿ ರಸ್ತೆಯ ಚಿತಾಗಾರಕ್ಕೆ ಸುಷ್ಮಾ ಸ್ವರಾಜ್ ಅವರ ಪಾರ್ಥಿವ ಶರೀರವನ್ನು ಸಾಗಿಸಲಾಯಿತು. ಬಳಿಕ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.
ನವದೆಹಲಿಯಲ್ಲಿ ನಮ್ಮನ್ನು ಅಗಲಿರುವ ಕೇಂದ್ರದ ಮಾಜಿ ಸಚಿವರಾದ ಶ್ರೀಮತಿ ಸುಷ್ಮಾ ಸ್ವರಾಜ್ ಅವರ ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಲಾಯಿತು. pic.twitter.com/wUytiXuiQK
— B.S.Yediyurappa (@BSYBJP) August 7, 2019