ನವದೆಹಲಿ: ಪಾಕಿಸ್ತಾನದಲ್ಲಿ ಇಬ್ಬರು ಹಿಂದೂ ಬಾಲಕಿಯರ ಅಪರಹಣ ಮಾಡಿ ಬಲವಂತವಾಗಿ ಮತಾಂತರ ಮಾಡಿರುವ ಕುರಿತಂತೆ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಪಾಕಿಸ್ತಾನದಲ್ಲಿರುವ ಭಾರತ ರಾಯಭಾರಿ ಕಚೇರಿಯಿಂದ ವರದಿ ಕೇಳಿದ್ದಾರೆ.
ಪಾಕ್‍ನ ಸಿಂಧ್ ಪ್ರಾಂತ್ಯದಲ್ಲಿ ಹೋಳಿ ಆಚರಣೆಯಲ್ಲಿ ತೊಡಗಿದ್ದ ಯುವತಿಯನ್ನು ಅಪಹರಣ ಮಾಡಿದ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ವರದಿಗೆ ಟ್ವೀಟ್ ಮಾಡಿ ಪ್ರತಿಕ್ರಿಯೆ ನೀಡಿ ಸುಷ್ಮಾ ಸ್ವರಾಜ್ ಮಾಹಿತಿ ನೀಡಿದ್ದಾರೆ.
Advertisement
Mr.Minister @fawadchaudhry – I only asked for a report from Indian High Commissioner in Islamabad about the kidnapping and forced conversion of two minor Hindu girls to Islam. This was enough to make you jittery. This only shows your guilty conscience. @IndiainPakistan
— Sushma Swaraj (@SushmaSwaraj) March 24, 2019
Advertisement
ಮಾಧ್ಯಮ ವರದಿಯ ಅನ್ವಯ ಸಿಂಧ ಪ್ರಾಂತ್ಯದ ಧ್ವಾರಕಿ ನಗರದಲ್ಲಿ ಘಟನೆ ನಡೆದಿದೆ. ಅಲ್ಲದೇ ಹಿಂದೂ ಸಮೂದಾಯದ ಈ ಘಟನೆಯ ಬಗ್ಗೆ ಪ್ರತಿಭಟನೆ ನಡೆಸಿ ಕೃತ್ಯ ನಡೆಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.
Advertisement
ಪಾಕಿಸ್ತಾನದಲ್ಲಿ ನೆಲೆಸಿರುವ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಹಾಗೂ ಹಕ್ಕುಗಳ ವಿಚಾರವಾಗಿ ಭಾರತ ಈಗ ವಿಶ್ವದ ಗಮನ ಸೆಳೆಯಲು ಪ್ರಯತ್ನಿಸುತ್ತಿದೆ.