ಮಾಜಿ ವಿಶ್ವಸುಂದರಿ ಸುಶ್ಮಿತಾ ಸೇನ್ (Sushmita Sen) ಮೊನ್ನೆ ಮೊನ್ನೆಯಷ್ಟೇ ಲಲಿತ್ ಮೋದಿ ವಿಚಾರಕ್ಕಾಗಿ ಸುದ್ದಿಯಾಗಿದ್ದರು. ಲಲತ್ ಮೋದಿ (Lalit Modi) ಮತ್ತು ಸುಶ್ಮಿತಾ ಸೇನ್ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ವಿಚಾರ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿತ್ತು. ಇದೀಗ ಅವರ ಸಹೋದರ ಕೂಡ ಸುದ್ದಿಗೆ ಕಾರಣರಾಗಿದ್ದಾರೆ. ಸುಶ್ಮಿತಾ ಸೇನ್ ಸಹೋದರ ರಾಜೀವ್, ಸ್ವತಃ ತನ್ನ ಪತ್ನಿಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಪತ್ನಿ ಚಾರು ಅಸೋಪಾ ಟಿವಿ ಸ್ಟಾರ್ ಜೊತೆಗೆ ಅಫೇರ್ (Affair) ಇಟ್ಟುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ರಾಜೀವ್ (Rajeev Sen) ಮತ್ತು ಚಾರು ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ. ದಾಂಪತ್ಯ ಕಲಹ ಬೀದಿಗೂ ಬಿದ್ದಿದೆ. ರಾಜೀವ್ ಜೊತೆಗಿನ ಸಂಬಂಧವನ್ನು ಮುರಿದುಕೊಳ್ಳುವುದಕ್ಕಾಗಿ ಚಾರು ವಿಚ್ಛೇದನಕ್ಕೆ (Divorce) ಮುಂದಾಗಿದ್ದಾರೆ. ಹೀಗಾಗಿ ರಾಜೀವ್ ಪತ್ನಿಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಪತ್ನಿ ಚಾರುಗೆ ಟಿವಿ ನಟ ಕರಣ್ ಮೆಹ್ರಾ ಎನ್ನುವವರ ಜೊತೆ ಸಂಬಂಧ ಇರುವುದಾಗಿ ಬಹಿರಂಗವಾಗಿಯೇ ಹೇಳಿಕೊಂಡಿದ್ದಾರೆ. ಈ ವಿಚಾರವನ್ನು ಸ್ವತಃ ಚಾರು ತಾಯಿಯೇ ತಮಗೆ ತಿಳಿಸಿರುವುದಾಗಿ ಹೇಳಿದ್ದಾರೆ. ಅವಳಿಂದಾಗಿ ನನಗೆ ಮೋಸವಾಗಿದೆ ಎನ್ನುವ ಆರೋಪ ಕೂಡ ರಾಜೀವ್ ಅವರದ್ದು. ಇದನ್ನೂ ಓದಿ:‘ಜುಗಲ್ ಬಂದಿ’ಗಾಗಿ ಕನ್ನಡಕ್ಕೆ ಬಂದ ಅಪರೂಪದ ತಮಿಳು ಗಾಯಕಿ ವೈಕಂ ವಿಜಯಲಕ್ಷ್ಮಿ
ಚಾರು (Charu) ಕೂಡ ಈ ವಿಚಾರದಲ್ಲಿ ಹಿಂದೆ ಬಿದ್ದಿಲ್ಲ. ತಾನು ಗರ್ಭಿಣಿ ಆಗಿದ್ದಾಗ ರಾಜೀವ್ ಮೋಸ ಮಾಡಿದ್ದಾನೆ ಎಂದು ತಿಳಿಸಿದ್ದಾರೆ. ಈ ಕಾರಣಕ್ಕಾಗಿಯೇ ಪತಿಯಿಂದ ತಾವು ಪ್ರತ್ಯೇಕವಾಗಿ ವಾಸಿಸುತ್ತಿರುವ ವಿಚಾರವನ್ನೂ ತಿಳಿಸಿದ್ದಾರೆ. ದಾಂಪತ್ಯದಲ್ಲಿ ನನಗೆ ದ್ರೋಹ ಮಾಡಿದ್ದನ್ನು ಕ್ಷಮಿಸುವುದಿಲ್ಲ ಎಂದು ಚಾರು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಈ ಇಬ್ಬರ ಜಗಳ ಈಗಾಗಲೇ ಬೀದಿರಂಪ ಆಗಿದೆ. ಆರೋಪ ಪ್ರತ್ಯಾರೋಪ ಇಬ್ಬರ ಜೀವನವನ್ನು ಯಾವ ಕಡೆ ತಗೆದುಕೊಂಡು ಹೋಗುತ್ತದೆಯೋ ಕಾದು ನೋಡಬೇಕು.