Mysuru| ಕಲುಷಿತ ನೀರು ಸೇವನೆ ಶಂಕೆ- ಓರ್ವ ಸಾವು, 12 ಜನ ಅಸ್ವಸ್ಥ

Public TV
1 Min Read
Contaminated Water

ಮೈಸೂರು: ಕಲುಷಿತ ನೀರು ಸೇವನೆಯಿಂದ ಓರ್ವ ಸಾವನ್ನಪ್ಪಿದ್ದು, 12 ಜನ ವಾಂತಿಭೇದಿಯಿಂದ ಅಸ್ವಸ್ಥಗೊಂಡಿರುವ ಘಟನೆ ಸಾಲಿಗ್ರಾಮ (Saligrama) ತಾಲೂಕಿನ ಗಡಿ ಗ್ರಾಮ ಬೆಟ್ಟಹಳ್ಳಿಯಲ್ಲಿ ನಡೆದಿದೆ.

ಗೋವಿಂದೇಗೌಡ (65) ಸಾವಿಗೀಡಾದ ವ್ಯಕ್ತಿ. ಗ್ರಾಮದ ಟ್ಯಾಂಕ್‌ನಿಂದ ಸರಬರಾಜಾಗಿದ್ದ ನೀರನ್ನು ಸೇವಿಸಿ ಕೆಲವರಿಗೆ ವಾಂತಿ ಭೇದಿ ಆಗಿದೆ ಎಂದು ಶಂಕಿಸಲಾಗಿದೆ. ಅಸ್ವಸ್ಥರನ್ನು ತಕ್ಷಣವೇ ಸಾಲಿಗ್ರಾಮ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ರವಾನೆ ಮಾಡಲಾಗಿದೆ. ಇದನ್ನೂ ಓದಿ: ನಗೆ ಈ ಟಿವಿ ಬೇಡ, ತೆಗೆದುಕೊಂಡು ಹೋಗಿ: ದರ್ಶನ್‌

ಗೋವಿಂದೇಗೌಡ ಎಂಬುವವರು ತೀವ್ರ ಅಸ್ವಸ್ಥಗೊಂಡ ಹಿನ್ನೆಲೆ ಹಾಸನ ಜಿಲ್ಲೆಯ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ರಸ್ತೆಗಿಳಿಯಲ್ಲ ಡಬ್ಬಲ್ ಡೆಕ್ಕರ್ ಬಸ್ – ಯೋಜನೆ ಕೈಬಿಟ್ಟ ಬಿಎಂಟಿಸಿ

ತಾಲೂಕು ಆಸ್ಪತ್ರೆಯ ವೈದ್ಯರು ತಂಡ ಬೆಟ್ಟಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿ, ಗ್ರಾಮಸ್ಥರ ಆರೋಗ್ಯ ಪರೀಕ್ಷೆ ನಡೆಸಿದ್ದಾರೆ. ಇದನ್ನೂ ಓದಿ: ಗ್ಯಾರಂಟಿಯಿಂದಾಗಿ ಅನುದಾನ ಸಿಗ್ತಿಲ್ಲ: ದರ್ಶನ್ ಪುಟ್ಟಣ್ಣಯ್ಯ

Share This Article