-ಗಂಡ ಅಭಿಲಾಷ್ ವಿರುದ್ಧ ಮೃತಳ ಪೋಷಕರಿಂದ ಕೊಲೆ ಆರೋಪ
-ನವವಿವಾಹಿತೆ ಅನುಷಾಳ ಬಲ ಕಿವಿಯೇ ಕಟ್
ಚಿಕ್ಕಬಳ್ಳಾಪುರ: ಪ್ರೀತಿಸಿ ಪೋಷಕರ ವಿರೋಧದ ನಡುವೆಯೂ ಮನೆಯಿಂದ ಓಡಿ ಹೋಗಿ ವಿವಾಹವಾಗಿದ್ದ ನವವಿವಾಹಿತೆ ಮದುವೆಯಾಗಿ 1 ವರ್ಷ ಕಳೆಯುವುದರೊಳಗೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ಅನುಷಾ ಎಂದು ಗುರುತಿಸಲಾಗಿದ್ದು, ಈಕೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಅಚೇಪಲ್ಲಿ ಗ್ರಾಮದ ಅರುಣಾ ಹಾಗೂ ಕೊಂಡಪ್ಪ ದಂಪತಿಗಳ ಪುತ್ರಿಯಾಗಿದ್ದಾರೆ.
ಖಾಸಗಿ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದ ಅನುಷಾ, ಕಳೆದ 1 ವರ್ಷದ ಹಿಂದೆ ಚಿಕ್ಕಬಳ್ಳಾಪುರ ತಾಲೂಕಿನ ಕರಿಗಾನಪಾಳ್ಯ ಗ್ರಾಮದ ಅಭಿಲಾಷ್‍ನನ್ನು ಪ್ರೀತಿಸಿ ಮದುವೆಯಾಗಿದ್ದಳು. ಮದುವೆಯಾದ ನಂತರ ನಗರದ 9ನೇ ವಾರ್ಡಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಆದರೆ ಇದಕ್ಕಿಂದಂತೆ ಬೆಳಗ್ಗೆ ಅನುಷಾ ಶವವಾಗಿ ಪತ್ತೆಯಾಗಿದ್ದಾಳೆ. ಇದನ್ನೂ ಓದಿ: ಖಾಕಿ ಚಡ್ಡಿ ಏನು ಈ ದೇಶದ ರಾಷ್ಟ್ರಧ್ವಜವೇ: ಎನ್‍ಎಸ್‍ಯುಐ ಉಪಾಧ್ಯಕ್ಷೆ
ನೇಣು ಬಿಗಿದ ಸ್ಥಿತಿಯಲ್ಲಿ ಅನುಷಾಳ ಮೃತದೇಹ ಪತ್ತೆಯಾಗಿದ್ದು ಅನುಷಾಳ ಒಂದು ಕಿವಿ ಸಹ ಸಂಪೂರ್ಣ ಕಟ್ ಆಗಿದೆ ಎನ್ನಲಾಗಿದೆ. ಬಲಭಾಗದ ಕಟ್ ಆಗಿರುವ ಕಿವಿ ಸಹ ನಾಪತ್ತೆಯಾಗಿದೆ. ಈ ಸಂಬಂಧ ಮೃತಳ ಪೋಷಕರು ಅಭಿಲಾಷ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಅಳಿಯ ಅಭಿಲಾಷ್ ಕಲ್ಲು ಕ್ವಾರಿಯೊಂದರಲ್ಲಿ ರೈಟರ್ ಆಗಿ ಕೆಲಸ ಮಾಡುತ್ತಿದ್ದು, ಲಾರಿ ತೆಗೆದುಕೊಳ್ಳುವುದಕ್ಕೆ 2 ಲಕ್ಷ ಹಣ ನೀಡುವಂತೆ ಕೇಳಿದ್ದು, ಇದೇ ವಿಚಾರವಾಗಿ ಗಂಡ, ಹೆಂಡತಿ ಮಧ್ಯೆ ಜಗಳ ಆಗಿ ಅಭಿಲಾಷ್ ತಮ್ಮ ಮಗಳನ್ನು ಕೊಲೆ ಮಾಡಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ. ಆದರೆ ಇತ್ತ ಅಭಿಲಾಷ್ ಅನುಷಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಾನು ಕೊಲೆ ಮಾಡಿಲ್ಲ ಎಂದು ಹೇಳಿದ್ದಾನೆ. ಇದನ್ನೂ ಓದಿ: ಕಾಶ್ಮೀರಿ ಪಂಡಿತರ ಮೇಲೆ ದಾಳಿ – 177 ಶಿಕ್ಷಕರ ವರ್ಗಾವಣೆ
ಸದ್ಯ ಅಭಿಲಾಷ್ ನನ್ನ ವಶಕ್ಕೆ ಪಡೆದಿರುವ ಚಿಕ್ಕಬಳ್ಳಾಪುರ ನಗರ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಅನುಷಾ ಮೃತದೇಹವನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಈ ಸಂಬಂಧ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.