ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ (Ebola Virus) ಲ್ಯಾಬ್ ರಿಪೋರ್ಟ್‌ನಲ್ಲಿ ನೆಗೆಟಿವ್ ಎಂದು ವರದಿ ಬಂದಿದೆ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಸ್ಪಷ್ಟಪಡಿಸಿದ್ದಾರೆ.
ಉಗಾಂಡದಿಂದ (Uganda) ಬೆಂಗಳೂರಿಗೆ ಬಂದಿದ್ದ ಮಹಿಳೆಯೊಬ್ಬರಲ್ಲಿ ಎಬೋಲಾ ವೈರಸ್‌ನ ರೋಗಲಕ್ಷಣಗಳು ಕಂಡುಬಂದಿತ್ತು. ಈ ಹಿನ್ನೆಲೆ ಮಹಿಳೆಯನ್ನು ರಾಜೀವ್ ಗಾಂಧಿ ಆಸ್ಪತ್ರೆಗೆ ಶಿಫ್ಟ್ ಮಾಡಿ ಕ್ವಾರಂಟೈನ್‌ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅಲ್ಲದೇ ಮಹಿಳೆಯ ಸ್ಯಾಂಪಲ್ ಸಂಗ್ರಹಿಸಿ ಲ್ಯಾಬ್‌ಗೆ ರವಾನಿಸಲಾಗಿತ್ತು. ಇದನ್ನೂ ಓದಿ: ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡ್ತಾರೋ ಗೊತ್ತಿಲ್ಲ: ಶೋಭಾ ಕರಂದ್ಲಾಜೆ
ಇದೀಗ ಲ್ಯಾಬ್ ರಿಪೋರ್ಟ್ ನೆಗೆಟಿವ್ ಬಂದಿದ್ದು, ಆ ವ್ಯಕ್ತಿಗೆ ಯಾವುದೇ ಸೋಂಕು ತಗುಲಿಲ್ಲ ಎಂದು ಆರೋಗ್ಯ ಇಲಾಖೆಯ ತಜ್ಞ ವೈದ್ಯರು ಖಚಿತಪಡಿಸಿದ್ದಾರೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮೊದಲ ಎಬೋಲಾ ಕೇಸ್ ಪತ್ತೆ?
