ಉಡುಪಿ: ಕಾರ್ಕಳದ (Karkala) ಈದು ಗ್ರಾಮದಲ್ಲಿ ನಕ್ಸಲ್ (Naxals) ಓಡಾಟದ ಶಂಕೆ ವ್ಯಕ್ತವಾಗಿದ್ದು, ಎಎನ್‌ಎಫ್ ಪೊಲೀಸರಿಂದ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ಕೆಲವು ದಿನಗಳಿಂದ ಅನುಮಾನಾಸ್ಪದ ವ್ಯಕ್ತಿಗಳ ಓಡಾಟದ ವದಂತಿ ಹಬ್ಬಿದೆ. ಈ ಬಗ್ಗೆ ಎಎನ್‌ಎಫ್ ಸಿಬ್ಬಂದಿ ಸ್ಥಳೀಯರಲ್ಲಿ ವಿಚಾರಿಸಿದ್ದಾರೆ. ಸ್ಥಳೀಯರಿಂದ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದ ಎಎನ್‌ಎಫ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕೆರೆಯನ್ನೇ ನುಂಗಿದ ವಕ್ಫ್ ಬೋರ್ಡ್ – 4 ಎಕರೆ 10 ಗುಂಟೆ ಕೆರೆಯ ಜಾಗ ಈಗ ವಕ್ಫ್ ಹೆಸರಿಗೆ
ಪಶ್ಚಿಮ ಘಟ್ಟದ ತಪ್ಪಲಿಗೆ ನಕ್ಸಲರು ನಸುಳಿರಬಹುದು ಎಂದು ಶಂಕಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಬೇರೆ ಬೇರೆ ಅರಣ್ಯ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
ಅರಣ್ಯ ವಾಸಿಗಳಿಂದ ಅಧಿಕಾರಿಗಳು ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ. ಡ್ರೋನ್, ಶ್ವಾನದಳ ಬಳಸಿಕೊಂಡು ಕಾರ್ಯಾಚರಣೆ ನಡೆಸಲಾಗಿದೆ. ಖಚಿತವಾದ ಯಾವುದೇ ಸುಳಿವು ಪತ್ತೆಯಾಗಿಲ್ಲ.
ಸಾರ್ವಜನಿಕರು ಆತಂಕ ಪಡುವುದು ಬೇಡ ಎಂದು ಎಎನ್‌ಎಫ್ ಪೊಲೀಸ್ ತಿಳಿಸಿದ್ದಾರೆ. ಇದನ್ನೂ ಓದಿ: ಊಟ ಬೇಕೆಂದು ಅಳುತ್ತಿದ್ದ ಮಗನ ಮೇಲೆ ಹಲ್ಲೆ ನಡೆಸಿ ಹತ್ಯೆ – ಪತಿ ವಿರುದ್ಧ ಪತ್ನಿ ದೂರು