ಚಿಕ್ಕಮಗಳೂರು: ಪಶ್ಚಿಮಘಟ್ಟದ ತಪ್ಪಲಿನಲ್ಲಿ ಮತ್ತೆ ನಕ್ಸಲರು ಓಡಾಟದ ಶಂಕೆ ವ್ಯಕ್ತವಾಗಿದೆ.
ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಆರು ಜನ ನಕ್ಸಲರು ಓಡಾಡಿದ್ದಾರೆ ಎಂಬ ಮಾಹಿತಿ ಹರಿದಾಡಿದೆ. ಮಾಹಿತಿಯ ಆಧಾರದ ಮೇಲೆ ನಕ್ಸಲ್ ನಿಗ್ರಹ ಪಡೆಯಿಂದ (Anti Naxal Force) ಕೂಂಬಿಂಗ್ ಕಾರ್ಯಾಚರಣೆ ಚುರುಕುಗೊಂಡಿದೆ.
Advertisement
Advertisement
ಕಳಸ (Kalasa), ಶೃಂಗೇರಿ (Sringeri) ತಾಲೂಕಿನ ಘಟ್ಟ ಪ್ರದೇಶಗಳಲ್ಲಿ ಕೂಂಬಿಂಗ್ ಕಾರ್ಯಾಚರಣೆ ಆರಂಭಗೊಂಡಿದೆ. ಹಲವು ವರ್ಷಗಳ ಬಳಿಕ ಮಲೆನಾಡಲ್ಲಿ ಮತ್ತೆ ನಕ್ಸಲರ ಓಡಾಟದ ಸದ್ದು ಕೇಳಿದ್ದು, ಈ ಭಾಗಗಳಲ್ಲಿ ಆತಂಕ ಹೆಚ್ಚಿಸಿದೆ.
Advertisement
Advertisement
ಈ ವರ್ಷ ಏಪ್ರಿಲ್‌ನಲ್ಲಿ ಲೋಕಸಭಾ ಚುನಾವಣೆ (Lok Sabha Election) ಸಮಯದಲ್ಲಿ ಕರಾವಳಿ ಭಾಗದಲ್ಲಿ ನಕ್ಸಲರ (Naxal) ಚಲನವಲನದ ಬಗ್ಗೆ ಶಂಕೆ ಮೂಡಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಕೊಂಬಾರು ಗ್ರಾಮದ ಚೆರು ಗ್ರಾಮದ ಮನೆಗೆ ಆರು ಮಂದಿ ನಕ್ಸಲರು ಭೇಟಿ ನೀಡಿದ್ದರು ಎನ್ನಲಾಗಿತ್ತು. ಸುಮಾರು ಎರಡು ಗಂಟೆಗಳ ಕಾಲ ಇದ್ದ ನಕ್ಸಲರು ಮನೆಯಲ್ಲಿ ಊಟ ಮಾಡಿ ದಿನಸಿ ಸಾಮಾಗ್ರಿಗಳನ್ನು ಪಡೆದ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಬಳಿಕ ನಕ್ಸಲ್ ನಿಗ್ರಹ ದಳ ಮಾಹಿತಿ ಪಡೆದು ಹುಡುಕಾಟ ನಡೆಸಿತ್ತು.