ಮಂಗಳೂರು: ಲೋಕಸಭಾ ಚುನಾವಣೆ (Lok Sabha Election) ಸಮಯದಲ್ಲಿ ಕರಾವಳಿ ಭಾಗದಲ್ಲಿ ನಕ್ಸಲರ (Naxal) ಚಲನವಲನ ಹೆಚ್ಚಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಕಡಬದ (Kadaba) ಮನೆಗೆ 6 ಮಂದಿ ಬಂದಿರುವ ಶಂಕೆ ವ್ಯಕ್ತವಾಗಿದೆ.
ಕಡಬ ತಾಲೂಕಿನ ಕೊಂಬಾರು ಗ್ರಾಮದ ಚೆರು ಗ್ರಾಮದ ಮನೆಗೆ ತಡರಾತ್ರಿ ಆರು ಮಂದಿ ಬಂದಿದ್ದಾರೆ. ಇದನ್ನೂ ಓದಿ: ದೊಡ್ಮನೆ ಸೊಸೆಗೆ ಅವಹೇಳನ: ಸಾರ್ವಜನಿಕರಿಂದಲೂ ಆಕ್ರೋಶ
Advertisement
Advertisement
ಸುಮಾರು ಎರಡು ಗಂಟೆಗಳ ಕಾಲ ಇದ್ದ 6 ಮಂದಿ ಮನೆಯಲ್ಲಿ ಊಟ ಮಾಡಿ ದಿನಸಿ ಸಾಮಾಗ್ರಿಗಳನ್ನು ಪಡೆದ ಮಾಹಿತಿ ಲಭ್ಯವಾಗಿದೆ. ಈ ವಿಚಾರ ತಿಳಿದ ಬೆನ್ನಲ್ಲೇ ನಕ್ಸಲ್ ನಿಗ್ರಹ ದಳ (ANF) ಮನೆಗೆ ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸಿದೆ. ಇದನ್ನೂ ಓದಿ: ಏಳೆಂಟು ದಿನದಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ : ರಾಜನಾಥ್ ಸಿಂಗ್
Advertisement
ವಾರದ ಹಿಂದೆ ಸುಬ್ರಹ್ಮಣ್ಯದ ಐನೆಕಿದು ಬಳಿ ನಕ್ಸಲರು ಪತ್ತೆಯಾಗಿದ್ದರು. ಮೋಸ್ಟ್ ವಾಂಟೆಡ್ ವಿಕ್ರಂ ಗೌಡ, ಲತಾ ಮುಂಡುಗಾರು ಇದ್ದ ತಂಡ ಕಡಬಕ್ಕೂ ಬಂದಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.
Advertisement
ಚುನಾವಣೆ ಹೊತ್ತಲ್ಲಿ ಪಶ್ಚಿಮ ಘಟ್ಟ ಭಾಗದಲ್ಲಿ ನಕ್ಸಲ್ ಚಲನವಲನ ಹೆಚ್ಚಾಗುತ್ತಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.