ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ವಿಶೇಷ ಕಾರ್ಯಪಡೆ (STF) ಅಲ್‌ಖೈದಾ (Al-Qaeda) ಶಂಕಿತ ಭಯೋತ್ಪಾದಕನನ್ನು ಬಂಧಿಸಿದೆ.
Advertisement
ಬಂಧಿತ ಕೂಚ್‍ಬಿಹಾರ್‌ನ (Coochbihar) ದಿನ್ಹಟಾದ (Dinhata) ನನ್ನು ಮಿಯಾ (40) ಎಂಬುದಾಗಿ ತಿಳಿದು ಬಂದಿದೆ. ಶನಿವಾರ ಶಂಕಿತ ಉಗ್ರನನ್ನು ಬರಾಸತ್ ಜಿಲ್ಲಾ ನ್ಯಾಯಾಲಯ (Barasat District court) ಪಶ್ಚಿಮ ಬಂಗಾಳ ಪೊಲೀಸರಿಗೆ 11 ದಿನಗಳ ಕಸ್ಟಡಿಗೆ ನೀಡಿದೆ. ಆರೋಪಿಯ ವಿರುದ್ಧ ಭಯೋತ್ಪಾದಕ ಚಟುವಟಿಕೆಗಳಿಗೆ (Terrorist Activities) ಸಂಬಂಧಿಸಿದ ಹಲವಾರು ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಸುಡಾನ್‌ನಿಂದ ಶಿವಮೊಗ್ಗಕ್ಕೆ ವಾಪಸ್ – ಕೇಂದ್ರಕ್ಕೆ ಥ್ಯಾಂಕ್ಸ್ ಹೇಳಿದ ಸಂತ್ರಸ್ತರು
Advertisement
Advertisement
ಆರೋಪಿ ಅಲ್-ಖೈದಾ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂಬುದನ್ನು ನಾವು ಈಗಲೇ ಖಚಿತಪಡಿಸಲು ಸಾಧ್ಯವಿಲ್ಲ. ಆದರೆ ಉಗ್ರಗಾಮಿ ಸಂಘಟನೆಯಲ್ಲಿ ಭಾಗಿಯಾಗಿರುವ ಶಂಕೆಯ ಹಿನ್ನೆಲೆಯಲ್ಲಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಸೂಕ್ತ ತನಿಖೆಯ ನಂತರ ಸಂಪೂರ್ಣ ಮಾಹಿತಿ ಸಿಗಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
Advertisement
ಇತ್ತೀಚೆಗೆ ಶಶನ್ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣವೊಂದರ ತನಿಖೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಎಸ್‍ಟಿಎಫ್ ಆರೋಪಿಯನ್ನು ಬಂಧಿಸಿತ್ತು. ಇದನ್ನೂ ಓದಿ: ಭಾರತದ ಮೊದಲ ಕೇಬಲ್ ರೈಲ್ವೇ ಸೇತುವೆ ಪೂರ್ಣ – ವಿಡಿಯೋ ಹಂಚಿಕೊಂಡ ಕೇಂದ್ರ ಸಚಿವ