ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಶಂಕಿತ ಉಗ್ರ (Suspected Terrorists) ಜುನೈದ್ ಸಹಚರನನ್ನು ಆರ್.ಟಿ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಮೊಹಮ್ಮದ್ ಅರ್ಷದ್ ಖಾನ್ (Mohammad Arshad Khan) ಎಂದು ಗುರುತಿಸಲಾಗಿದೆ. ಈತನ ಮೇಲೆ 17 ಕೇಸ್‍ಗಳಿದ್ದು, ಕಳೆದ 4 ವರ್ಷಗಳಿಂದ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದನು.
ಸದ್ಯ ಮೊಹಮ್ಮದ್ ಅರ್ಷದ್ ಖಾನ್ ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಮೂಲಕ ಬೆಂಗಳೂರಿನಲ್ಲಿ ಐವರು ಶಂಕಿತರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಜುನೈದ್‍ಗೆ ಮೊಹಮ್ಮದ್ ಅರ್ಷದ್ ಅಪ್ತನಾಗಿದ್ದ. ಜುನೈದ್ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ಕೂಡ ಈತ ಹೊಂದಿದ್ದಾನೆ. ಇದನ್ನೂ ಓದಿ: ಇಸ್ರೋ ವಿಜ್ಞಾನಿಯ ಕಾರಿಗೆ ಕಲ್ಲೆಸೆತ – ಹಿಂಭಾಗದ ಗಾಜು ಪುಡಿ ಪುಡಿ
ಸೋಮವಾರ ರಾತ್ರಿ ಬಂಧನಕ್ಕೆ ಹೋದ ವೇಳೆ ಆರೋಪಿ ಆತ್ಮಹತ್ಯೆ ಬೆದರಿಕೆ ಹಾಕಿದ್ದ. ಸದ್ಯ ಬಂಧಿತನಾಗಿರುವ ಅರ್ಷದ್, ಶಂಕಿತ ಜುನೈದ್ ಸಂಪರ್ಕದಲ್ಲೇನಾದ್ರು ಇದ್ದಾನಾ..?, ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾನಾ ಎಂಬೆಲ್ಲ ಕುರಿತು ತನಿಖೆ ನಡೆಸಲಾಗುತ್ತಿದೆ.
Web Stories