ಬೆಂಗಳೂರು: ಪತ್ನಿಯ (Wife) ಶೀಲ ಶಂಕಿಸಿ ಪತಿ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಹೆಗ್ಗಡೆ ನಗರದ (Hegde Nagar) 1ನೇ ಕ್ರಾಸ್‌ನಲ್ಲಿ ನಡೆದಿದೆ.
ವೇಲಾರಮಣಿ (35) ಕೊಲೆಯಾದ ಪತ್ನಿ. ಗಂಡ ಚಂದ್ರಶೇಖರ್ ಪತ್ನಿಯ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ. ಮಂಗಳವಾರ ಬೆಳಗ್ಗೆ 11 ಗಂಟೆಯ ಸುಮಾರಿಗೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: Exclusive | ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಮೊದಲು ಚಿನ್ನ ಸಾಗಿಸಿದ್ದು ದಕ್ಷಿಣಾ ಆಫ್ರಿಕಾದಿಂದ ದುಬೈಗೆ!
11 ವರ್ಷದ ಹಿಂದೆ ವೇಲಾರಮಣಿ ಹಾಗೂ ಚಂದ್ರಶೇಖರ್‌ಗೆ ಮದುವೆಯಾಗಿತ್ತು. ಇವರ ಮದುವೆಗೆ ಸಾಕ್ಷಿ ಎಂಬಂತೆ ಇಬ್ಬರು ಮಕ್ಕಳಿದ್ದರು. ಚಂದ್ರಶೇಖರ್ ಕ್ಯಾಬ್ ಡ್ರೈವರ್ ಆಗಿದ್ದು, ಪತ್ನಿ ವೇಲಾರಮಣಿ ಖಾಸಗಿ ಕಂಪನಿಯಲ್ಲಿ ಅಕೌಂಟೆಂಟ್ ಆಗಿದ್ದಳು. ಹೆಂಡತಿ ಫೋನ್‌ನಲ್ಲಿ ಯಾವಾಗಲೂ ಮಾತನಾಡುತ್ತಿರುವುದನ್ನು ನೋಡಿ ಚಂದ್ರಶೇಖರ್ ಹಲವು ದಿನಗಳಿಂದ ಆಕೆಯ ಬಗ್ಗೆ ಅನುಮಾನಿಸಿದ್ದ. ಇದನ್ನೂ ಓದಿ: ಸ್ನೇಹಿತರೊಂದಿಗೆ ಈಜಲು ತೆರಳಿದ್ದ SSLC ವಿದ್ಯಾರ್ಥಿ ನೀರುಪಾಲು
ಮಂಗಳವಾರ ಇಬ್ಬರು ಮಕ್ಕಳು ಶಾಲೆಗೆ ಹೋದ ಮೇಲೆ ಗಂಡ-ಹೆಂಡತಿ ನಡುವೆ ಗಲಾಟೆಯಾಗಿದೆ. ಜಗಳ ವಿಕೋಪಕ್ಕೆ ತಿರುಗಿ ಚಂದ್ರಶೇಖರ್ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಬಳಿಕ ಆರೋಪಿ ಗಂಡ ಸಂಪಿಗೆಹಳ್ಳಿ ಠಾಣೆಗೆ ಹೋಗಿ ಪೊಲೀಸರ ಮುಂದೆ ಶರಣಾಗಿದ್ದಾನೆ. ನಂತರ ಸ್ಥಳಕ್ಕೆ ತೆರಳಿದ ಸಂಪಿಗೆಹಳ್ಳಿ ಪೊಲೀಸರು, ಕೊಲೆ ಮಾಡಿದ ಸ್ಥಳ ಪರಿಶೀಲನೆ ನಡೆಸಿ, ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿ ಮಂಗಳವಾರವೇ ಮೃತ ದೇಹ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಇದನ್ನೂ ಓದಿ: ಮುಸ್ಲಿಮರಿಗೆ ಮೀಸಲಾತಿ ಮೋದಿ ಕೊಟ್ರೆ ಸರಿ, ನಾವು ಕೊಟ್ರೆ ತಪ್ಪಾ? – ಯತೀಂದ್ರ
ಸದ್ಯ ಆರೋಪಿ ಚಂದ್ರಶೇಖರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಸಂಬಂಧ ಸಂಪಿಗೆಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬಿಜೆಪಿಯಲ್ಲೇ ಹನಿಟ್ರ್ಯಾಪ್‌ಗಳು ನಡೆದಿವೆ – ಯತೀಂದ್ರ ಸಿದ್ದರಾಮಯ್ಯ ಬಾಂಬ್