ಡೆಹ್ರಾಡೂನ್: ನನಗೆ ವರ್ಗಾವಣೆ ಬೇಕು ಮಾಡಿಕೊಡಿ ಎಂದು ವಿನಂತಿಸಿಕೊಳ್ಳಲು ಹೋಗಿದ್ದ ಶಾಲಾ ಮುಖ್ಯ ಶಿಕ್ಷಕಿಯೋರ್ವರನ್ನು ಸೇವೆಯಿಂದ ಅಮಾನತುಗೊಳಿ ಅವರನ್ನು ಬಂಧನಕ್ಕೊಳಪಡಿಸುವಂತೆ ಉತ್ತಾರಖಂಡ್ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಪೊಲೀಸರಿಗೆ ಆದೇಶ ನೀಡಿದ್ದಾರೆ.
ಡೆಹ್ರಾಡೂನ್‍ನಲ್ಲಿ ಗುರುವಾರ ಮಧ್ಯಾಹ್ನ ಜನತಾ ದರ್ಬಾರ್ ಆಯೋಜನೆಗೊಂಡಿತ್ತು. ಈ ವೇಳೆ ಶಿಕ್ಷಕಿಯೊಬ್ಬರು ವರ್ಗಾವಣೆ ನೀಡುವಂತೆ ಕೇಳಿಕೊಂಡಿದ್ದಾರೆ. ನಾನು 25 ವರ್ಷಗಳ ಕಾಲ ಕುಗ್ರಾಮದಲ್ಲಿ ಕೆಲಸ ಮಾಡಿದ್ದೇನೆ ಎಂದು ಹೇಳಿ ಅವಾಚ್ಯ ಪದಗಳನ್ನು ಬಳಸಿ ವರ್ಗಾವಣೆ ಮಾಡುವಂತೆ ಕೇಳಿಕೊಂಡಿದ್ದಾರೆ. ಸ್ಥಳದಲ್ಲಿ ಗದ್ದಲ ಉಂಟು ಮಾಡಿದ ಹಿನ್ನೆಲೆಯಲ್ಲಿ ಸಿಟ್ಟಾದ ಸಿಎಂ ಆಕೆಯನ್ನು ಸೇವೆಯಿಂದಲೇ ಅಮಾನತುಗೊಳಿಸಿ ಬಂಧಿಸುವಂತೆ ಆದೇಶಿಸಿದ್ದಾರೆ.
Advertisement
ಏನಿದು ಘಟನೆ?
57 ವರ್ಷದ ಉತ್ತರ ಬಹುಗುಣ ಅವರು ಉತ್ತರಕಾಶಿ ಜಿಲ್ಲೆಯ ನೌಗಾಂವ್ ಪ್ರದೇಶದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದು, 25 ವರ್ಷಗಳಿಂದ ಕುಗ್ರಾಮದಲ್ಲಿಯೇ ಕೆಲಸ ಮಾಡಿದ್ದೇನೆ. ಈಗ ನನ್ನನ್ನು ವರ್ಗಾವಣೆ ಮಾಡಿ ಎಂದು ಕೇಳಿಕೊಂಡಿದ್ದಾರೆ.
Advertisement
ಸಿಎಂ ಮರು ಪ್ರಶ್ನೆ ಹಾಕಿದಾಗ ಶಿಕ್ಷಕಿ, ಅವಾಚ್ಯ ಪದ ಬಳಸಿ ಸಿಎಂ ರೊಂದಿಗೆ ವಾದಿಸಲು ಪ್ರಾರಂಭಿಸಿದ್ದಾರೆ. ಇದನ್ನು ಕಂಡು ಕೋಪಗೊಂಡ ಸಿಎಂ ರಾವತ್ ಮೈಕಿನಲ್ಲಿ ಜೋರಾಗಿ ಅವರನ್ನು ಕೆಲಸದಿಂದ ಅಮಾನತುಗೊಳಿಸಿ ಬಂಧಿಸಿ ಎಂದು ಪೊಲೀಸರಿಗೆ ಆದೇಶಿಸಿದ್ದಾರೆ.
Advertisement
#WATCH Uttarakhand Chief Minister Trivendra Singh Rawat directs police to take a teacher into custody after she protested at ‘Janata Darbar’ over issue of her transfer. CM Rawat suspended the teacher and asked her to leave. (28.06.18) pic.twitter.com/alAdCY74QK
— ANI (@ANI) June 29, 2018
Advertisement
ಈ ಘಟನೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಉತ್ತರ ಬಹುಗುಣ ಅವರನ್ನು ಪೊಲೀಸರು ಸ್ಥಳದಲ್ಲೇ ಸಿಆರ್ ಪಿಸಿ ಸೆಕ್ಷನ್ 151 ಅಡಿಯಲ್ಲಿ ಬಂಧಿಸಿದ್ದಾರೆ. ನಂತರ ಗುರುವಾರ ಸಂಜೆ ಅವರನ್ನು ಬಿಡುಗಡೆಗೊಳಿಸಿದ್ದಾರೆ.
ಘಟನೆ ಬಳಿಕ ಮಾತನಾಡಿದ ಸಿಎಂ ರಾವತ್, ಈ ವೇದಿಕೆ ಸಾರ್ವಜನಿಕರಿಗಾಗಿಯೇ ರೂಪಿಸಲಾಗಿದೆ. ವರ್ಗಾವಣೆ ಬೇಕಿದ್ದರೆ ಅದನ್ನು ಕೇಳುವುದಕ್ಕೆ ಒಂದು ವ್ಯವಸ್ಥಿತ ಪ್ರಕ್ರಿಯೆ ಇದೆ. ಸರ್ಕಾರಿ ಸಿಬ್ಬಂದಿಗಳ ವರ್ಗಾವಣೆಯನ್ನು ರಾಜ್ಯದ ವರ್ಗಾವಣೆ ಕಾಯ್ದೆ ಅಡಿಯಲ್ಲಿ ಮಾಡಲಾಗುತ್ತದೆ ಎಂದು ತಿಳಿಸಿದರು.
ಈ ಘಟನೆಯ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಉತ್ತರ ಬಹುಗುಣ, ನನಗೆ ಕೆಲಸ ಮಾಡಲು ಯಾವುದೇ ಸಮಸ್ಯೆಯಿಲ್ಲ. ಆದರೆ 25 ವರ್ಷದಿಂದ ನಾನು ಗ್ರಾಮೀಣ ಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಉತ್ತರಕಾಶಿಯ ಹಳ್ಳಿಯಲ್ಲಿ ಕೆಲಸ ಮಾಡುವ ಮುನ್ನ ಅದೇ ಜಿಲ್ಲೆಯ ಚಿನ್ಯಾಲಿಸೌರ್ ಎಂಬ ಕುಗ್ರಾಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದೆ. ಆಗ ನನ್ನ ಪತಿ ನನ್ನ ಮಕ್ಕಳನ್ನು ನೋಡಿಕೊಳ್ಳುತ್ತಿದ್ದರು. ಆದರೆ 2017ರ ಆಗಸ್ಟ್ ನಲ್ಲಿ ನನ್ನ ಪತಿ ತೀರಿಹೋದರು. ಈಗ ಮಕ್ಕಳನ್ನು ನೋಡಿಕೊಳ್ಳಲು ಯಾರೂ ಇಲ್ಲ. ನನಗೂ ವಯಸ್ಸಾಗಿದೆ ಅಂತಹ ಕುಗ್ರಾಮದಲ್ಲಿ ಕೆಲಸ ನಿರ್ವಹಿಸಲು ಆಗುವುದಿಲ್ಲ. ಈ ಕಾರಣಕ್ಕೆ ನಾನು ವರ್ಗಾವಣೆ ಮಾಡುವಂತೆ ಸಿಎಂ ಕಾರ್ಯಕ್ರಮಕ್ಕೆ ಆಗಮಿಸಿದ್ದೆ ಎಂದು ತಿಳಿಸಿದರು.
#WATCH Uttara Pant Bahuguna, the teacher who was suspended by #Uttarakhand CM Trivendra Singh Rawat after she argued with him yesterday over her transfer, breaks down while talking about the incident. pic.twitter.com/mex8Z4ofLl
— ANI (@ANI) June 29, 2018