ಬೆಂಗಳೂರು: ಐಎಎಸ್ (IAS) ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಮತ್ತು ಐಪಿಎಸ್ (IPS) ಅಧಿಕಾರಿ ಡಿ.ರೂಪಾ (D Roopa) ನಡುವಿನ ಕಿತ್ತಾಟ ಪ್ರಕರಣ ವಿಧಾನ ಪರಿಷತ್‌ನಲ್ಲಿ (Legislative Council) ಸದ್ದು ಮಾಡಿದೆ. ಶೂನ್ಯ ವೇಳೆಯಲ್ಲಿ ಬಿಜೆಪಿ (BJP) ಸದಸ್ಯ ಹೆಚ್ ವಿಶ್ವನಾಥ್ (H Vishwanath) ವಿಷಯ ಪ್ರಸ್ತಾಪ ಮಾಡಿ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಆಗ್ರಹಿಸಿದರು.
ವಿಧಾನ ಪರಿಷತ್ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಬಿಜೆಪಿ ಸದಸ್ಯ ಹೆಚ್ ವಿಶ್ವನಾಥ್, ರಾಜ್ಯದ ಹಿರಿಯ ಅಧಿಕಾರಿಗಳಾದ ರೂಪಾ ಮೌದ್ಗಿಲ್ ಮತ್ತು ರೋಹಿಣಿ ಸಿಂಧೂರಿ ಬೀದಿ ಜಗಳ ಸಾಮಾಜಿಕ ಜಾಲತಾಣ, ಮಾಧ್ಯಮಗಳಲ್ಲಿ ಧಾರಾವಾಹಿಯಾಗಿ 3 ದಿನಗಳಿಂದ ಪ್ರಾರಂಭವಾಗಿದೆ ಎಂದು ಕುಟುಕಿದರು.
Advertisement
Advertisement
ರೋಹಿಣಿ ಸಿಂಧೂರಿ ಮತ್ತು ಶಾಸಕ ಸಾ.ರಾ ಮಹೇಶ್ ನಡುವಿನ ಆರೋಪಗಳ ಬಗ್ಗೆ ಸಂಧಾನವನ್ನು ಖಾಸಗಿ ಹೋಟೆಲ್ ಒಂದರಲ್ಲಿ ನಡೆಸುತ್ತಿರುವ ಐಎಎಸ್ ಅಧಿಕಾರಿ ಪಿ ಮಣಿವಣ್ಣನ್ ಅವರಿಗೆ ಸರ್ಕಾರ ಅಧಿಕಾರ ಕೊಟ್ಟಿದೆಯಾ? ರೋಹಿಣಿ ಸಿಂಧೂರಿ ವಿರುದ್ಧ ಮಹೇಶ್ ಮಾಡಿರುವ ಆರೋಪಗಳು ಇನ್ನೂ ಮುಕ್ತಾಯವಾಗದೇ ಇರುವ ಸಂದರ್ಭದಲ್ಲಿ ಸಂಧಾನ ನಡೆಸಲು ಪ್ರಯತ್ನಿಸಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿದರು.
Advertisement
ರೂಪಾ ಮೌದ್ಗಿಲ್ ಮೇಲೂ ಸಹ ಕರಕುಶಲ ನಿಗಮದಲ್ಲಿ ಹಲವಾರು ಆಪಾದನೆಗಳಿದ್ದು, ಇಲಾಖೆಗೆ ಸಂಬಂಧಿಸಿದ ಹಿರಿಯ ಅಧಿಕಾರಿಗಳು ಮತ್ತು ಮುಖ್ಯ ಕಾರ್ಯದರ್ಶಿಯವರು ಮೌನವಾಗಿದ್ದಾರೆ. ಇವೆಲ್ಲವನ್ನೂ ಮಾಧ್ಯಮಗಳ ಮೂಲಕ ನೋಡುತ್ತಿರುವ ನಾಡಿನ ಜನರು ನಮ್ಮ ಆಡಳಿತದ ವ್ಯವಸ್ಥೆಯ ಬಗ್ಗೆ ಕೆಟ್ಟದಾಗಿ ಅರ್ಥೈಸುತ್ತಿದ್ದಾರೆ ಮತ್ತು ಸರ್ಕಾರದ ಕ್ಷಮತೆಯ ಬಗ್ಗೆ ನಂಬಿಕೆ ಕಳೆದುಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.
Advertisement
ಸಾಮಾಜಿಕ ಜಾಲತಾಣಕ್ಕೆ ಇವರ ಪರವಾಗಿ ಹಣ ಕಟ್ಟುತ್ತಿರುವವರು ಇವರೇ ಸೃಷ್ಟಿಸಿಕೊಂಡಿರುವ ಇವರ ಅಭಿಮಾನಿಗಳು ಎಂದು ಅವರೇ ಹೇಳಿಕೊಳ್ಳುತ್ತಿದ್ದಾರೆ. ನಾಡಿನ ಆಡಳಿತ ಮತ್ತು ಅಭಿವೃದ್ಧಿಯ ಹಿತಕ್ಕೆ ಮಾರಕವಾಗಿರುವ ಇಬ್ಬರು ಮಹಿಳಾ ಅಧಿಕಾರಿಗಳನ್ನು ಸರ್ಕಾರ ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತಿನಲ್ಲಿಟ್ಟು, ವಿಚಾರಣೆ ಪ್ರಾರಂಭಿಸಿ. ಕಾನೂನು ಪ್ರಕಾರ ಕ್ರಮ ತೆಗೆದುಕೊಂಡು ಅಧಿಕಾರಿಗಳ ಇಂತಹ ನಡವಳಿಕೆಗಳನ್ನು ಸರ್ಕಾರ ಸಹಿಸುವುದಿಲ್ಲ ಎಂದು ಜನರಲ್ಲಿ ಭಾವನೆ ಮೂಡಿಸಬೇಕು ಎಂದರು. ಇದನ್ನೂ ಓದಿ: ಬಿಜೆಪಿಯಿಂದ ಪ್ರಣಾಳಿಕೆ ರಚನಾ ಕಾರ್ಯ ಚುರುಕು; ಜನರಿಂದ ಸಲಹೆ ಸಂಗ್ರಹಕ್ಕೆ ಚಾಲನೆ
ನೈತಿಕತೆ ಕಳೆದುಕೊಂಡ ನಡತೆಗೆಟ್ಟ ಇಂತಹ ಅಧಿಕಾರಿಗಳು ನಮ್ಮ ನಾಡಿಗೆ ಬೇಕಾ? ಕೂಡಲೇ ಈ ಅಧಿಕಾರಿಗಳನ್ನು ಅಮಾನತು ಮಾಡಿ ತನಿಖೆ ನಡೆಸಬೇಕು ಎಂದು ವಿಶ್ವನಾಥ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ಇದಕ್ಕೆ ಸರ್ಕಾರದ ಪರವಾಗಿ ಉತ್ತರಿಸಿದ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್, ಸರ್ಕಾರದ ಎಲ್ಲಾ ವಿಚಾರಗಳನ್ನು ಸಾರ್ವಜನಿಕ ವಲಯದಲ್ಲಿ ತಿಳಿಸುವ ಅಧಿಕಾರಿಗಳು ಇವರು. ಈಗಾಗಲೇ ಈ ಚಟುವಟಿಕೆ ಗಮನಿಸಿ ಇಬ್ಬರೂ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದೇವೆ. ಆದರೆ ಅವರಿಗೆ ಜಾಗ ತೋರಿಸಿಲ್ಲ. ಈ ಪ್ರಕರಣದಲ್ಲಿ ಬಿಗಿಯಾದ ಕ್ರಮ ವಹಿಸುವುದಾಗಿ ಭರವಸೆ ನೀಡಿದರು.
ಈ ಚರ್ಚೆ ನಡೆಯುವಾಗ ವಿಧಾನ ಪರಿಷತ್ತಿನ ಅಧಿಕಾರಿಗಳ ಗ್ಯಾಲರಿಯಲ್ಲಿ ರೂಪಾ ಮೌದ್ಗಿಲ್ ಪತಿ ಮನೀಷ್ ಮೌದ್ಗಿಲ್ ಕುಳಿತಿದ್ದು ವಿಶೇಷವಾಗಿತ್ತು. ಇದನ್ನೂ ಓದಿ: ರಾಜ್ಯದಲ್ಲಿ ಕೋವಿಡ್‌ನಿಂದ ಮೃತರಾದ ಕುಟುಂಬಕ್ಕೆ 446 ಕೋಟಿ ಪರಿಹಾರ ನೀಡಲಾಗಿದೆ: ಆರ್ ಅಶೋಕ್
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k