-ಗ್ರೇಡ್-1 ನಿಂದ ಗ್ರೇಡ್-2ಗೆ ಹಿಂಬಡ್ತಿ
ರಾಯಚೂರು/ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ಲೋಕಾಯುಕ್ತ ಪೊಲೀಸರಿಂದ (Lokayukta Police) ಬಂಧನಕ್ಕೊಳಗಾಗಿರುವ ತಹಶೀಲ್ದಾರ್ ಅಜಿತ್ ರೈ (Ajit Rai) ಅವರನ್ನ ಬೆಂಗಳೂರು ಕೆ.ಆರ್ ಪುರಂನಿಂದ ರಾಯಚೂರು ಸಿರಿವಾರ ತಾಲೂಕಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
Advertisement
ಬೆಂಗಳೂರಿನ ಕೆ.ಆರ್ ಪುರಂನಲ್ಲಿ (KR Puram) ಗ್ರೇಡ್-1 ತಹಶೀಲ್ದಾರ್ ಆಗಿದ್ದ ಅಜಿತ್ ರೈ ಅವರಿಗೆ ಗ್ರೇಡ್-2 ಹಿಂಬಡ್ತಿ ನೀಡಿ ಸಿರಿವಾರಕ್ಕೆ (Raichur Siriwara) ವರ್ಗಾವಣೆ ಮಾಡಿ ರಾಜ್ಯಪಾಲರ ಸೂಚನೆ ಮೇರೆಗೆ ಕಂದಾಯ ಇಲಾಖೆಯ ಸರ್ಕಾರದ ಉಪಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಕೆ.ಆರ್ ಪುರಂ ತಹಶೀಲ್ದಾರ್ ಅಜಿತ್ ರೈ ಅಮಾನತು
Advertisement
ಜೂನ್ 28ರಿಂದ ಅಮಾನತ್ತಿನಲ್ಲಿರುವ ಅಜಿತ್ ರೈ ಆದಾಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪದ ಅಡಿ ಲೋಕಾಯುಕ್ತ ಪೊಲೀಸರ ದಾಳಿಗೆ ಒಳಗಾಗಿದ್ದಾರೆ. ಆದ್ರೆ ವಿಚಾರಣೆಯಲ್ಲಿರುವ ಅಧಿಕಾರಿಯನ್ನ ವರ್ಗಾವಣೆ ಮಾಡಿದ್ದಕ್ಕೆ ಸರ್ಕಾರದ ವಿರುದ್ಧ ಜನ ಆಕ್ರೋಶ ಹೊರಹಾಕಿದ್ದಾರೆ. ಹಿಂದುಳಿದ ನೂತನ ತಾಲೂಕು ಸಿರವಾರ ಅಭಿವೃದ್ಧಿಗೆ ದಕ್ಷ ಅಧಿಕಾರಿಯನ್ನ ನೇಮಿಸುವಂತೆ ಜನ ಆಗ್ರಹಿಸಿದ್ದಾರೆ.
Advertisement
Advertisement
ಅನುಕಂಪದ ಆಧಾರದಲ್ಲಿ ಕಂದಾಯ ಇಲಾಖೆಯಲ್ಲಿ ಕೆಲಸ ಪಡೆದುಕೊಂಡಿದ್ದ ಅಜಿತ್ ರೈ ನಂತರ ಹಲವು ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಬಡ್ತಿ ಪಡೆದಿದ್ದರು. ಪ್ರಸ್ತುತ ಕೆ.ಆರ್. ಪುರಂನಲ್ಲಿ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಆದಾಯಕ್ಕಿಂತ 69% ಹೆಚ್ಚುವರಿ ಆಸ್ತಿ ಹೊಂದಿರುವ ಆರೋಪದಲ್ಲಿ ಅಜಿತ್ ರೈ ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಇದನ್ನೂ ಓದಿ: ಮಲ್ಲಿಗೆ ಮುಡಿಯುವ ಮಹಿಳೆಯರಿಗೆ ಶಾಕ್ – ಹೂವುಗಳ ಬೆಲೆ ಈಗ ಇನ್ನಷ್ಟು ದುಬಾರಿ!
ಭ್ರಷ್ಟಾಚಾರ ಆರೋಪದಡಿ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ಅಜಿತ್ ರೈ ಮನೆ ಮೇಲೆ ಬುಧವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ಸಹಕಾರನಗರದ ನಿವಾಸ ಸೇರಿ 12 ಕಡೆ ದಾಳಿ ಮಾಡಿ ಪರಿಶೀಲನೆ ಮಾಡಿದ್ದರು. ಪರಿಶೀಲನೆ ವೇಳೆ 40 ಲಕ್ಷ ರೂ. ನಗದು, ಕೋಟ್ಯಂತರ ಮೌಲ್ಯದ ಭೂ ದಾಖಲಾತಿ ಪತ್ರಗಳು, ದುಬಾರಿ ಬೆಲೆಯ ಕಾರು ಖರೀದಿಸಿದ ರಶೀದಿಗಳು, ದೇಶ-ವಿದೇಶ ಬ್ರ‍್ಯಾಂಡ್‌ನ ಮದ್ಯ ಪತ್ತೆಯಾಗಿತ್ತು. ಸತತ 30 ಗಂಟೆಗಳ ಪರಿಶೀಲನೆ ವೇಳೆ ಅಕ್ರಮ ಆಸ್ತಿ ಗಳಿಕೆ ಮಾಡಿರುವುದು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಅಜಿತ್ ರೈನನ್ನ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು.
ಆರೋಪಿಯನ್ನು 7 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿತ್ತು. ಲೋಕಾಯುಕ್ತ ಪೊಲೀಸರು 10 ದಿನಗಳ ಕಸ್ಟಡಿಗೆ ಕೇಳಿದ್ದರು. ಆದರೆ ನ್ಯಾಯಾಲಯ 7 ದಿನ ಪೊಲೀಸ್ ಕಸ್ಟಡಿಗೆ ಅವಕಾಶ ನೀಡಿದೆ. ಅಜಿತ್ ರೈ ಪುತ್ತೂರಿನಲ್ಲೂ ಆಸ್ತಿ ಮಾಡಿದ್ದು, ಸ್ವತಃ ಊರಿಗೆ ಕರೆದುಕೊಂಡು ಹೋಗಿ ತನಿಖೆ ನಡೆಸಲು ಪೊಲೀಸರಿಗೆ ನ್ಯಾಯಾಲಯ ಅವಕಾಶ ನೀಡಿತ್ತು.
Web Stories