ಬೆಳಗಾವಿ: ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಫುಲ್ ಆಕ್ಟೀವ್ ಆಗಿದ್ದು ರಾಜಕೀಯ ವೈರಿ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಅವರನ್ನ ಸೋಲಿಸಲು ಶತಾಯಗತಾಯ ಕಸರತ್ತು ನಡೆಸಿದ್ದಾರೆ.
Advertisement
ಬೆಳಗಾವಿ (Belagavi) ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನ ಸೋಲಿಸಲು ರಮೇಶ್ ಜಾರಕಿಹೊಳಿ ಮರಾಠಾ ಸಮುದಾಯದ (Marathi Community) ಶಿಷ್ಯನ ಜೊತೆ ಬಿಜೆಪಿ (BJP) ಹಿರಿಯ ನಾಯಕರನ್ನ ಭೇಟಿಯಾಗ್ತಿದ್ದಾರೆ. ಕಾಂಗ್ರೆಸ್ (Congress) ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿನಿಧಿಸುವ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಮರಾಠ ಸಮುದಾಯದ ಮತಗಳೇ ನಿರ್ಣಾಯಕವಾಗಿವೆ. ಹೀಗಾಗಿ ಮರಾಠ ಸಮಾಜದ ಆಪ್ತ ನಾಗೇಶ್ ಮನ್ನೋಳಕರ್‌ಗೆ ಟಿಕೆಟ್ ಕೊಡಿಸಲು ರಮೇಶ್ ಜಾರಕಿಹೊಳಿ ಯತ್ನಿಸುತ್ತಿದ್ದಾರೆ ಎಂಬ ಚರ್ಚೆಗಳು ನಡೆಯುತ್ತಿವೆ. ಇದನ್ನೂ ಓದಿ: ಮೈದಾನ ಖಾಲಿ ಇದೆ, ನಾವೂ ತಯಾರಿದ್ದೇವೆ ನೀವು ಅಖಾಡಕ್ಕೆ ಧುಮುಕಿ – ಪರೋಕ್ಷವಾಗಿ ಜಾರಕಿಹೊಳಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಆಹ್ವಾನ
Advertisement
Advertisement
ಅದಕ್ಕೆ ಪುಷ್ಟಿ ನೀಡುವಂತೆ ನಾಗೇಶ್ ಮನ್ನೋಳಕರ್ ಅವರನ್ನ ರಮೇಶ್ ಜಾರಕಿಹೊಳಿ ಬಿಜೆಪಿ ನಾಯಕರಿಗೆ ಭೇಟಿ ಮಾಡಿಸುತ್ತಿದ್ದಾರೆ. ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai), ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಸೇರಿ ಹಲವು ನಾಯಕರ ಭೇಟಿಯಾಗಿ ಟಿಕೆಟ್ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
Advertisement
ಹಿಂಡಲಗಾ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿರುವ ಶಿಷ್ಯ ನಾಗೇಶ್ ಮನ್ನೋಳಕರ್ ಜೊತೆ ಬೆಂಗಳೂರು, ದೆಹಲಿ, ನಾಗ್ಪುರಗೆ ರಮೇಶ್ ಜಾರಕಿಹೊಳಿ ಟೂರ್ ನಡೆಸಿದ್ದು ರಮೇಶ್ ಜಾರಕಿಹೊಳಿ ನಡೆಗೆ ಬೆಳಗಾವಿ ಜಿಲ್ಲಾ ಬಿಜೆಪಿಯಲ್ಲಿ ಚರ್ಚೆಗಳು ಪ್ರಾರಂಭವಾಗುತ್ತಿದೆ. ಸೋತ ಕ್ಷೇತ್ರದಲ್ಲೇ ಮತ್ತೆ ಗೆಲುವು ಸಾಧಿಸಲು ಮಾಜಿ ಶಾಸಕ ಸಂಜಯ್ ಪಾಟೀಲ್ ಕಸರತ್ತು ನಡೆಸುತ್ತಿದ್ದರೆ, ಮತ್ತೊಂದೆಡೆ ಕಟ್ಟಾ ಹಿಂದೂ ಕಾರ್ಯಕರ್ತ, ಬಿಜೆಪಿ ಬೆಳಗಾವಿ ಗ್ರಾಮೀಣ ಮಂಡಲ ಅಧ್ಯಕ್ಷ ಧನಂಜಯ ಜಾಧವ್ ಸಹ ಟಿಕೆಟ್ ರೇಸ್‌ನಲ್ಲಿದ್ದಾರೆ. ಇದನ್ನೂ ಓದಿ: ಚುನಾವಣೆ ಗೆಲ್ಲಲು BJP ಹಣ, ಹೆಂಡದ ಹೊಳೆ ಹರಿಸುತ್ತಿದೆ- ಡಿಂಪಲ್ ಯಾದವ್ ಕಿಡಿ
ಇನ್ನೂ ಬೆಳಗಾವಿ ಗ್ರಾಮೀಣ ಕ್ಷೇತ್ರ ಗೆಲ್ಲಲೇಬೇಕೆಂದು ಪಣ ತೊಟ್ಟಿರುವ ಗೋಕಾಕ್ ಸಾಹುಕಾರ್ ತಮ್ಮ ಶಿಷ್ಯನಿಗೆ ಟಿಕೆಟ್ ಕೊಡಿಸಲು ಮುಂದಾಗಿದ್ದಾರೆ. ಹೀಗಾಗಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿ ಯಾರು ಅನ್ನೋದೇ ಇನ್ನೂ ಸಸ್ಪೆನ್ಸ್ ಆಗಿ ಉಳಿದುಕೊಂಡಿದೆ.