– ಸಚಿವರನ್ನು ಭೇಟಿಯಾಗಿ ಕ್ಷಮೆಯಾಚಿಸಿದ ಕಂಡಕ್ಟರ್
ಬೆಂಗಳೂರು: ಚಿಲ್ಲರೆ ಇಲ್ಲದ ಕಾರಣಕ್ಕೆ ಕಂಡಕ್ಟರ್ (Consuctor) ಸಚಿವರನ್ನೇ ಬಸ್‌ನಿಂದ ಕೆಳಗಿಳಿಸಿದ್ದ ನಿರ್ವಾಹಕನ ಅಮಾನತು ತೆರವಿಗೆ ಸಚಿವ ಬೈರತಿ ಸುರೇಶ್ (Byrathi Suresh) ಆದೇಶ ಹೊರಡಿಸಿದ್ದಾರೆ.
ಜುಲೈ 11ರ ರಾತ್ರಿ ಸಾರಿಗೆ ಸಚಿವರು ದಿಢೀರನೆ ಬಿಎಂಟಿಸಿ (BMTC) ಬಸ್‌ಗಳಲ್ಲಿ ಪ್ರಯಾಣಿಸಿದ್ದರು. ಅಂದು ಕೆಂಪೇಗೌಡ ಬಸ್ ನಿಲ್ದಾಣದಿಂದ ನಾಗಶೆಟ್ಟಿಹಳ್ಳಿಗೆ ಸಂಚರಿಸುತ್ತಿದ್ದ ಬಸ್ನಲ್ಲಿ ಪ್ರಯಾಣಿಸುವಾಗ ನಿರ್ವಾಹಕ ಟಿ.ಜಿ. ರಾಮಕೃಷ್ಣ ಎಂಬುವರು ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ಸಚಿವರನ್ನು ಬಸ್ಸಿನಿಂದ ಕೆಳಗೆ ಇಳಿಸಿದ್ದರು. ಈ ಹಿನ್ನೆಲೆಯಲ್ಲಿ ಬಿಎಂಟಿಸಿ ಸಂಸ್ಥೆಯು ರಾಮಕೃಷ್ಣ ಅವರನ್ನು ಅಮಾನತುಗೊಳಿಸಿತ್ತು. ಇದನ್ನೂ ಓದಿ: BS-III ವಾಹನಗಳಿಗೆ E20 ಎಫೆಕ್ಟ್- ರಬ್ಬರ್ ಭಾಗ, ಗ್ಯಾಸ್ಕೆಟ್ ಬದಲಾಯಿಸಬೇಕು: ಗಡ್ಕರಿ
ಇಂದು ಸಚಿವರನ್ನು ಭೇಟಿಯಾದ ಕಂಡಕ್ಟರ್ ತಮ್ಮ ತಪ್ಪಿನ ಬಗ್ಗೆ ಸಚಿವರ ಬಳಿ ಕ್ಷಮೆಯಾಚಿಸಿದ್ದಾರೆ. ಈ ಹಿನ್ನೆಲೆ ಸಾರಿಗೆ ಸಚಿವರು ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕೆಂದು ಸೂಚಿಸಿ ರಾಮಕೃಷ್ಣ ಅಮಾನತನ್ನು ರದ್ದುಪಡಿಸಿ ಕರ್ತವ್ಯ ನಿರ್ವಹಿಸಲು ಅವಕಾಶ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವರ ಆದೇಶ ನೀಡಿದ್ದಾರೆ. ಇದನ್ನೂ ಓದಿ: ಕಾಫಿ ತೋಟದಲ್ಲಿ ಕೆಲಸದ ವೇಳೆ ಮರ ಬಿದ್ದು ಇಬ್ಬರು ಮಹಿಳೆಯರ ದುರ್ಮರಣ
ಇನ್ನು ಚಿಲ್ಲರೆ ವಿಚಾರದಲ್ಲಿ ಪ್ರಯಾಣಿಕರನ್ನು ಶೋಷಣೆ ಮಾಡಬಾರದು ಎಂದು ಬೈರತಿ ಸುರೇಶ್ ಬಿಎಂಟಿಸಿ ಸೇರಿದಂತೆ ಎಲ್ಲಾ ಸಾರಿಗೆ ನಿಗಮಗಳ ನಿರ್ವಾಹಕರು ಮತ್ತು ಚಾಲಕರಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ಪ್ರಯಾಣಿಕರನ್ನು ಕೆಳಗಿಳಿಸುವ ನಿರ್ವಾಹಕರ ಧೋರಣೆ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಅಲ್ಲದೇ, ಬಿಎಂಟಿಸಿ ಬಸ್ಸಿನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ನನಗೂ ಇಂತಹ ಅನುಭವ ಆಗಿದೆ. ಚಿಲ್ಲರೆ ನೆಪವೊಡ್ಡಿ ಪ್ರಯಾಣಿಕರನ್ನು ಅರ್ಧ ದಾರಿಯಲ್ಲಿ ಇಳಿಸುವುದು ಅಮಾನವೀಯವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರನ್ನು ಶೋಷಣೆ ಮಾಡಬಾರದು ಎಂದು ಸೂಚಿಸಿದ್ದಾರೆ. ಇದನ್ನೂ ಓದಿ: ಕೆಲಸದ ಸಮಯದಲ್ಲಿ ಪಾರ್ಟಿ – 6 ಮಂದಿ ಪಿಡಿಓಗಳು ಸಸ್ಪೆಂಡ್
ಕರ್ತವ್ಯದಲ್ಲಿ ಸಹನೆ ಇರಲಿ:
ಶಕ್ತಿ ಯೋಜನೆಯಡಿ ಪ್ರಯಾಣಿಸುವ ಮಹಿಳೆಯರು ಮತ್ತು ಇತರ ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಯಾರ ಮೇಲೆಯೂ ದುರ್ವರ್ತನೆ ತೋರಬಾರದು. ಹಾಗೊಂದು ವೇಳೆ ದೂರುಗಳ ಬಂದರೆ ತಪ್ಪಿತಸ್ಥ ನಿರ್ವಾಹಕರು ಮತ್ತು ಚಾಲಕರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಕರ್ನಾಟಕ ಮತದಾರರ ಪಟ್ಟಿಯಿಂದ 84.31 ಲಕ್ಷ ಮಂದಿ ಔಟ್: ಚುನಾವಣಾ ಆಯೋಗ
