ಮಂಗಳೂರು: ನಗರದ ವಿಮಾನ ನಿಲ್ದಾಣದ ಟಿಕೆಟ್ ಕೌಂಟರ್ ಬಳಿ ಅನುಮಾನಾಸ್ಪದವಾದ ಲ್ಯಾಪ್‍ಟಾಪ್ ಬ್ಯಾಗ್ ಪತ್ತೆಯಾಗಿತ್ತು. ಅನುಮಾನ ಹಿನ್ನೆಲೆ ಬಾಂಬ್ ಸ್ಕ್ವಾಡ್ ತಂಡದಿಂದ ತಪಾಸಣೆ ನಡೆಸಿದಾಗ ಸಜೀವ ಬಾಂಬ್ ಪತ್ತೆಯಾಗಿದೆ.
ಬಾಂಬ್ ಪತ್ತೆಯಾದ ಕೂಡಲೇ ಎಚ್ಚೆತ್ತ ಸಿಬ್ಬಂದಿ, ವಿಮಾನ ನಿಲ್ದಾಣದಲ್ಲಿನ ಪ್ರಯಾಣಿಕರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿದ್ದಾರೆ. ಬಾಂಬ್ ಇರಿಸಲಾಗಿದ್ದ ಬ್ಯಾಗ್ ನ್ನು ನಿಲ್ದಾಣದ ಆವರಣದ ಹೊರಗೆ ತರಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸಿಐಎಸ್‍ಎಫ್ ಭದ್ರತಾ ಪಡೆ ನಿಲ್ದಾಣದ ಸುತ್ತಲೂ ಬಿಗಿ ಬಂದೋಬಸ್ತ್ ಕೈಗೊಂಡಿದೆ.
Advertisement
Advertisement
ಆಟೋದಲ್ಲಿ ಬಂದ ಅಪರಿಚಿತ ವ್ಯಕ್ತಿ ಬ್ಯಾಗ್ ನ್ನು ವಿಮಾನ ನಿಲ್ದಾಣದಲ್ಲಿ ಬಿಟ್ಟು ಹೋಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಸ್ಥಳಕ್ಕೆ ಬಾಂಬ್ ನಿಷ್ಕ್ರೀಯ ದಳದ ತಂಡ ಆಗಮಿಸಿ ಪರಿಶೀಲನೆ ನಡೆಸುತ್ತಿದೆ. ಸದ್ಯ ಸಜೀವ ಬಾಂಬ್ ನ್ನು ಪ್ರೂಫ್ ವೆಹಿಕಲ್ ನಲ್ಲಿ ಇರಿಸಲಾಗಿದೆ.
Advertisement