-ಸ್ಫೋಟವಾಗಿದ್ರೆ 500 ಮೀಟರ್ ಹಾನಿ ಸಾಧ್ಯತೆ
-ಉಡುಪಿಯಲ್ಲಿಯೂ ಕಟ್ಟೆಚ್ಚರ
ಮಂಗಳೂರು: ವಿಮಾನ ನಿಲ್ದಾಣದಲ್ಲಿ ಬರೋಬ್ಬರಿ 10 ಕೆಜಿ ತೂಕದ ಬಾಂಬ್ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಒಂದು ವೇಳೆ 10 ಕೆಜಿ ತೂಕದ ಬಾಂಬ್ ಸ್ಫೋಟವಾಗಿದ್ರೆ ಸುಮಾರು 500 ಮೀಟರ್ ಸುತ್ತಲಿನ ವ್ಯಾಪ್ತಿಯಲ್ಲಿ ಹಾನಿಯಾಗುವ ಸಾಧ್ಯತೆ ಇತ್ತು.
ಇಂದು ಬೆಳಗ್ಗೆ ಸುಮಾರು 10 ಗಂಟೆಗೆ ವಿಮಾನ ನಿಲ್ದಾಣದ ಟಿಕೆಟ್ ಕೌಂಟರ್ ಬಳಿ ಅನುಮಾನಾಸ್ಪದವಾದ ಲ್ಯಾಪ್‍ಟಾಪ್ ಬ್ಯಾಗ್ ಪತ್ತೆಯಾಗಿತ್ತು. ಸಂಶಯದ ಮೇಲೆ ಬ್ಯಾಗ್ ಪರಿಶೀಲನೆ ನಡೆಸಿದಾಗ ಜೀವಂತ ಬಾಂಬ್ ಪತ್ತೆಯಾಗಿತ್ತು. ಕೂಡಲೇ ಎಚ್ಚೆತ್ತ ಸಿಬ್ಬಂದಿ ಪ್ರಯಾಣಿಕರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿ, ನಿಲ್ದಾಣದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದಾರೆ. ಇತ್ತ ಸಿಐಎಸ್‍ಎಫ್ ಸಿಬ್ಬಂದಿ ಸಜೀವ್ ಬಾಂಬ್ ನ್ನು ನಿಲ್ದಾಣದಿಂದ ಹೊರ ತಂದು ನಿಷ್ಕ್ರಿಯ ವಾಹನದಲ್ಲಿ ಇರಿಸಲಾಗಿದೆ.
Advertisement
Advertisement
ಆಟೋದಲ್ಲಿ ಬಂದ ಅಪರಿಚಿತ ವ್ಯಕ್ತಿಯೋರ್ವ ಬ್ಯಾಗ್ ನ್ನು ಟಿಕೆಟ್ ಕೌಂಟರ್ ಬಳಿ ಬಿಟ್ಟು ಹೋಗಿರುವ ಬಗ್ಗೆ ಮಾಹಿತಿಗಳೂ ಲಭ್ಯವಾಗುತ್ತಿದೆ. ಬೆಂಗಳೂರಿನ ಮಾದರಿಯಲ್ಲಿಯೇ ಮಂಗಳೂರಿನಲ್ಲಿ ಸ್ಫೋಟಕ್ಕೆ ಸಂಚು ರೂಪಿಸಲಾಗಿತ್ತಾ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ. ಬೆಂಗಳೂರಿನಿಂದ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಮಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ.
Advertisement
Advertisement
ಇತ್ತ ಮಂಗಳೂರಿನಿಂದ ಉಡುಪಿಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿ ರೈಲ್ವೇ ನಿಲ್ದಾಣ, ಬಸ್ ನಿಲ್ದಾಣ, ನಗರದ ಪ್ರಮುಖ ರಸ್ತೆಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಶಂಕಿತ ಮಂಗಳೂರಿನಿಂದ ಉಡುಪಿಗೆ ರೈಲ್ವೇ ಮೂಲಕ ಪ್ರಯಾಣ ಬೆಳೆಸಿರುವ ಅನುಮಾನದ ನಿಲ್ದಾಣದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಕೆಲವು ದಿನಗಳ ಹಿಂದ ತಮಿಳುನಾಡಿನ ಪೊಲೀಸ್ ಅಧಿಕಾರಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯ ಇಬ್ಬರು ಯುವಕರನ್ನು ಬಂಧಿಸಲಾಗಿತ್ತು. ಹೀಗಾಗಿ ಉಡುಪಿ ಸೇರಿದಂತೆ ದಕ್ಷಿಣ ಕನ್ನಡದ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.