ಚಿಕ್ಕಮಗಳೂರು: ಗೃಹಿಣಿ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ತಾನೇ ಪತ್ನಿಗೆ ರಾಗಿ ಮುದ್ದೆಗೆ ಸೈನೈಡ್ (Cyanide) ಬೆರೆಸಿ ನೀಡಿದ್ದು, ಅದನ್ನು ಸೇವಿಸಿ ಪತ್ನಿ ಸಾವನ್ನಪ್ಪಿದ್ದಾಗಿ ಹಂತಕ ಪತಿ ಬಾಯ್ಬಿಟ್ಟಿದ್ದಾನೆ.
ಕಾಫಿನಾಡಿನಲ್ಲಿ (Chikkamagaluru) ನಡೆದಿರುವ ಶ್ವೇತಾ ಮರ್ಡರ್ ಕೇಸ್ ಪೊಲೀಸರನ್ನೇ ಬೆಚ್ಚಿ ಬೀಳಿಸಿದೆ. ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾಳೆ ಎಂದು ಪತ್ನಿಯನ್ನು ಪತಿ ದರ್ಶನ್ ಹತ್ಯೆ ಮಾಡಿದ್ದಾನೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.
Advertisement
Advertisement
ಹತ್ಯೆಯ ಹಿಂದಿನ ದಿನ ರಾತ್ರಿ ದರ್ಶನ್ ರಾಗಿ ಮುದ್ದೆಗೆ ಸೈನೈಡ್ ಬೆರೆಸಿ ಪತ್ನಿಗೆ ನೀಡಿದ್ದ. ಶ್ವೇತಾ ಸಾವನ್ನಪ್ಪಿದ್ದ ಬಳಿಕ ಕೈಗೆ ಸಿರಿಂಜ್ ಚುಚ್ಚಿ ಆತ್ಮಹತ್ಯೆ ಎಂದು ಬಿಂಬಿಸಲು ಪ್ಲ್ಯಾನ್ ಮಾಡಿದ್ದ. ಆದರೆ ಪ್ಲ್ಯಾನ್ ಉಲ್ಟಾ ಆಗುವ ಆತಂಕದಲ್ಲಿ ಪತ್ನಿಗೆ ಹಾರ್ಟ್ ಅಟ್ಯಾಕ್ ಆಗಿದೆ ಎಂದು ಹೇಳಿ ನಾಟಕವಾಡಿದ್ದಾನೆ. ಶ್ವೇತಾ ಸಂಬಂಧಿಕರು ಬರುವ ಮೊದಲೇ ಅಂತ್ಯಕ್ರಿಯೆಗೆ ಸಿದ್ಧತೆಯೂ ಮಾಡಿದ್ದ.
Advertisement
ತಾವು ಬರುವುದಕ್ಕೂ ಮುನ್ನ ಮಗಳ ಅಂತ್ಯಕ್ರಿಯೆ ಮಾಡಲು ಮುಂದಾಗಿದ್ದರಿಂದ ಅನುಮಾನಗೊಂಡ ಶ್ವೇತಾ ಕುಟುಂಬಸ್ಥರು ದರ್ಶನ್ ವಿರುದ್ಧ ಕೊಲೆ ಪ್ರಕರಣ ದಾಖಲು ಮಾಡಿದ್ದರು. ನಂತರ ಶ್ವೇತಾ ಮರಣೋತ್ತರ ಪರೀಕ್ಷೆ ನಡೆಸಿ, ಪ್ರಾಥಮಿಕ ವರದಿಯಲ್ಲಿ ಆಕೆಗೆ ಹೃದಯಾಘಾತ ಆಗಿಲ್ಲ ಎಂಬುದು ಬಹಿರಂಗವಾಗಿದೆ. ವರದಿ ಬಂದ ಬಳಿಕ ದರ್ಶನ್ನನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ಆತ ರಾಗಿ ಮುದ್ದೆಯಲ್ಲಿ ಸೈನೆಡ್ ಬೆರೆಸಿರುವುದಾಗಿ ಸತ್ಯ ಒಪ್ಪಿಕೊಂಡಿದ್ದಾನೆ. ಇದನ್ನೂ ಓದಿ: ಮಗಳ ಎದುರಲ್ಲೇ ಚಾಕು ಇರಿದು ತಾಯಿಯ ಹತ್ಯೆಗೈದ ದುಷ್ಕರ್ಮಿ
Advertisement
ದರ್ಶನ್ ಬೆಂಗಳೂರಿನ ಕೊಡಿಗೆಹಳ್ಳಿ ಬಳಿ ಟ್ರೂ ಮೆಡಿಕ್ಸ್ ಲ್ಯಾಬ್ ನಡೆಸುತ್ತಿದ್ದ. ಕಾಲೇಜು ದಿನಗಳಿಂದಲೂ ದರ್ಶನ್ ಮತ್ತು ಶ್ವೇತಾ ಪ್ರೀತಿಸುತ್ತಿದ್ದರು. 3 ವರ್ಷಗಳ ಹಿಂದೆ ಮದುವೆಯಾಗಿದ್ದರು. ಕೆಲ ತಿಂಗಳಿಂದ ಟ್ರೂ ಮೆಡಿಕ್ಸ್ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಜೊತೆ ದರ್ಶನ್ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ. ಇದನ್ನು ತಿಳಿದ ಶ್ವೇತಾ ತನ್ನ ಗಂಡನ ಜೊತೆ ಸಂಬಂಧ ಬಿಡುವಂತೆ ಕಾಲ್ಮಾಡಿ ಎಚ್ಚರಿಕೆ ನೀಡಿದ್ದಳು.
ಪ್ರೇಯಸಿಗೆ ಪತ್ನಿ ಎಚ್ಚರಿಕೆ ನೀಡಿರುವುದು ತಿಳಿಯುತ್ತಿದ್ದಂತೆ ದರ್ಶನ್ ಆಕೆಯ ಹತ್ಯೆಗೆ ಪ್ಲ್ಯಾನ್ ಮಾಡಿದ್ದ. ಆಕೆಯನ್ನು ಬೆಂಗಳೂರಿನಿಂದ ದೇವವೃಂದ ಗ್ರಾಮಕ್ಕೆ ಕರೆತಂದು ಹತ್ಯೆ ಮಾಡಿದ್ದಾನೆ. ಈ ಬಗ್ಗೆ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಕೌಟುಂಬಿಕ ಕಲಹ – ಪತ್ನಿಯ ತಲೆಗೆ ಕಬ್ಬಿಣದ ರಾಡ್ನಿಂದ ಹೊಡೆದು ಹತ್ಯೆಗೈದ ಪತಿ