ಬಳ್ಳಾರಿ: ಬಹಿರ್ದೆಸೆಗೆ ತೆರಳಿದ್ದ 10 ವರ್ಷದ ಬಾಲಕಿ ಅನುಮಾನಾಸ್ಪದವಾಗಿ ಸಾವನ್ನಪಿರುವ ಘಟನೆ ವಿಜಯನಗರ (Vijayanagara) ಜಿಲ್ಲೆ ಹಡಗಲಿ ತಾಲೂಕಿನ ದುಂಗಾವತಿ ತಾಂಡಾದಲ್ಲಿ ಬೆಳಕಿಗೆ ಬಂದಿದೆ.
ಅನಸೂಯಾ (10) ಮೃತ ಬಾಲಕಿ. ತಂದೆ ರವಿ ಹಾಗೂ ತಾಯಿ ಲಕ್ಷ್ಮಿ ದಂಪತಿಗೆ ಅನಸೂಯಾ ಒಬ್ಬಳೇ ಮಗಳು. ಬಾಲಕಿಯ ಮೃತ ದೇಹ ಕಂಡು ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಹೊಂಡದ ಪಕ್ಕದಲ್ಲಿ ಮೃತ ದೇಹ, ಮತ್ತೊಂದು ಕಡೆ ನೀರಿನ ತಂಬಿಗೆ ಪತ್ತೆಯಾಗಿದೆ. ಇದರಿಂದ ಅನುಮಾನಗೊಂಡ ಪೋಷಕರು ಕೊಲೆ ಆರೋಪ ಮಾಡಿದ್ದಾರೆ. ನನ್ನ ಮಗಳ ಕೊಲೆಯಾಗಿದೆ, ನಮಗೆ ನ್ಯಾಯಾ ಸಿಗಬೇಕೆಂದು ಪೋಷಕರು ಒತ್ತಾಯಿಸಿದ್ದಾರೆ.
ಸ್ಥಳಕ್ಕೆ ವಿಜಯನಗರ ಎಸ್ಪಿ ಶ್ರೀಹರಿಬಾಬು ಹಾಗೂ ಶಾಸಕ ಕೃಷ್ಣಾ ನಾಯ್ಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: AR Wedding Celebrations: ಉದ್ಯಮಿ ಅಂತ ಹೇಳ್ಕೊಂಡು ಆಹ್ವಾನವಿಲ್ಲದೇ ಬಂದಿದ್ದ ಇಬ್ಬರ ವಿರುದ್ಧ ಕೇಸ್!
ತಂಬ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಲಕಿಯ FSL ವರದಿ ಬಂದ ಬಳಿಕ ಸತ್ಯಾಸತ್ಯತೆ ಬೇಳಕಿಗೆ ಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಅಂಬಾನಿ ಮದುವೆಯಲ್ಲಿ ಯಶ್ ಜೊತೆ ‘ಜವಾನ್’ ಡೈರೆಕ್ಟರ್ ಮಾತುಕತೆ- ವಿಡಿಯೋ ವೈರಲ್