ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಮೃತ ಮಹಿಳೆಯನ್ನು ನಿಹಾರಿಕಾ (Niharika) ಎಂದು ಗುರುತಿಸಲಾಗಿದೆ. ಈಕೆ ಖಾಸಗಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದರು. ಇದೀಗ ಇವರ ಮೃತದೇಹವು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೃತಳ ಕುಟುಂಬಸ್ಥರಿಂದ ಗಂಡ (Niharika Husband) ನೇ ಕೊಲೆ ಮಾಡಿರುವ ಆರೋಪ ಕೇಳಿಬರುತ್ತಿದೆ. ಯಾಕೆಂದರೆ ಗಂಡನ ಕಿರುಕುಳ ತಾಳಲಾರದೆ ನಿಹಾರಿಕಾ ಅಕ್ಕನ ಮನೆ ಸೇರಿದ್ದರು. ಆದರೆ ಎರಡು ದಿನಗಳ ಹಿಂದೆಯಷ್ಟೇ ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆಂದು ಹೇಳಿ ಕರೆದುಕೊಂಡು ಹೋಗಿದ್ದ.
ಶಾಲೆಯ ಕಾರ್ಯಕ್ರಮಕ್ಕೆ ತೆರಳುವ ವಿಚಾರವಾಗಿ ನಿಹಾರಿಕಾಗೆ ನಿಂದಿಸಿದ್ದಾನೆ. ಈ ವೇಳೆ ಮಾತಿಗೆ ಮಾತು ಬೆಳೆದು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗುತ್ತಿದೆ. ಇದನ್ನೂ ಓದಿ: ಒಂದೂವರೆ ವರ್ಷದ ಅವಧಿಯಲ್ಲಿ ಮೂವರು ಪ್ರಭಾವಿ ಬಿಜೆಪಿ ನಾಯಕರ ನಿಧನ
ಸದ್ಯ ಘಟನೆ ಸಂಬಂಧ ಮೃತಳ ಕುಟುಂಬಸ್ಥರು ಪುಟ್ಟೆನಹಳ್ಳಿ ಪೊಲೀಸ್ ಠಾಣೆ (Puttenahalli Police Station) ಯಲ್ಲಿ ದೂರು ದಾಖಲು ಮಾಡಿದ್ದಾರೆ.