ಬೆಂಗಳೂರು: ಮಡಿವಾಳ ಲಾಡ್ಜ್‌ನಲ್ಲಿ (Lodge) ಪುತ್ತೂರು ಯುವಕ ತಕ್ಷಿತ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆಯ ವರದಿ (Postmortem Report) ಪೊಲೀಸರ ಕೈ ಸೇರಿದೆ. ವರದಿಯಲ್ಲಿ ತಕ್ಷಿತ್‌ಗೆ ಕಿಡ್ನಿ ಫೇಲ್ಯೂರ್ (Kidney Failure) ಆಗಿರೋದು ಪತ್ತೆಯಾಗಿದೆ.
ಕಿಡ್ನಿ ವೈಫಲ್ಯ ಮಾತ್ರವಲ್ಲದೇ ಯುವಕ ತಕ್ಷಿತ್‌ಗೆ ಲಿವರ್ ಸಮಸ್ಯೆ ಹಾಗೂ ಅಸ್ತಮಾ ಖಾಯಿಲೆ ಇರೋದು ಕೂಡ ಪತ್ತೆಯಾಗಿದೆ. ಹೀಗಾಗಿ ಸಾವನ್ನಪ್ಪಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಶಬರಿಮಲೆಗೆ ಭೇಟಿ| ಲ್ಯಾಂಡಿಂಗ್ ವೇಳೆ ಹೂತು ಹೋಯ್ತು ಮುರ್ಮು ಪ್ರಯಾಣಿಸಿದ್ದ ಹೆಲಿಕಾಪ್ಟರ್
ತಕ್ಷಿತ್ ಹಾಗೂ ಯುವತಿ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಮದುವೆ ಮಾಡಿಕೊಳ್ಳಬೇಕು ಎಂದು ಮಾತನಾಡಿಕೊಂಡಿದ್ದರು. 20 ದಿನಗಳ ಹಿಂದೆಯೇ ಬೆಂಗಳೂರಿಗೆ ಬಂದು ಬೇರೆ ಬೇರೆ ಲಾಡ್ಜ್‌ನಲ್ಲಿ ವಾಸವಿದ್ದರು. 8 ದಿನ ಮಡಿವಾಳದ ಲಾಡ್ಜ್‌ಗೆ ಶಿಫ್ಟ್ ಆಗಿದ್ದರು ಎಂದು ತಿಳಿದುಬಂದಿದೆ. ಸದ್ಯ ಪೊಲೀಸರು ಯುವಕನ ಜೊತೆಯಲ್ಲಿದ್ದ ಯುವತಿಯ ಹೇಳಿಕೆಯನ್ನ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ – ಅಡುಗೆ ಸಿಬ್ಬಂದಿಗೆ ಗೇಟ್‌ಪಾಸ್
ಮೃತ ತಕ್ಷಿತ್ ಡ್ರಿಂಕ್ಸ್ ಹಾಗೂ ಚೈನ್ ಸ್ಮೋಕರ್ ಆಗಿದ್ದ. ತಕ್ಷಿತ್ ತಂದೆ-ತಾಯಿಗೂ ಅಸ್ತಮಾ ಇರೋದು ಪತ್ತೆಯಾಗಿದೆ. ಸದ್ಯ ಪೊಲೀಸರು ಕೆಲ ಮಾದರಿ ಸಂಗ್ರಹಿಸಿ ಎಫ್‌ಎಸ್‌ಎಲ್‌ಗೆ ಕಳುಹಿಸಿದ್ದಾರೆ. ಎಫ್‌ಎಸ್‌ಎಲ್ ವರದಿ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಘಟನೆ ಸಂಬಂಧ ಮಡಿವಾಳ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆಗೆ ದಿನಾಂಕ ನಿಗದಿ