ರಾಯಚೂರು: ನಗರದ ಮಾಣಿಕ್ ಪ್ರಭು ದೇವಸ್ಥಾನದ ಹಿಂದಿನ ಬೆಟ್ಟದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾಳೆ.
ನವೋದಯ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ 23 ವರ್ಷದ ಮಧು ಪತ್ತಾರ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಿವಿಲ್ ಇಂಜಿನಿಯರಿಂಗ್ 5ನೇ ಸೆಮಿಸ್ಟರ್ ಓದುತ್ತಿದ್ದ ವಿದ್ಯಾರ್ಥಿನಿ ನನ್ನ ಸಾವಿಗೆ ನಾನೇ ಕಾರಣ, ಪರೀಕ್ಷೆಗಳಲ್ಲಿ ಪದೇ ಪದೇ ಫೇಲಾಗುತ್ತಿದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬರೆದಿರುವ ಡೆತ್ ನೋಟ್ ಪತ್ತೆಯಾಗಿದೆ.
Advertisement
Advertisement
ಶನಿವಾರ ಏಪ್ರಿಲ್ 13ರಂದು ಮನೆಯಿಂದ ಹೊರಟ ವಿದ್ಯಾರ್ಥಿನಿ ವಾಪಸ್ ಮನೆಗೆ ಬಂದಿಲ್ಲ. ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಹೀಗಾಗಿ ಇದು ಆತ್ಮಹತ್ಯೆ ಅಲ್ಲ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂದು ವಿದ್ಯಾರ್ಥಿನಿ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ.
Advertisement
ನೇತಾಜಿನಗರ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ಮೃತಳ ಪೋಷಕರು ಕೊಲೆ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದ್ದಾರೆ. ಪ್ರಕರಣ ತನಿಖೆ ನಡೆಸಿರುವ ಪೊಲಿಸರು ಓರ್ವ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.