ಬೆಂಗಳೂರು: ದಾವಣಗೆರೆ ಮೂಲದ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಬೆಂಗಳೂರಿನ ಸುಬ್ರಹ್ಮಣ್ಯ ನಗರದ (Subramanyanagar) ಮಿಲ್ಕ್ ಕಾಲೋನಿಯಲ್ಲಿ ನಡೆದಿದೆ.
ಸುಪ್ರಿಯಾ (25) ಮೃತ ಯುವತಿ. ಕೊಳೆತ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿದೆ. ಇದನ್ನೂ ಓದಿ: 8 ದಿನದ ಹಿಂದಷ್ಟೇ ಹುಟ್ಟಿದ ಹಸುಗೂಸು, 2 ವರ್ಷದ ಅಂಗವಿಕಲ ಮಗು ಕೊಂದು ಜೀವಬಿಟ್ಟ ತಾಯಿ!
ಎಂಬಿಎ (MBA Graduate) ವ್ಯಾಸಂಗ ಮಾಡ್ತಿದ್ದ ಸುಪ್ರಿಯಾ, ಬೈಕ್ ತರಬೇತಿ ಕೂಡ ಪಡೆಯುತ್ತಿದ್ದಳು. ಮಿಲ್ಕ್ ಕಾಲೋನಿಯಲ್ಲಿ ಕಳೆದ 2 ವರ್ಷ 8 ತಿಂಗಳಿನಿಂದ ಬಾಡಿಗೆ ಮನೆಯಲ್ಲಿ ವಾಸವಿದ್ದಳು. 3ನೇ ಫ್ಲೋರ್‌ನಲ್ಲಿದ್ದ ಸುಪ್ರಿಯಾ ಮನೆ ಬಾಗಿಲು ಕಳೆದ 2 ದಿನಗಳಿಂದಲೂ ಬಂದ್ ಆಗಿತ್ತು. ಅನುಮಾನಗೊಂಡ ಮನೆ ಮಾಲೀಕ ಬಾಗಿಲು ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಫ್ಯಾನ್‌ಗೆ ನೇಣು ಬಿಗಿದು ತುಂಡಾಗಿ ಬಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸುಬ್ರಹ್ಮಣ್ಯ ನಗರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಯುಡಿಆರ್ (ಅನ್ ನ್ಯಾಚುರಲ್ ಡೆತ್ ರಿಪೋರ್ಟ್) ಪ್ರಕರಣ ದಾಖಲಿಸಿಕೊಂಡಿರುವ ಸುಬ್ರಮಣ್ಯನಗರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಅನುಮತಿ ಇಲ್ಲದಿದ್ರೂ ಕರಾಳ ದಿನಾಚಣೆ – ಗಡಿಯಲ್ಲಿ ನಾಡದ್ರೋಹಿ ಎಂಇಎಸ್ ಪುಂಡಾಟ


