ಬೆಂಗಳೂರು: ನಗರದ ಸಬ್‍ಇನ್‍ಸ್ಪೆಕ್ಟರ್ (Sub Inspector) ಒಬ್ಬರ ಮೇಲೆ ಪತ್ನಿಗೆ (Wife) ಕಿರುಕುಳ ನೀಡಿ ಕೊಲೆಗೈದ ಆರೋಪ ಕೇಳಿ ಬಂದಿದೆ.
ಮೃತ ಮಹಿಳೆಯನ್ನು ಶಿಲ್ಪಾ (33) ಎಂದು ಗುರುತಿಸಲಾಗಿದೆ. ಮಹಿಳೆಯ ಪತಿ ರಮೇಶ್ ಅವರ ಮೇಲೆ ಶಿಲ್ಪಾ ಪೊಷಕರು ಕೊಲೆ ಆರೋಪ ಹೊರಿಸಿದ್ದಾರೆ. ಅಲ್ಲದೆ ನಿರಂತರ ಪತ್ನಿಗೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಸಹ ಕೇಳಿ ಬಂದಿದೆ. ಇದನ್ನೂ ಓದಿ: ಎಲ್ಲರಿಗೂ ಎಐ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಅನ್ನೋ ಆಲೋಚನೆ ಬೇಡ: ಹೆಚ್.ಆರ್.ರಂಗನಾಥ್
ರಮೇಶ್ ಹಾಗೂ ಶಿಲ್ಪಾ ಹತ್ತು ವರ್ಷಗಳಿಂದ ಪ್ರೀತಿಸುತ್ತಿದ್ದರು. ಕಳೆದ ಐದಾರು ವರ್ಷಗಳಿಂದ ಲಿವಿಂಗ್ ಟುಗೇದರ್ (Living Together) ರಿಲೇಶನ್‍ಶಿಪ್‍ನಲ್ಲಿದ್ದರು. ಆದರೆ ಮದುವೆಯಾಗಲು (Marriage) ಕಾರಣ ಹೇಳಿ ತಪ್ಪಿಸಿಕೊಳ್ಳುತ್ತಿದ್ದ. ಬಳಿಕ ಹಠಬಿಡದೆ ಪೊಲೀಸರ ಸಮ್ಮುಖದಲ್ಲಿ ಶಿಲ್ಪಾ, ರಮೇಶ್‍ನನ್ನು ಮದುವೆಗೆ ಒಪ್ಪಿಸಿದ್ದಳು.
ಮದುವೆ ಬಳಿಕ ಮನೆಯವರು ಒಪ್ಪುತ್ತಿಲ್ಲ ಎಂದು ಪತ್ನಿಗೆ ಪ್ರತ್ಯೇಕ ಮನೆ ಮಾಡಿಕೊಟ್ಟಿದ್ದ. ಆದರೆ ಜೀವನಕ್ಕೆ ಯಾವುದೇ ಅರ್ಥಿಕ ನೆರವು ನೀಡುತ್ತಿರಲಿಲ್ಲ. ಪದೇ ಪದೇ ಜಾತಿ ನಿಂದನೆ ಮಾಡಿ, ತನ್ನ ಅಕ್ಕನ ಮಗಳನ್ನು ಮದುವೆಯಾಗಲು ನೀನು ಅಡ್ಡಿಯಾಗಿದ್ದೀಯಾ ಮನೆಬಿಟ್ಟು ಹೋಗು ಎಂದು ಕಿರುಕುಳ ನೀಡುತ್ತಿದ್ದ ಎಂದು ಮಹಿಳೆಯ ಪೋಷಕರು ದೂರಿದ್ದಾರೆ.
ಶುಕ್ರವಾರ ರಾತ್ರಿ ಕುಟುಂಬದವರ ಜೊತೆ ಫೋನಿನಲ್ಲಿ ಮಾತನಾಡಿದ್ದ ಶಿಲ್ಪಾ ಖರ್ಚಿಗೆ ಹಣ ಬೇಕು ಎಂದು ಹಾಕಿಸಿಕೊಂಡಿದ್ದಳು. ಆದರೆ ಇಂದು ಬೆಳಗ್ಗೆ ಮನೆಯ ಮಾಲೀಕರು ಬಾಗಿಲು ತೆರೆಯುತ್ತಿಲ್ಲ ಎಂದು ಕುಟುಂಬದವರಿಗೆ ತಿಳಿಸಿದ್ದಾರೆ. ಕುಟುಂಬದವರು ಬರುವ ಮುನ್ನವೇ ಶವವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಶಿಲ್ಪಾ ಕುಟುಂಬ ಆಗ್ರಹಿಸಿದೆ. ಇದನ್ನೂ ಓದಿ: ಕೆಲಸಕ್ಕೆ ಹೋಗು ಎಂದಿದ್ದಕ್ಕೆ ಪತ್ನಿಯನ್ನೇ ಕೊಲೆಗೈದ ಪತಿ