ಬೆಂಗಳೂರು: ನಗರದ (Bengaluru) ಹೊರವಲಯ ಆನೇಕಲ್‍ನಲ್ಲಿ (Anekal) ಇಬ್ಬರು ಯುವಕರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಡ್ರಗ್ಸ್ ಓವರ್ ಡೋಸ್‌ನಿಂದ ಮೃತಪಟ್ಟಿರುವ ಅನುಮಾನ ವ್ಯಕ್ತವಾಗಿದೆ.
ಮೃತರನ್ನು ಸೂರ್ಯ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಯಾರಂಡಹಳ್ಳಿ ಸಮೀಪ ವಾಸವಿದ್ದ ಅಸ್ಸಾಂ ಮೂಲದ ದಿವಾನ್ ಅಫ್ರೀದಿ ಅಲಿ ಹಾಗೂ ಅಶ್ರಫ್ ಅಲಿ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಕಾರು ಹತ್ತುವಾಗ ಎಡವಿದ ಡಿಸಿಎಂ ಡಿಕೆಶಿ
ಯಾರಂಡಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ಇಬ್ಬರು ವಾಸವಿದ್ದರು. ಇಬ್ಬರು ಸಿರಿಂಜ್ ಮೂಲಕ ಡ್ರಗ್ಸ್ ಇಂಜೆಕ್ಟ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಓರ್ವ ಮಲಗಿದ್ದಲ್ಲೇ ಕೊನೆಯುಸಿರೆಳೆದಿದ್ದರೆ, ಮತ್ತೋರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ.
ಸ್ಥಳಕ್ಕೆ ಅಡಿಷನಲ್ ಎಸ್‍ಪಿ ನಾಗರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಬುದ್ಧಿವಾದ ಹೇಳಿದ್ದಕ್ಕೆ ಚಾಕು ಇರಿದು ತಂದೆಯನ್ನೇ ಕೊಲೆಗೈದ ಮಗ