ಮುಂಬೈ: ಮಾದಕ ದ್ರವ್ಯ ಪ್ರಕರಣದಲ್ಲಿ ಪುತ್ರ ಆರ್ಯನ್ ಖಾನ್ ಬಂಧನಕ್ಕೊಳಗಾದ ಹಿನ್ನೆಲೆಯಲ್ಲಿ ಬಾಲಿವುಡ್ ನಟ ಶಾರೂಖ್ ಮತ್ತು ಗೌರಿ ಖಾನ್ ಬೆಂಬಲಕ್ಕೆ ಸುಸಾನೆ ಖಾನ್ ಮತ್ತು ಮಿಕಾ ಸಿಂಗ್ ನಿಂತಿದ್ದಾರೆ.
ಶನಿವಾರ ರಾತ್ರಿ(ಅ.2) ನಡೆದ ಕಾರ್ಡೆಲಿಯಾ ಕ್ರೂಸ್ ಎಕ್ಸ್ ಪ್ರೆಸ್ ಹಡಗಿನಲ್ಲಿ ಮಾದಕದ್ರವ್ಯದ ದಂಧೆಯ ನಂತರ ಅಕ್ಟೋಬರ್ 3 ರಂದು ಆರ್ಯನ್ ನನ್ನು ಬಂಧಿಸಲಾಯಿತು. ನಿನ್ನೆ ಆರ್ಯನ್ ಕಸ್ಟಡಿಯನ್ನು ಅಕ್ಟೋಬರ್ 7 ರವರೆಗೆ ವಿಸ್ತರಿಸಲಾಯಿತು. ಈ ಹಿನ್ನೆಲೆ ಬಾಲಿವುಡ್ ಸೆಲೆಬ್ರಿಟಿಗಳಾದ ಸುಸ್ಸಾನೆ ಮತ್ತು ಮಿಕಾ ಅವರು ‘ಸ್ಟಾರ್ ಕಿಡ್’ ನ ಬಂಧನವನ್ನು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಪಕ್ಷಿಗಳಿಗೆ ಪುನರ್ಜನ್ಮ ನೀಡುತ್ತಿರುವ ರಾಯಚೂರಿನ ಪಕ್ಷಿಪ್ರೇಮಿ ಸಲ್ಲಾವುದ್ದೀನ್
ಆರ್ಯನ್ ಖಾನ್ ಒಳ್ಳೆಯ ಮಗು!
ಮುಂಬೈ ಕೋರ್ಟ್ ಸೋಮವಾರ ಆರ್ಯನ್ ಖಾನ್ ನ ಮಾದಕ ವಸ್ತು ನಿಯಂತ್ರಣ ಸಂಸ್ಥೆ (ಎನ್‍ಸಿಬಿ) ಕಸ್ಟಡಿಯನ್ನು ಅಕ್ಟೋಬರ್ 7 ರವರೆಗೆ ವಿಸ್ತರಿಸಲಾಯಿತು. ಈ ಹಿನ್ನೆಲೆ ಬಾಲಿವುಡ್ ನಟ ಹೃತಿಕ್ ರೋಷನ್ ಮಾಜಿ ಪತ್ನಿ ಸುಸಾನೆ ಖಾನ್ ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತು ಬರೆದುಕೊಂಡಿದ್ದಾರೆ. ಈ ಪ್ರಕರಣ ಸಂಬಂಧ ಬಾಲಿವುಡ್ ಮಂದಿ ತಮಗೆ ತೋಚಿದಂತೆ ಹೇಳಿಕೊಳ್ಳುತ್ತಿದ್ದಾರೆ. ಆರ್ಯನ್ ಖಾನ್ ಒಳ್ಳೆಯ ಮಗು, ಆದರೆ ದುರದೃಷ್ಟವಶಾತ್ ಅವರು ಕೆಟ್ಟ ಸಮಯದಲ್ಲಿ, ತಪ್ಪಾದ ಸ್ಥಳದಲ್ಲಿದ್ದರು. ಇದನ್ನು ಬಳಸಿಕೊಂಡು ಅವರನ್ನು ಬಾಲಿವುಡ್‍ನ ಕೆಲವರು ತಮ್ಮದೇ ಶೈಲಿಯಲ್ಲಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆರ್ಯನ್ ಒಳ್ಳೆಯ ಮಗುವಾಗಿದ್ದರಿಂದ ಇದು ಅನ್ಯಾಯವಾಗಿದೆ. ನಾನು ಗೌರಿ ಮತ್ತು ಶಾರೂಖ್ ಪರವಾಗಿ ನಿಲ್ಲುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ.
ಸುಸಾನೆ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಲೇಖಕಿ ಶೋಭಾ ಡಿ, ಆರ್ಯನ್ ಬಂಧನವು ಅವರ ಪೋಷಕರಿಗೆ ಎಚ್ಚರಿಕೆಯ ಗಂಟೆಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ.
ಆ ಜಾಗಕ್ಕೆ ನಾನು ಹೋಗಬೇಕಿತ್ತು..!
ಸಿಂಗರ್ ಮಿಕಾ ಸಿಂಗ್ ಕೂಡ ಈ ಕುರಿತು ಆಶ್ಚರ್ಯ ವ್ಯಕ್ತಪಡಿಸಿದ್ದು, ಆರ್ಯನ್ ಬಿಟ್ಟರೇ ಬೇರೆ ಯಾರೂ ಆ ಹಡಗಿನಲ್ಲಿ ಇರಲಿಲ್ಲವಾ ಎಂದು ಪ್ರಶ್ನಿಸಿದ್ದಾರೆ. ಟ್ವಿಟ್ಟರ್ ನಲ್ಲಿ ಈ ಕುರಿತು ಬರೆದುಕೊಂಡಿರುವ ಅವರು, ವಾವ್ ಎಂತಹ ಸುಂದರವಾದ ಕಾರ್ಡೆಲಿಯಾ ಕ್ರೂಸ್. ಅಲ್ಲಿಗೆ ನಾನು ಭೇಟಿ ಕೊಡಬೇಕಿತ್ತು. ಅಲ್ಲಿ ಬಹಳಷ್ಟು ಜನರಿದ್ದಾರೆ, ಆದರೆ ಆರ್ಯನ್ ನನಗೆ ಕಾಣಿಸುತ್ತಿಲ್ಲ. ಆದರೆ ಇವರಿಗೆ ಮಾತ್ರ ಈ ದೊಡ್ಡ ಹಡಗಿನಲ್ಲಿ ಆರ್ಯನ್ ಮಾತ್ರ ಕಾಣಿಸುತ್ತಿದ್ದಾನೆ ಎಂದು ವ್ಯಂಗ್ಯವಾಗಿ ಬರೆದು ಶುಭೋದಯ ಅದ್ಭುತ ದಿನ ಎಂದು ಬರೆದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಯಾರೂ ನನ್ನನ್ನು ಕೈಹಿಡಿದಿಲ್ಲ: ರಣವೀರ್ ಸಿಂಗ್
Wow what a beautiful @CordeliaCruises I wish I could have visted. I heard lots people were there but I couldn’t see anyone els accept #AaryanKhan ..
Itne bade cruse mei sirf aariyan hi ghoom raha tha kya.. hadd hai.. good morning have a wonderful day.. pic.twitter.com/BJ72yHpkl5
— King Mika Singh (@MikaSingh) October 5, 2021
ಈ ಹಿಂದೆ ಬಾಲಿವುಡ್ ಸೆಲೆಬ್ರಿಟಿಗಳಾದ ಸುನೀಲ್ ಶೆಟ್ಟಿ, ಸುಚಿತ್ರಾ ಕೃಷ್ಣಮೂರ್ತಿ, ಹಂಸಲ್ ಮೆಹ್ತಾ ಮತ್ತು ಪೂಜಾ ಭಟ್ ಇತರರು ಶಾರುಖ್ ಖಾನ್ ಪರವಾಗಿ ಮಾತನಾಡಿದರು. ಸಲ್ಮಾನ್ ಖಾನ್ ಅವರು ತಮ್ಮ ಬೆಂಬಲವನ್ನು ಸೂಚಿಸಲು ಎಸ್‌ಆರ್‌ಕೆ ಅವರ ಮನೆ ಮನ್ನತ್‍ಗೆ ಭೇಟಿ ನೀಡಿದರು.