– ಜ್ಯೂಬಿಲಿಯೆಂಟ್ ಕಾರ್ಖಾನೆಗೆ ಸೋಮಣ್ಣ ಭೇಟಿ
ಮೈಸೂರು: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೋರಿರುವ ಆರ್ಥಿಕ ನೆರವಿಗೆ ಮೈಸೂರಿನ ಶ್ರೀ ಸುತ್ತೂರು ಮಠ ಸ್ಪಂದಿಸಿದ್ದು, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ರೂಪಾಯಿ ದೇಣಿಗೆ ನೀಡಿದೆ.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಇವತ್ತು ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡಿದ್ದರು. ಈ ವೇಳೆ ಜೆಎಸ್‍ಎಸ್ ಮಹಾವಿದ್ಯಾಪೀಠ ಹಾಗೂ ಸಂಸ್ಥೆಯ ನೌಕರರಿಂದ 50 ಲಕ್ಷ ರೂ.ಗಳ ದೇಣಿಗೆಯನ್ನು ಶ್ರೀ ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿಗಳು ಸಚಿವರಿಗೆ ನೀಡಿದರು. ಸಂಸದರಾದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಜೆ.ಎಸ್.ಎಸ್. ವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ. ಬೆಟಸೂರಮಠ, ಕಾರ್ಯದರ್ಶಿ ಎಸ್.ಶಿವಕುಮಾರಸ್ವಾಮಿ ಉಪಸ್ಥಿತರಿದ್ದರು.
Advertisement
ಕೊರೋನಾ ಮುಕ್ತ ಭಾರತ ನಿರ್ಮಾಣಕ್ಕೆ ಸುತ್ತೂರು ಸಂಸ್ಥಾನದ ಮಹಾಸ್ವಾಮಿಗಳು 50 ಲಕ್ಷ ರೂ ದೇಣಿಗೆ ನೀಡಿದ್ದಾರೆ, ಮೈಸೂರಿನ ಸುತ್ತೂರು ಶಾಖಾ ಮಠದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮೋಣ್ಣ, ಪ್ರತಾಪ್ ಸಿಂಹ ಹಾಗೂ ಮಠದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಮ್ಮುಖದಲ್ಲಿ ಮುಖ್ಯ ಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ರೂ ದೇಣಿಗೆ ನೀಡಿದ್ದಾರೆ. pic.twitter.com/zhnizdZWEE
— Pratap Simha (@mepratap) April 1, 2020
Advertisement
ಮೈಸೂರು ಭಾಗದಲ್ಲಿ ಕೊರೊನಾ ಭೀತಿ ಹೆಚ್ಚಾಗಲು ಕಾರಣವಾಗಿರುವ ನಂಜನಗೂಡಿನ ಜ್ಯೂಬಿಲಿಯೆಂಟ್ ಕಾರ್ಖಾನೆಗೆ ಸಚಿವ ವಿ. ಸೋಮಣ್ಣ ಇಂದು ಭೇಟಿ ನೀಡಿ ಪರಿಶೀಲಿಸಿದರು. ಕಾರ್ಖಾನೆ ಲಾಕ್‍ಡೌನ್ ಆಗಿರುವುದನ್ನು ಸಚಿವರು ವೀಕ್ಷಿಸಿದರು.
Advertisement
ಕಾರ್ಖಾನೆಯಲ್ಲಿ 15 ಜನ ಸೆಕ್ಯೂರಿಟಿ ಗಾರ್ಡ್ ಗಳು ಮಾತ್ರ ಇದ್ದು, ಅವರನ್ನು ಇಲ್ಲೇ ಕ್ವಾರಂಟೈನ್ ಮಾಡಲಾಗಿದೆ. ಅವರಿಗೆ ಬೇಕಾದ ಊಟ ಹಾಗೂ ಅಗತ್ಯ ವಸ್ತುಗಳನ್ನು ಒದಗಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಅಧೀಕ್ಷಕರು ಸಚಿವರಿಗೆ ಮಾಹಿತಿ ನೀಡಿದರು.
Advertisement
ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ವಿ ಸೋಮಣ್ಣ ರವರೊಂದಿಗೆ , ಜಿಲ್ಲಾಧಿಕಾರಿಗಳಾದ ಶ್ರೀ ಅಭಿರಾಮ್ ರವರು, ಎಸ್ಪಿ ಶ್ರೀ ರಿಷ್ಯಂತ್ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ನಂಜನಗೂಡಿನ ಔಷಧ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.ಹಾಗೂ ಹೋಂ ಕ್ವಾರಂಟೈನ್ ನಲ್ಲಿರುವ ನೌಕರರ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಲಾಯಿತು. pic.twitter.com/RGXgOFninS
— Pratap Simha (@mepratap) April 1, 2020