ಸಹರಾನ್‌ಪುರ್: ರಿವರ್ಸ್ (Reverse) ತೆಗೆಯುತ್ತಿದ್ದ ಕಾರಿಗೆ ಎಸ್‌ಯುವಿ (SUV) ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ದೆಹಲಿ-ಡೆಹ್ರಾಡೂನ್ ಎಕ್ಸ್‌ಪ್ರೆಸ್ ವೇಯಲ್ಲಿ (Delhi-Dehradun Expressway) ನಡೆದಿದೆ.
ಹರಿದ್ವಾರಕ್ಕೆ ತೆರಳುತ್ತಿದ್ದ ಕಾರು ಹೆದ್ದಾರಿಯಲ್ಲಿ ಹಿಂದಕ್ಕೆ (ರಿವರ್ಸ್) ಚಲಿಸಲು ಯತ್ನಿಸುತ್ತಿದ್ದ ವೇಳೆ, ಅದೇ ದಾರಿಯಲ್ಲಿ ವೇಗವಾಗಿ ಬಂದ ಎಸ್‌ಯುವಿ ಹಿಂಬದಿಯಿಂದ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದು ಮತ್ತೊಂದು ಬದಿಯ ಡಿವೈಡರ್‌ಗೆ ಡಿಕ್ಕಿ ಹೊಡೆದು ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ತೀವ್ರತೆಗೆ ಎಸ್‌ಯುವಿಯೂ ಪಲ್ಟಿಯಾಗಿದೆ. ಇದನ್ನೂ ಓದಿ: ಬಗೆದಷ್ಟು ಬಯಲಾಗ್ತಿದೆ ಕ್ರಿಮಿನಲ್ ಚೆಲುವೆಯ ಕರಾಳ ಮುಖ – ಕೇತನ್ ಬಳಿ 1 ಕೋಟಿ ಪಡೆದು ಪ್ರಿಯಕರನಿಗೆ ಕೊಟ್ಟಿದ್ದ ಸಿಯಾ
ಈ ದುರ್ಘಟನೆಯಲ್ಲಿ ಮೃತಪಟ್ಟವರನ್ನು ಚರಣ್ ಸಿಂಗ್, ಅವರ ಪತ್ನಿ ಸುದೇಶ್, ಸೊಸೆ ಪ್ರೀತಿ ಹಾಗೂ ಮೊಮ್ಮಗ ಶಿವಾಂಶ್ ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಪ್ರವೀಣ್, ಸಾಹದೇವ್ ಹಾಗೂ ಮತ್ತೊಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಗೃಹಜ್ಯೋತಿಗೆ ಮತ್ತೆ ಅರ್ಜಿ ಸಲ್ಲಿಕೆ – ಸಿಎಂ ಡಿಕೆಶಿ ಘೋಷಣೆ
WATCH: Reversing car hit by SUV on Delhi-Dehradun Expressway pic.twitter.com/BYV7V8SfaF
— TIMES NOW (@TimesNow) June 29, 2026
ಮೃತರು ಹರಿಯಾಣದ ಸೋನಿಪತ್ ಜಿಲ್ಲೆಯ ಬಹಾದುರ್‌ಗಢ ನಿವಾಸಿಗಳಾಗಿದ್ದು, ಹರಿದ್ವಾರಕ್ಕೆ ಪ್ರಯಾಣಿಸುತ್ತಿದ್ದ ವೇಳೆ ರಾಂಪುರ ಮನಿಹರಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಹಲ್ಗೋಯಾ ಗ್ರಾಮದ ಸಮೀಪ ಈ ಅಪಘಾತ ಸಂಭವಿಸಿದೆ. ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಹಾಗೂ ವಾಹನ ಸವಾರರು ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದು, ಮಾಹಿತಿ ತಿಳಿದ ಪೊಲೀಸರು ಹಾಗೂ 108 ಅಂಬುಲೆನ್ಸ್ ಸಿಬ್ಬಂದಿ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ನಾಲ್ವರನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು. ಇದನ್ನೂ ಓದಿ: ಮೇಲ್ಛಾವಣಿ ಕುಸಿದು ಮೂವರು ಸಾವು – ಕಟ್ಟಡ ಮಾಲೀಕನ ವಿರುದ್ಧ ಪ್ರಕರಣ ದಾಖಲು
ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಎರಡೂ ವಾಹನಗಳನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಪ್ರಮುಖ ಕಾರಣ ಎಂದು ಶಂಕಿಸಲಾಗಿದೆ. ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಡಿವೈಡರ್ ದಾಟಿ ಖಾಸಗಿ ಬಸ್‌ಗೆ ಲಾರಿ ಡಿಕ್ಕಿ – ನಾಲ್ವರು ಪ್ರಯಾಣಿಕರಿಗೆ ಗಾಯ
