ಕೋಲ್ಕತ್ತಾ: ಬಿರ್ಭೊಮ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಸುವೆಂದು ಅಧಿಕಾರಿಗೆ ಗಾಯವಾಗಿದೆ.
ಪಶ್ಚಿಮ ಬಂಗಾಳದಲ್ಲಿ ಕೆಲದಿನಗಳ ಹಿಂದೆ ನಡೆದ ಹಿಂಸಾಚಾರ ಪ್ರಕರಣದಲ್ಲಿ ಇಬ್ಬರು ಮಕ್ಕಳು ಮತ್ತು ಆರು ಮಂದಿ ಮಹಿಳೆಯರನ್ನು ಜೀವಂತ ಸುಟ್ಟು ಹಾಕಲಾಗಿತ್ತು. ಈ ಘಟನೆ ಬಳಿಕ ಆಡಳಿತ ಪಕ್ಷ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿರುದ್ಧ ಪ್ರತಿಪಕ್ಷಗಳು ಕಿಡಿಕಾರಿದ್ದವು. ಈ ಬಗ್ಗೆ ಬಿಜೆಪಿ ಇಂದು ಬಿರ್ಭೊಮ್‍ನ ಬಿಡಿಒ ಕಚೇರಿ ಎದುರು ಪ್ರತಿಭಟನೆಗೆ ಮುಂದಾಗಿತ್ತು. ಈ ವೇಳೆ ಬಿಡಿಒ ಕಚೇರಿಗೆ ಮುತ್ತಿಗೆ ಹಾಕಲು ಸುವಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ನಾಯಕರು ಮುಂದಾಗಿದ್ದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಈ ವೇಳೆ ಅಲ್ಲಿದ್ದ ಕಬ್ಬಿಣದ ಬ್ಯಾರಿಕೇಡ್ ಬಿದ್ದು ಸುವೆಂದು ಅಧಿಕಾರಿ ಕಾಲಿಗೆ ಗಾಯವಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ದಿದಿ ನಾಡಿನಲ್ಲಿ ಹಿಂಸಾಚಾರ; ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ
শোকসন্তপ্ত পরিবারকে বিড়ম্বনায় ফেললেন তাই নয়, তাদের ন্যায় বিচার পাওয়ার আশায় জল ঢেলে দিয়েছিলেন।
আজ মেয়েটির পরিবারের সঙ্গে দেখা করে তাদের পাশে থেকে আইনি সহায়তা দেওয়ার আশ্বাস দিয়েছিলাম।
মহামান্য কলকাতা হাইকোর্টের সিবিআই তদন্তের নির্দেশ কে স্বাগত জানিয়ে সুবিচার আশা করি। pic.twitter.com/JVaDdjAZGC
— Suvendu Adhikari • শুভেন্দু অধিকারী (@SuvenduWB) April 12, 2022
ಬ್ಯಾರಿಗೇಡ್ ಬಿದ್ದ ಕಾರಣ ಸುವೆಂದು ಅಧಿಕಾರಿ ಕಾಲಿಗೆ ಗಾಯವಾಗಿದೆ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ಬಿಜೆಪಿ ಮೂಲಗಳಿಂದ ವರದಿಯಾಗಿದೆ. ಇದನ್ನೂ ಓದಿ: ಪ.ಬಂಗಾಳ ಬದುಕಲು ಯೋಗ್ಯವಾಗಿಲ್ಲ – ಬಿರ್ಭೂಮ್ ಹಿಂಸಾಚಾರ ನೆನೆದು ಕಣ್ಣೀರಿಟ್ಟ ಸಂಸದೆ ರೂಪಾ ಗಂಗೂಲಿ
ಏನಿದು ಬಿರ್ಭೊಮ್ ಹಿಂಸಾಚಾರ ಪ್ರಕರಣ:
ಪಶ್ಚಿಮ ಬಂಗಾಳದ ಬಗುಟಿ ಗ್ರಾಮ ಪಂಚಾಯತ್ ಮುಖಂಡ ಭಾದು ಶೇಖ್ ಅವರ ಮೇಲೆ ದಾಳಿ ನಡೆದಿತ್ತು. ರಾಷ್ಟ್ರೀಯ ಹೆದ್ದಾರಿ-60ರ ಅಂಗಡಿಯೊಂದರಲ್ಲಿ ಇರುವಾಗ ಶೇಖ್ ಅವರ ಮೇಲೆ ಬಾಂಬ್ ದಾಳಿ ನಡೆಸಲಾಗಿತ್ತು. ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಅವರು ಮೃತಪಟ್ಟಿದ್ದರು. ಮುಖಂಡನ ಸಾವಿನ ಸುದ್ದಿ ತಿಳಿದು ರೊಚ್ಚಿಗೆದ್ದ ಗುಂಪೊಂದು 10 ರಿಂದ 12 ಮನೆಗೆ ಬೆಂಕಿ ಹಚ್ಚಿದ್ದರು.
ಇದರಿಂದಾಗಿ 8 ಮಂದಿ ಸಜೀವ ದಹನವಾಗಿದ್ದರು. ಇದರಲ್ಲಿ ಇಬ್ಬರು ಮಕ್ಕಳೂ ಸಹ ಇದ್ದರು ಎಂಬುದಾಗಿ ಬಿರ್ಭೂಮ್ ಎಸ್‍ಪಿ ನಾಗೇಂದ್ರ ತ್ರಿಪಾಟಿ ಮಾಹಿತಿ ನೀಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ಸ್ವಯಂಪ್ರೇರಿತವಾಗಿಯೇ ವಿಚಾರಣೆ ನಡೆಸಲು ಮುಂದಾಗಿತ್ತು. ಈ ನಡುವೆ ಜಿಲ್ಲೆಯ ಕೆಲ ಕುಟುಂಬಗಳು ಹಿಂಸಾಚಾರಕ್ಕೆ ಬೆಚ್ಚಿಬಿದ್ದಿದ್ದು, ತಮ್ಮ ಮನೆಗಳನ್ನು ತೊರೆದು ಹೋಗಿದ್ದರು.