ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ಪಿಎಗೆ ಗುಂಡಿಕ್ಕಿ ಹತ್ಯೆ

1 Min Read

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಫಲಿತಾಂಶದ ಬಳಿಕ ಹಿಂಸಾಚಾರ ತೀವ್ರಗೊಂಡಿದ್ದು, ಬಿಜೆಪಿ ಹಿರಿಯ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಮೃತ ವ್ಯಕ್ತಿಯನ್ನು ಚಂದ್ರನಾಥ್ ರಥ ಎಂದು ಗುರುತಿಸಲಾಗಿದೆ. ರಾಜ್ಯದ ಉತ್ತರ 24 ಪರಗಣ ಜಿಲ್ಲೆಯಲ್ಲಿರುವ ಮಧ್ಯಮಗ್ರಾಮದಲ್ಲಿ ಘಟನೆ ನಡೆದಿದೆ.

ತೀವ್ರ ಕುತೂಹಲ ಕೆರಳಿಸಿದ್ದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಎರಡು ದಿನಗಳ ನಂತರ ಈ ಹತ್ಯೆ ವರದಿಯಾಗಿದೆ. ಬಿಜೆಪಿ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಬಹುಮತ ಗಳಿಸಿದೆ.

ಬಿಜೆಪಿ ಸ್ಪರ್ಧಿಸಿದ 293 ಸ್ಥಾನಗಳಲ್ಲಿ 207 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಕೇವಲ 80 ಕ್ಷೇತ್ರಗಳಿಗೆ ಸೀಮಿತವಾಗಿತ್ತು. ರಾಜ್ಯದಲ್ಲಿ ಬಿಜೆಪಿ ಗೆಲುವಿನಲ್ಲಿ ಸುವೇಂದು ಅಧಿಕಾರಿ ಪ್ರಮುಖ ಪಾತ್ರ ವಹಿಸಿದ್ದರು.

Share This Article