ಸ್ವಚ್ಛ ನಗರಗಳ ಪಟ್ಟಿಯಲ್ಲಿ ಮೈಸೂರು ಅಗ್ರಸ್ಥಾನಕ್ಕೇರಲು ಕೈಜೋಡಿಸಿ: ಸುತ್ತೂರು ಶ್ರೀಗಳು

Public TV
1 Min Read
MYS 7

ಮೈಸೂರು: ಸ್ವಚ್ಛ ನಗರಗಳ ಪಟ್ಟಿಯಲ್ಲಿ ಮೈಸೂರು ಮೊದಲ ಸ್ಥಾನ ಗಳಿಸಲು ಪ್ರತಿಯೊಬ್ಬ ನಾಗರಿಕರು ಕೈ ಜೋಡಿಸಬೇಕು ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳು ಹೇಳಿದ್ದಾರೆ.

ಸ್ವಚ್ಛ ಸರ್ವೇಕ್ಷಣ್-2020 ಪ್ರಗತಿಯಲ್ಲಿರುವ ಹಿನ್ನೆಲೆಯಲ್ಲಿ ಮೈಸೂರು ನಗರವನ್ನು ನಂಬರ್ ಒನ್ ಸ್ವಚ್ಛ ನಗರವನ್ನಾಗಿಸಲು ಮಹಾನಗರ ಪಾಲಿಕೆಯಿಂದ ವಿವಿಧ ಕಾರ್ಯಕ್ರಮಗಳು ಆಯೋಜಿಸಲಾಗಿದೆ. ಇದರ ಮುಂದುವರಿದ ಭಾಗವಾಗಿ ಇಂದು ಸರ್ವಧರ್ಮ ಗುರುಗಳ ಸಭೆಯು ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ನಡೆಯಿತು.

Mysore Palace Morning

ಈ ಸಭೆಯಲ್ಲಿ ಸುತ್ತೂರು ಮಠಾಧಿಪತಿ ಶ್ರೀ ಶಿವರಾತ್ರೀಶ್ವರ ಸ್ವಾಮೀಜಿ, ಹೊಸ ಮಠದ ಚಿದಾನಂದ ಸ್ವಾಮೀಜಿ, ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಸೋಮನಾಥ ಸ್ವಾಮೀಜಿ ಸೇರಿದಂತೆ ಇತರ ಧರ್ಮಗುರುಗಳು ಭಾಗಿಯಾಗಿದ್ದರು. ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್, ಮೇಯರ್ ಪುಷ್ಪಲತಾ ಜಗನ್ನಾಥ್, ಮಹಾನಗರ ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ, ಮೈಸೂರು ಮಹಾನಗರ ಪಾಲಿಕೆ ಸದಸ್ಯರು ಸೇರಿದಂತೆ ಇತರ ಪ್ರಮುಖರು ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಸುತ್ತೂರು ಮಠದ ಶ್ರೀಗಳು, ಪ್ಲಾಸ್ಟಿಕ್ ಬಳಕೆ ಮೇಲಿನ ನಿರ್ಬಂಧವನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು. ಕಸವನ್ನು ಎಲ್ಲೆಂದರಲ್ಲಿ ಸುರಿಯುತ್ತಿರುವ ಪ್ರವೃತ್ತಿ ಬಿಡಬೇಕು. ಶಾಲಾ ಮಟ್ಟದಲ್ಲಿಯೂ ಈ ಬಗ್ಗೆ ಜಾಗೃತಿ ಮೂಡಿಸಬೇಕು. ಸ್ವಚ್ಛ ಸರ್ವೇಕ್ಷಣೆಯಲ್ಲಿ ಸಾರ್ವಜನಿಕರ ಪಾತ್ರವೂ ಪ್ರಮುಖವಾಗಿದೆ ಎಂದು ತಿಳಿಸಿದರು.

HSN mysore

ಸ್ವಚ್ಛ ಸರ್ವೇಕ್ಷಣಾ-2019 ಪ್ರಶಸ್ತಿಯನ್ನು ಮಧ್ಯಪ್ರದೇಶದ ಇಂದೋರ್ ಪಡೆದಿತ್ತು. ಈ ಮೂಲಕ ದೇಶದ ಅತ್ಯಂತ ಸ್ವಚ್ಛ ನಗರಿ ಎಂಬ ಹಿರಿಮೆಯನ್ನು ಇಂದೋರ್ ಸತತ ಮೂರನೇ ವರ್ಷವೂ ಉಳಿಸಿಕೊಂಡಿತ್ತು. ಹಾಗೆಯೇ ಮಧ್ಯಪ್ರದೇಶದ ರಾಜಧಾನಿ ಭೋಪಾಲ್‍ಗೆ ‘ಸ್ವಚ್ಛ ರಾಜಧಾನಿ’ ಪ್ರಶಸ್ತಿ ಸಂದಿತ್ತು. ಟಾಪ್ 10 ಸ್ವಚ್ಛ ನಗರಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ಛತ್ತೀಸ್‍ಗಢದ ಅಂಬಿಕಾಪುರಿ ಹಾಗೂ ಮೂರನೇ ಸ್ಥಾನವನ್ನು ಅರಮನೆ ನಗರಿ ಮೈಸೂರು ಇದ್ದವು.
ಕೊಂಡಿದೆ.

Share This Article
Leave a Comment

Leave a Reply

Your email address will not be published. Required fields are marked *