ದಾವಣಗೆರೆ: ಬಳ್ಳಾರಿ ಜಿಲ್ಲೆಯ ಕೊಟ್ಟೂರು ನುಗ್ಗೆಹಳ್ಳಿ ಅಯ್ಯನಹಳ್ಳಿ ಹಿರೇಮಠದ ಶ್ರೀ ಮಹೇಶ ಶಿವಾಚಾರ್ಯ ಸ್ವಾಮೀಜಿ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು, ಶ್ರೀಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶ್ರೀ ಮಹೇಶ ಶಿವಾಚಾರ್ಯ ಸ್ವಾಮೀಜಿ ಇಂದು ಕಾರ್ಯಕ್ರಮ ನಿಮಿತ್ತ ಬಾತಿ ತಪೋವನದಲ್ಲಿರುವ ಶ್ರೀ ಶೈಲ ಜಗದ್ಗುರುಗಳ ದರ್ಶನಕ್ಕೆ ಇನ್ನೋವಾ ಕಾರಿನಲ್ಲಿ ಹೊರಟಿದ್ದರು. ಆದರೆ ದಾವಣಗೆರೆಯ ಬಾತಿ ಕೆರೆ ಬಳಿ ಬೆಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಕೆಎಸ್ಆರ್‌ಟಿಸಿ ಬಸ್ ಹಿಂದಿನಿಂದ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಇನ್ನೋವಾ ಕಾರಿನ ಹಿಂಭಾಗ ಸಂಪೂರ್ಣ ಜಖಂಗೊಂಡಿದೆ. ಅದೃಷ್ಟವಶಾತ್ ಸ್ವಾಮೀಜಿಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಬೇರೊಂದು ವಾಹನದಲ್ಲಿ ಕಾರ್ಯಕ್ರಮಕ್ಕೆ ತೆರಳಿದ್ದಾರೆ. ಈ ಸಂಬಂಧ ದಾವಣಗೆರೆ ಟ್ರಾಫಿಕ್ ಠಾಣೆಯಲ್ಲಿ ದೂರು ದಾಖಲಾಗಿದೆ.