ರಾಜಸ್ಥಾನದಲ್ಲಿ ಕೈಕಾಲು, ಬಾಯಿ ಕಟ್ಟಿದ ಸ್ಥಿತಿಯಲ್ಲಿ ಸ್ವಾಮೀಜಿ ಶವ ಪತ್ತೆ

Public TV
1 Min Read
ccb police 1

ಜೈಪುರ: ಸ್ವಾಮೀಜಿಯೊಬ್ಬರ (Swamiji) ಮೃತದೇಹ ಕೈಕಾಲು ಮತ್ತು ಬಾಯಿ ಕಟ್ಟಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ರಾಜಸ್ಥಾನದ (Rajasthan) ಕುಚಾಮನ್ (Kuchaman) ಜಿಲ್ಲೆಯಲ್ಲಿ ನಡೆದಿದೆ.

ಮೃತ ಮುನಿಯನ್ನು ಮೋಹನ್ ದಾಸ್ (72) ಎಂದು ಗುರುತಿಸಲಾಗಿದ್ದು, ಕಳೆದ 15 ವರ್ಷಗಳಿಂದ ರಾಸಲ್ (Rasal) ಗ್ರಾಮದಲ್ಲಿ ವಾಸಿಸುತ್ತಿದ್ದರು. ಸೋಮವಾರ ಮುಂಜಾನೆ ಗ್ರಾಮಸ್ಥರಿಗೆ ಶವವಾಗಿ ಪತ್ತೆಯಾಗಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಉತ್ತರಾಖಂಡದಲ್ಲಿ ಎರಡು ದಿನ ರೆಡ್ ಅಲರ್ಟ್ – ಚಾರ್ ಧಾಮ್ ಯಾತ್ರೆ ತಾತ್ಕಾಲಿಕ ಸ್ಥಗಿತ

ಮೃತ ಸ್ವಾಮೀಜಿ ಒಬ್ಬಂಟಿಯಾಗಿ ವಾಸಿಸುತ್ತಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಕೊಲೆ ಪ್ರಕರಣವನ್ನು ದಾಖಲಿಸಿದ್ದು, ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಕುಚಾಮನ್ ನಗರ ಎಸ್‌ಹೆಚ್‌ಒ ಸುರೇಶ್ ಕುಮಾರ್ ತಿಳಿಸಿದ್ದಾರೆ. ಅಲ್ಲದೇ ಮರಣೋತ್ತರ ಪರೀಕ್ಷೆಯ ಬಳಿಕ ಸ್ವಾಮೀಜಿಯ ಮೃತದೇಹವನ್ನು ಅದೇ ಗ್ರಾಮದಲ್ಲಿ ವಾಸಿಸುತ್ತಿರುವ ಅವರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತದೆ ಎಂದರು. ಇದನ್ನೂ ಓದಿ: ಭಾರೀ ಮಳೆಗೆ ಶಿಮ್ಲಾದಲ್ಲಿ ದೇವಾಲಯ ಕುಸಿತ – 9 ಸಾವು, ಹಲವರು ಸಿಲುಕಿರುವ ಶಂಕೆ

ಭಾನುವಾರ ಸಂಜೆ ಗ್ರಾಮಸ್ಥರೊಂದಿಗೆ ಮಾತನಾಡಿದ ಬಳಿಕ ಸ್ವಾಮೀಜಿ ಮಲಗಲು ತಮ್ಮ ಕೋಣೆಗೆ ತೆರಳಿದ್ದರು. ಸೋಮವಾರ ಮುಂಜಾನೆ ಅವರ ಮೃತದೇಹ ಕೈಕಾಲು ಕಟ್ಟಿದ ಸ್ಥಿತಿಯಲ್ಲಿ ನೆಲದ ಮೇಲೆ ಬಿದ್ದಿರುವುದನ್ನು ಕಂಡು ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಹಿಮಾಚಲದಲ್ಲಿ ಮೇಘಸ್ಫೋಟಕ್ಕೆ 7 ಬಲಿ – ಕೊಚ್ಚಿ ಹೋದ ಮನೆಗಳು

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article