ನವದೆಹಲಿ: ದೆಹಲಿ ಸಿಎಂ ಕೇಜ್ರಿವಾಲ್ (Delhi CM Arvind Kejriwal) ನಿವಾಸದ ಸಿಸಿಟಿವಿಯನ್ನು ಟ್ಯಾಂಪರಿಂಗ್ (CCTV Tampering ) ಮಾಡುತ್ತಿದ್ದಾರೆ ಎಂದು ಆಪ್ (AAP) ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ (Swati Maliwal) ಗಂಭೀರ ಆರೋಪ ಮಾಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಅವರು, ಈಗ ಈ ವ್ಯಕ್ತಿಗಳು ಮನೆಯ ಸಿಸಿಟಿವಿಯನ್ನು ಟ್ಯಾಂಪರಿಂಗ್ ಮಾಡುತ್ತಿದ್ದಾರೆ ಎಂಬ ಮಾಹಿತಿ ನನಗೆ ಸಿಕ್ಕಿದೆ ಎಂದು ಆರೋಪಿಸಿ ತಮ್ಮ ಪೋಸ್ಟ್‌ನಲ್ಲಿ ದೆಹಲಿ ಪೊಲೀಸರನ್ನು ಟ್ಯಾಗ್ ಮಾಡಿದ್ದಾರೆ.
Advertisement
ಶುಕ್ರವಾರದವರೆಗೆ ಸ್ವಾತಿ ಮಲಿವಾಲ್ ಅವರ ಡಿಪಿಯಲ್ಲಿ ಬಂಧನಕ್ಕೆ ಒಳಗಾದ ಕೇಜ್ರಿವಾಲ್ ಅವರ ಚಿತ್ರವಿತ್ತು. ಆದರೆ ಈಗ ಕಪ್ಪು ಬಣ್ಣದ ಚಿತ್ರವನ್ನು ಹಾಕಿದ್ದಾರೆ. ಇದನ್ನೂ ಓದಿ: ಸ್ವಾತಿ ಆರೋಪ ಸುಳ್ಳು – ಮಲಿವಾಲ್ ಸಿಎಂ ಮನೆಗೆ ಕಳುಹಿಸಿದ್ದೇ ಬಿಜೆಪಿ: ಸಚಿವೆ ಅತಿಶಿ ತಿರುಗೇಟು!
Advertisement
मुझे सूचना मिली है कि अब ये लोग घर के CCTV से छेड़छाड़ करवा रहा है.. @DelhiPolice
— Swati Maliwal (@SwatiJaiHind) May 17, 2024
Advertisement
ಸ್ವಾತಿ ಮಲಿವಾಲ್ ದೂರಿನ ಬೆನ್ನಲ್ಲೇ ವಿಧಿವಿಜ್ಞಾನ ತಜ್ಞರು, ಪೊಲೀಸರ ತಂಡ ಶುಕ್ರವಾರ ಸಂಜೆ ಮುಖ್ಯಮಂತ್ರಿ ಅವರ ನಿವಾಸಕ್ಕೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿತು. ತನಿಖೆಯ ಭಾಗವಾಗಿ ವಿಡಿಯೋ ಸೆರೆ ಹಿಡಿದ ನಂತರ ಶನಿವಾರ ನಸುಕಿನ ಜಾವ 2:15ಕ್ಕೆ ತಂಡ ಸಿಎಂ ನಿವಾಸದಿಂದ ಹೊರಟಿತು.
Advertisement
ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ನಿವಾಸದ ಸಿಸಿಟಿವಿ ಪೊಲೀಸರು ಸೀಲ್ ಮಾಡಿದ್ದಾರೆ. ತನಿಖೆಯ ದೃಷ್ಟಿಯಿಂದ ತಾಂತ್ರಿಕ ಸಾಕ್ಷಿಯಾಗಿ ಪರಿಗಣನೆ ಮಾಡಲು ಡಿವಿಆರ್ ಸಹಿತ ದತ್ತಾಂಶವನ್ನು ದೆಹಲಿ ಪೊಲೀಸ್ ಸೀಲ್ ಮಾಡಿದ್ದಾರೆ. ಇದನ್ನೂ ಓದಿ: ಮೊದಲ ಬಾರಿಗೆ ED ಜಾಹೀರಾತು ನೋಡುತ್ತಿದ್ದೇವೆ: ಬಾಂದ್ರಾ-ವರ್ಲಿ ಸೀ ಲಿಂಕ್ ಉದಾಹರಿಸಿ ರಶ್ಮಿಕಾಗೆ ಕೇರಳ ಕಾಂಗ್ರೆಸ್ ತಿರುಗೇಟು
ಪ್ರತಿ ಬಾರಿಯಂತೆ ಈ ಬಾರಿಯೂ ಈ ರಾಜಕೀಯ ಹಿಟ್‌ಮ್ಯಾನ್ ತನ್ನನ್ನು ಉಳಿಸಿಕೊಳ್ಳುವ ಪ್ರಯತ್ನಗಳನ್ನು ಪ್ರಾರಂಭಿಸಿದ್ದಾನೆ. ತನ್ನ ಜನರ ಮೂಲಕ ಸರಿಯಾದ ವಿವರ ಇಲ್ಲದ ವೀಡಿಯೋವನ್ನು ಟ್ವೀಟ್ ಮಾಡಿ ತಪ್ಪು ಮಾಡಿಯೂ ತಾನು ಪಾರಾಗಬಹುದು ಎಂದು ಭಾವಿಸಿದ್ದಾನೆ. ಮನೆಯಲ್ಲಿ ಥಳಿಸುವ ವಿಡಿಯೋವನ್ನು ಯಾರಾದರೂ ಮಾಡುತ್ತಾರಾ? ಕೊಠಡಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗಲೇ ಸತ್ಯಾಂಶ ಎಲ್ಲರಿಗೂ ಬಹಿರಂಗವಾಗುವುದು. ನೀವು ಯಾವ ಮಟ್ಟಕ್ಕೆ ಇಳಿಯುತ್ತಿದ್ದೀರಿ. ದೇವರು ಎಲ್ಲವನ್ನೂ ನೋಡುತ್ತಿದ್ದಾನೆ. ಮುಂದೊಂದು ದಿನ ಪ್ರತಿಯೊಬ್ಬರ ಸತ್ಯವೂ ಜಗತ್ತಿನ ಮುಂದೆ ಅನಾವರಣವಾಗಲಿದೆ ಎಂದು ಸ್ವಾತಿ ಮಲಿವಾಲ್ ಶುಕ್ರವಾರ ಹೇಳಿದ್ದರು.