ನವದೆಹಲಿ: ನಾನು, ನನ್ನ ಪೋಷಕರು ಮತ್ತು ಹೆಂಡತಿಯೊಂದಿಗೆ ಪೊಲೀಸರಿಗಾಗಿ ಕಾಯುತ್ತಿದ್ದೇನೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಹೇಳಿದ್ದಾರೆ.
मैं अपने माता-पिता और पत्नी के साथ पुलिस का इंतज़ार कर रहा हूँ। कल पुलिस ने फ़ोन करके मेरे माता-पिता से पूछताछ के लिए टाइम माँगा था। लेकिन वो आएंगे या नहीं – इसकी उन्होंने कोई जानकारी अभी नहीं दी। pic.twitter.com/38Yswozmoi
— Arvind Kejriwal (@ArvindKejriwal) May 23, 2024
ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ (Swati Maliwal) ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಕ್ಸ್‌ನಲ್ಲಿ ಕೇಜ್ರಿವಾಲ್ ಪೋಸ್ಟ್ ಹಾಕಿದ್ದಾರೆ. ಪೋಷಕರು, ಪತ್ನಿ ಜೊತೆ ಮನೆಯಲ್ಲಿ ಕಾಯುತ್ತಿರುವ ವೀಡಿಯೋ ಕೂಡ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ; ಕೊನೆಗೂ ಮೌನ ಮುರಿದ ಕೇಜ್ರಿವಾಲ್
ನಾನು, ನನ್ನ ಪೋಷಕರು ಮತ್ತು ಹೆಂಡತಿಯೊಂದಿಗೆ ಪೊಲೀಸರಿಗಾಗಿ ಕಾಯುತ್ತಿದ್ದೇನೆ. ನಿನ್ನೆ ಪೊಲೀಸರು ಕರೆ ಮಾಡಿ ನನ್ನ ಪೋಷಕರ ವಿಚಾರಣೆಗೆ ಸಮಯ ಕೇಳಿದ್ದಾರೆ. ಆದರೆ ಅವರು ಬರುತ್ತಾರೋ ಇಲ್ಲವೋ ಎಂಬ ಬಗ್ಗೆ ಇನ್ನೂ ಮಾಹಿತಿ ನೀಡಿಲ್ಲ ಎಂದು ತಿಳಿಸಿದ್ದಾರೆ.
ಸ್ವಾತಿ ಮಲಿವಾಲ್ ಅವರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಆಪ್ತ ಬಿಭವ್ ಕುಮಾರ್ (Bibhav Kumar) ಅವರನ್ನು ಪೊಲೀಸರು ಬಂಧಿಸಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಇದನ್ನೂ ಓದಿ: ರಾಗಾ ಒಬ್ಬ ಮಹಾನ್ ವ್ಯಕ್ತಿ, ಗಾಂಧೀಜಿ ಕನಸು ನನಸು ಮಾಡ್ತಿದ್ದಾರೆ: ಆಚಾರ್ಯ ಪ್ರಮೋದ್ ಕೃಷ್ಣಂ ಕಿಡಿ
ಪ್ರಕರಣ ಸಂಬಂಧ ಬುಧವಾರ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದ ಕೇಜ್ರಿವಾಲ್ ಅವರು, ನ್ಯಾಯಯುತ ತನಿಖೆ ಆಗಬೇಕು ಎಂದು ಕೋರಿದ್ದರು.