ಇಂಡಿಯಾ ಒಕ್ಕೂಟದ ನಾಯಕರಿಗೆ ಪತ್ರ ಬರೆದು ಭೇಟಿಗೆ ಸಮಯ ಕೇಳಿದ ಸ್ವಾತಿ ಮಲಿವಾಲ್

Public TV
1 Min Read
Swati Maliwal

ನವದೆಹಲಿ: ಆಪ್ ನಾಯಕಿ, ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ (Swati Maliwal) ರಾಹುಲ್ ಗಾಂಧಿ (Rahul Gandhi) ಸೇರಿದಂತೆ ಇಂಡಿಯಾ (INDIA) ಒಕ್ಕೂಟದ ಪ್ರಮುಖ ನಾಯಕರಿಗೆ ಪತ್ರ ಬರೆದು ಭೇಟಿಗೆ ಸಮಯ ನೀಡುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ಖುದ್ದು ಅವರೇ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ನಾನು ಕಳೆದ 18 ವರ್ಷಗಳಿಂದ ತಳಹಂತದಲ್ಲಿ ಜನರ ನಡುವೆ ಕೆಲಸ ಮಾಡಿದ್ದೇನೆ. ಕಳೆದ ಒಂಬತ್ತು ವರ್ಷಗಳಲ್ಲಿ ಮಹಿಳಾ ಆಯೋಗದಲ್ಲಿ 1.7 ಲಕ್ಷ ಪ್ರಕರಣಗಳನ್ನು ಆಲಿಸಿದ್ದೇನೆ. ಮಹಿಳಾ ಆಯೋಗವನ್ನು ಅತ್ಯಂತ ಉನ್ನತ ಸ್ಥಾನಕ್ಕೆ ಏರಿಸಿದೆ. ಮುಂದೆಯೂ ನಾನು ಯಾರಿಗೂ ಹೆದರುವುದಿಲ್ಲ, ಯಾರ ಮುಂದೆಯೂ ತಲೆಬಾಗುವುದಿಲ್ಲ ಎಂದರು. ಇದನ್ನೂ ಓದಿ: ಪ್ರಿಯಾಂಕಾ ಗಾಂಧಿ ವಯನಾಡಿನಿಂದ ಸ್ಪರ್ಧಿಸುತ್ತಿರುವುದು ನನಗೆ ಖುಷಿ ತಂದಿದೆ: ರಾಬರ್ಟ್ ವಾದ್ರಾ

rahul gandhi 1

ಆದರೆ ನನಗೆ ಮುಖ್ಯಮಂತ್ರಿಗಳ ಮನೆಯಲ್ಲಿ ಮೊದಲು ಕೆಟ್ಟದಾಗಿ ಥಳಿಸಲಾಯಿತು. ನಂತರ ನನ್ನ ಚಾರಿತ್ರ್ಯಹರಣ ಮಾಡಿರುವುದು ತುಂಬಾ ದುಃಖಕರವಾಗಿದೆ. ಇಂದು ನಾನು ಈ ವಿಷಯದ ಬಗ್ಗೆ ಮಾತನಾಡಲು ಇಂಡಿಯಾ ಒಕ್ಕೂಟದ ಎಲ್ಲಾ ದೊಡ್ಡ ನಾಯಕರಿಗೆ ಪತ್ರ ಬರೆದಿದ್ದೇನೆ. ನಾನು ಎಲ್ಲರಿಗೂ ಭೇಟಿಗೆ ಸಮಯ ಕೇಳಿದ್ದೇನೆ ಎಂದು ಅವರು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆ ಎಂಬ ಭರವಸೆಯಿದೆ: ರಚಿತಾ ರಾಮ್

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಆಪ್ತ ಸಹಾಯಕ ಬಿಭವ್ ಕುಮಾರ್ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದ ಸ್ವಾತಿ ಮಲಿವಾಲ್ ದೂರು ದಾಖಲಿಸಿದ್ದರು. ಪ್ರಕರಣದ ತನಿಖೆ ಆರಂಭಿಸಿರುವ ದೆಹಲಿ ಪೊಲೀಸರು ಬಿಭವ್ ಕುಮಾರ್ ಬಂಧಿಸಿದ್ದು, ನ್ಯಾಯಂಗ ಬಂಧನಕ್ಕೆ ನೀಡಿದ್ದಾರೆ. ಈ ನಡುವೆ ಆಪ್ ನಾಯಕರು ಸ್ವಾತಿ ಮಲಿವಾಲ್ ವಿರುದ್ಧ ತಿರುಗಿ ಬಿದಿದ್ದಾರೆ. ಇದನ್ನೂ ಓದಿ: ರೀಲ್ಸ್‌ಗಾಗಿ ಡ್ರೈವಿಂಗ್ ಮಾಡಲು ಹೋಗಿ ಆಕ್ಸಿಲರೇಟರ್ ಒತ್ತಿದ ಯುವತಿ- ಮುಂದೇನಾಯ್ತು..?

Share This Article