ಇಂದು ಸಂಜೆ 5 ಕ್ಕೆ ಬಿಹಾರ ಸಿಎಂ ಆಗಿ ನಿತೀಶ್‌ ಕುಮಾರ್‌ ಪ್ರಮಾಣ ವಚನ – BJPಯ ಇಬ್ಬರು ಡಿಸಿಎಂ

Public TV
1 Min Read
nitish kumar bihar 1

ಪಾಟ್ನ: ಬಿಹಾರ (Bihar) ಸಿಎಂ ಸ್ಥಾನಕ್ಕೆ ನಿತೀಶ್‌ ಕುಮಾರ್‌ (Nitish Kumar) ರಾಜೀನಾಮೆ ನೀಡಿದ ಬೆನ್ನಲ್ಲೇ, ಬಿಜೆಪಿ ಶಾಸಕರ ಬೆಂಬಲದ ಪತ್ರವನ್ನು ರಾಜ್ಯಪಾಲರಿಗೆ ನೀಡಿದ್ದಾರೆ. ಇಂದೇ ಸಂಜೆ 5 ಗಂಟೆಗೆ ಬಿಹಾರ ಸಿಎಂ ಆಗಿ ಮತ್ತೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಭಾನುವಾರ ಸಂಜೆ ನಡೆಯಲಿರುವ ಪ್ರಮಾಣ ವಚನ ಸಮಾರಂಭದಲ್ಲಿ ಬಿಜೆಪಿಯ ಇಬ್ಬರು ಉಪಮುಖ್ಯಮಂತ್ರಿಗಳೊಂದಿಗೆ ನಿತೀಶ್‌ ಕುಮಾರ್‌ 9ನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿಯ ಸಾಮ್ರಾಟ್‌ ಚೌಧರಿ ಮತ್ತು ವಿಜಯ್‌ ಸಿನ್ಹಾ ಡಿಸಿಎಂ ಆಗಲಿದ್ದಾರೆ. ಇದನ್ನೂ ಓದಿ: ಮಹಾಘಟಬಂಧನ್‌ನಿಂದ ಆಚೆ ಬಂದಿದ್ದೇನೆ – ನಿತೀಶ್ ಕುಮಾರ್

nitish kumar resigns

ಏತನ್ಮಧ್ಯೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಬಿಹಾರಕ್ಕೆ ಆಗಮಿಸಲಿದ್ದು, ಕೇಂದ್ರ ಸಚಿವ ನಿತ್ಯಾನಂದ ರೈ ಮತ್ತು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಮತ್ತು ಸಂಸದ ಸಂಜಯ್ ಜೈಸ್ವಾಲ್ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಳ್ಳಲಿದ್ದಾರೆ.

ಸುಶೀಲ್ ಮೋದಿ ಮತ್ತು ರೇಣು ಕುಮಾರಿ ಅವರು ಉಪಮುಖ್ಯಮಂತ್ರಿ ಹುದ್ದೆಗೆ ಪೈಪೋಟಿಯಲ್ಲಿದ್ದಾರೆ ಎನ್ನಲಾಗಿತ್ತು. ರಾಜ್ಯದ ಬಿಜೆಪಿ ವಕ್ತಾರ ಸುಮಿತ್ ಶಶಾಂಕ್ ಅವರು ಭಾನುವಾರ ಮಾತನಾಡಿ, ಸಾಮ್ರಾಟ್ ಚೌಧರಿ ಮತ್ತು ವಿಜಯ್ ಸಿನ್ಹಾ ಅವರು ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Breaking: ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ – ಮೈತ್ರಿ ಸರ್ಕಾರ ಪತನ

ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ನಂತರ ರಾಜಕೀಯ ಪ್ರಕ್ಷುಬ್ಧತೆಯ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿದ ನಿತೀಶ್ ಕುಮಾರ್, ಒಂದೂವರೆ ವರ್ಷಗಳ ಹಿಂದೆ ರಚಿಸಲಾದ ‘ಮಹಾಘಟಬಂಧನ್’ (ಮಹಾಮೈತ್ರಿಕೂಟ) ಪರಿಸ್ಥಿತಿಯು ಉತ್ತಮವಾಗಿಲ್ಲ ಎಂದು ಹೇಳಿದ್ದರು.

Share This Article