ಮಕರ ಸಂಕ್ರಾಂತಿಯಲ್ಲಿ ಪೊಂಗಲ್ ಬಹಳ ವಿಶೇಷ. ಸಾಮಾನ್ಯವಾಗಿ ದಕ್ಷಿಣದ ಎಲ್ಲಾ ರಾಜ್ಯಗಳಲ್ಲಿ ಪೊಂಗಲ್ ತಯಾರಿಸುತ್ತಾರೆ. ಪೊಂಗಲ್ ಆರೋಗ್ಯಕ್ಕೂ ಉತ್ತಮ. ಅನ್ನ, ಬೇಳೆಯೊಂದಿಗೆ ಬೆಲ್ಲ ಬೆರೆಸಿ ಸಿಹಿ ಪೊಂಗಲ್ ಕೂಡ ತಯಾರಿಸಬಹುದು. ಇವತ್ತಿನ ನಮ್ಮ ರೆಸಿಪಿಯಲ್ಲಿ ಸ್ವೀಟ್ ಪೊಂಗಲ್ ಯಾವ ರೀತಿ ತಯಾರಿಸುವುದು ಎಂಬುದನ್ನು ತಿಳಿಸಿಕೊಡುತ್ತಿದ್ದೇವೆ. ಹಾಗಿದ್ರೆ ಇದನ್ನು ಯಾವ ರೀತಿ ತಯಾರಿಸುವುದು ಎಂಬುದನ್ನು ತಿಳಿದುಕೊಳ್ಳಿ.
Advertisement
ಬೇಕಾಗುವ ಸಾಮಗ್ರಿಗಳು:
ಹೆಸರುಬೇಳೆ- 1 ಕಪ್
ಅಕ್ಕಿ – 1 ಕಪ್
ಪುಡಿ ಮಾಡಿದ ಬೆಲ್ಲ/ ಸಕ್ಕರೆ – 1 ಕಪ್
ಏಲಕ್ಕಿ – 4
ದ್ರಾಕ್ಷಿ, ಗೋಡಂಬಿ – 50 ಗ್ರಾಂ
ತುಪ್ಪ – 4 ಚಮಚ
Advertisement
Advertisement
ಮಾಡುವ ವಿಧಾನ:
* ಮೊದಲಿಗೆ ಒಂದು ಬಾಣಲೆಯಲ್ಲಿ ಹೆಸರುಬೇಳೆಯನ್ನು ಹಾಕಿ ಅದು ಕೆಂಪಾಗುವ ತನಕ ಕಡಿಮೆ ಉರಿಯಲ್ಲಿ ಹುರಿಯಿರಿ.
* ಈಗ ಕುಕ್ಕರ್‌ನಲ್ಲಿ ತೊಳೆದ ಅಕ್ಕಿ ಮತ್ತು ಹುರಿದ ಹೆಸರುಬೇಳೆ ಹಾಕಿ 4 ಕಪ್ ನೀರು ಹಾಕಿ ಒಂದು ವಿಷಲ್ ಬರುವ ತನಕ ಬೇಯಿಸಿ.
* ಮತ್ತೊಂದು ಪ್ಯಾನ್‌ನಲ್ಲಿ ಪುಡಿಮಾಡಿದ ಬೆಲ್ಲ ಹಾಕಿ ಕರಗಿಸಿ. (ಬೆಲ್ಲದಲ್ಲಿ ಕಲ್ಮಶವಿದ್ದರೆ ಒಮ್ಮೆ ಶೋಧಿಸಿಕೊಳ್ಳಿ)
* ಈಗ ಬೆಂದ ಅಕ್ಕಿ ಮತ್ತು ಬೇಳೆಗೆ ಬೆಲ್ಲದ ಪಾಕ ಹಾಕಿ ಚೆನ್ನಾಗಿ ತಿರುವಿ.
* ನಂತರ ಪುಡಿ ಮಾಡಿದ ಏಲಕ್ಕಿ, ತುಪ್ಪದಲ್ಲಿ ಕರಿದ ದ್ರಾಕ್ಷಿ ಗೋಡಂಬಿ ಹಾಕಿ ಒಲೆಯಿಂದ ಇಳಿಸಿ.
(ಇದಕ್ಕೆ ಬೇಕಿದ್ದಲ್ಲಿ ಸ್ವಲ್ಪ ಪಚ್ಚ ಕರ್ಪೂರ ಮತ್ತು ಒಂದು ಚಿಟಿಕೆ ಲವಂಗದ ಪುಡಿಯನ್ನು ಸೇರಿಸಬಹುದು)
* ಈಗ ಸ್ವೀಟ್ ಪೊಂಗಲ್ ಸವಿಯಲು ಸಿದ್ಧ.
Advertisement