ನೂರು ದಿನಗಳ ಶೂಟಿಂಗ್ ಮುಗಿಸಿದ ಸ್ವೀಟಿ ರಾಧಿಕಾ ಚಿತ್ರ

Public TV
1 Min Read
radhika kumaraswamy 1

ರಾಧಿಕಾ ಕುಮಾರಸ್ವಾಮಿ (Radhika Kumaraswamy) ಅವರು ನಾಯಕಿಯಾಗಿ ನಟಿಸುತ್ತಿರುವ, ರವಿರಾಜ್ ನಿರ್ಮಾಣದ ಹಾಗೂ ಎಂ.ಶಶಿಧರ್ (Sashidhar) ನಿರ್ದೇಶನದ ‘ಅಜಾಗ್ರತ’ (Ajagrata) ಚಿತ್ರಕ್ಕೆ ನೂರು ದಿನಗಳ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಹೈದರಾಬಾದ್ ಹಾಗೂ ಮುಂಬೈನಲ್ಲಿ ಚಿತ್ರೀಕರಣವಾಗಿದೆ. ಕೆಲವು ಮಾತಿನ ಭಾಗದ ಹಾಗೂ ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದ್ದು, ಈ ತಿಂಗಳ ಕೊನೆಗೆ ಕೊನೆಯ ಹಂತದ ಚಿತ್ರೀಕರಣ ಆರಂಭವಾಗಲಿದೆ.

Ajagrata

ಇತ್ತೀಚಿಗೆ ನಿರ್ದೇಶಕ ಶಶಿಧರ್ ಅವರ ಹುಟ್ಟುಹಬ್ಬ ಹಾಗೂ ಚಿತ್ರ ನೂರು ದಿನಗಳ ಚಿತ್ರೀಕರಣವನ್ನು ಯಶಸ್ವಿಯಾಗಿ ಪೂರೈಸಿದೆ. ಈ ಎರಡು ಸಂಭ್ರಮಗಳನ್ನು ಸಂಭ್ರಮಿಸಲು ನಿರ್ಮಾಪಕ ರವಿರಾಜ್ ಹಾಗೂ ರಾಧಿಕಾ ಕುಮಾರಸ್ವಾಮಿ ಅವರು ನಿರ್ದೇಶಕರಿಂದ ನೂರು ಕೇಜಿ ಕೇಕ್ ಕಟ್ ಮಾಡಿಸಿದರು. ಇಡೀ ಚಿತ್ರತಂಡ ಈ ಸಂದರ್ಭದಲ್ಲಿ ಭಾಗಿಯಾಗಿತ್ತು.

radhika kumaraswamy

ಬಾಲಿವುಡ್ ನ ಖ್ಯಾತ ನಟ ಶ್ರೇಯಸ್ ತಲ್ಪಾಡೆ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿಯಾಗಿ ರಾಧಿಕಾ ಕುಮಾರಸ್ವಾಮಿ  ಅಭಿನಯಿಸುತ್ತಿದ್ದಾರೆ.  ಹೆಸರಾಂತ ನಟ ಬಾಬಿ ಸಿಂಹ ಸಹ ಈಗ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ.  ರಾವ್ ರಮೇಶ್‌, ಸುನೀಲ್, ಆದಿತ್ಯ ಮೆನನ್, ರಾಘವೇಂದ್ರ ಶ್ರವಣ್, ದೇವರಾಜ್, ಜಯಪ್ರಕಾಶ್, ವಿನಯಾಪ್ರಸಾದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ತೆಲುಗು, ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ.  ಸಂದೀಪ್ ವಲ್ಲೂರಿ ಛಾಯಾಗ್ರಹಣ, ಶ್ರೀಹರಿ ಸಂಗೀತ ನಿರ್ದೇಶನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

Share This Article