ಮುಂಬೈ: ಸಾಮಾನ್ಯವಾಗಿ ಬೈಕ್‌ಗಳಲ್ಲಿ ಸಂಚರಿಸಿ ಫುಡ್ ಡೆಲಿವರಿ ಮಾಡುವುದನ್ನು ನಾವು ನೋಡಿದ್ದೇವೆ. ಆದರೆ ಇಲ್ಲೊಬ್ಬ ವ್ಯಕ್ತಿ ಕುದುರೆ ಸವಾರಿ ಮಾಡಿ ಫುಡ್ ಡೆಲಿವರಿ ಮಾಡಿದ್ದಾನೆ. ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಸಖತ್ ವೈರಲ್ ಆಗಿದ್ದು, ಇದಕ್ಕೆ ಕಂಪನಿ ಅಚ್ಚರಿ ವ್ಯಕ್ತಪಡಿಸಿದೆ.
ಡೆಲಿವರಿ ಬಾಯ್ ಸುಳಿವು ಕೊಟ್ಟವರಿಗೆ ಬಹುಮಾನ
ಸ್ವಿಗ್ಗಿ ಕಂಪನಿಯ ಬ್ಯಾಗ್ ಹಾಕಿಕೊಂಡು ಕುದುರೆ ಸವಾರಿ ಮಾಡಿ ಫುಡ್ ಡೆಲಿವರಿ ಮಾಡಿದವನ ಸುಳಿವು ಕೊಟ್ಟವರಿಗೆ 5,000 ರೂ. ಬಹುಮಾನ ನೀಡಲಾಗುವುದು ಎಂದು ಸ್ವಿಗ್ಗಿ ಕಂಪನಿ ಘೋಷಿಸಿದೆ. ಇದನ್ನೂ ಓದಿ: ಗುಂಡು ಹಾರಿಸಿ ಮುಸ್ಲಿಂ ಆಧ್ಯಾತ್ಮಿಕ ನಾಯಕ ಸೂಫಿ ಬಾಬಾನ ಹತ್ಯೆ
Advertisement
Advertisement
ಮುಂಬೈನಲ್ಲಿ ಮಳೆಯ ನಡುವೆಯೂ ಆಹಾರವನ್ನು ತಲುಪಿಸಲು ಕುದುರೆಯ ಮೇಲೆ ಸವಾರಿ ಮಾಡುತ್ತಿರುವ ಡೆಲಿವರಿ ಬಾಯ್ ಗುರುತಿಸಲು ಸಹಾಯ ಮಾಡುವಂತೆ ಸಾರ್ವಜನಿಕರಲ್ಲಿ ಕಂಪನಿ ಮನವಿ ಮಾಡಿದೆ. ಈಗ ವೈರಲ್ ಆಗಿರುವ ವೀಡಿಯೋದಲ್ಲಿ ಆತನನ್ನು ಗುರುತಿಸಲು ಸಾಧ್ಯವಾಗಿಲ್ಲ ಎಂದು ಕಂಪನಿ ಹೇಳಿದೆ.
Advertisement
ಮುಂಬೈ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಸ್ವಿಗ್ಗಿ ಕಂಪನಿಯ ಬ್ಯಾಗ್ ಹಾಕಿಕೊಂಡು ಕುದುರೆ ಸವಾರಿ ಮಾಡಿ ಆರ್ಡರ್ ತಲುಪಿಸುತ್ತಿರುವ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಕಂಪನಿ, ಆತನ ಬಗ್ಗೆ ನಮಗೆ ಸರಿಯಾದ ಮಾಹಿತಿ ಇಲ್ಲ. ಮಾಹಿತಿ ಸಿಕ್ಕರೆ ತಿಳಿಸಿ. ಅಂತಹವರಿಗೆ ಸೂಕ್ತ ಬಹುಮಾನ ನೀಡುವುದಾಗಿ ಸ್ವಿಗ್ಗಿ ತಿಳಿಸಿದೆ. ಇದನ್ನೂ ಓದಿ: ಡೋಲೋ 650 ಮಾತ್ರೆ ತಯಾರಿಕಾ ಸಂಸ್ಥೆ ಮೈಕ್ರೋ ಲ್ಯಾಬ್ಸ್ ಮೇಲೆ ಐಟಿ ದಾಳಿ
Advertisement
ಸ್ವಿಗ್ಗಿ ಕಂಪನಿ ಪೋಸ್ಟ್‌ಗೆ ಅನೇಕರು ನಾನಾ ರೀತಿಯಲ್ಲಿ ಕಾಮೆಂಟ್‌ಗಳನ್ನು ಮಾಡುತ್ತಿದ್ದಾರೆ. ʻನೀವು ಯಾರನ್ನೋ ಹುಡುಕುತ್ತಿದ್ದೀರಿ ಎನಿಸುತ್ತೆʼ ಎಂದು ಒಬ್ಬರು ಕಾಮೆಂಟ್ ಮಾಡಿದ್ದಾರೆ. ʼಈ ವೈರಲ್ ವೀಡಿಯೋ ಬಗ್ಗೆ ನೀವೇನು ಹೇಳುತ್ತೀರಿʼ ಎಂದು ಮತ್ತೊಬ್ಬರು ಕಂಪನಿಗೆ ಪ್ರಶ್ನೆ ಹಾಕಿದ್ದಾರೆ.